IMG 20211123 WA0006

ವಿಧಾನಪರಿಷತ್ ಚುನಾವಣೆ: ಗೋಪಿನಾಥ್ ರೆಡ್ಡಿ ಅವರಿಂದ ನಾಮಪತ್ರ ಸಲ್ಲಿಕೆ..

POLATICAL STATE

ಗೋಪಿನಾಥ್ ರೆಡ್ಡಿ ಅವರಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿ ಬೆಂಗಳೂರು ನಗರ ಬಿಜೆಪಿ ಅಭ್ಯರ್ಥಿಯಾಗಿ ಬೆಂಗಳೂರು ನಗರ ವಿಭಾಗ ಪ್ರಭಾರಿಗಳಾದ ಹೆಚ್.ಎಸ್. ಗೋಪಿನಾಥ್ ರೆಡ್ಡಿ ಅವರು ಇಂದು ನಾಮಪತ್ರ ಸಲ್ಲಿಸಿದರು.
ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಅವರು ನಾಮಪತ್ರ ಸಲ್ಲಿಸಿದರು.

IMG 20211123 WA0004

ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದ ಗೌಡ, ರಾಜ್ಯದ ಸಚಿವರಾದ ಡಾ|| ಸಿ.ಎನ್. ಅಶ್ವತ್ಥನಾರಾಯಣ, ಸಂಸದರಾದ ಪಿ.ಸಿ. ಮೋಹನ್, ರಾಜ್ಯಸಭಾ ಸದಸ್ಯರಾದ ಕೆ.ಸಿ. ರಾಮಮೂರ್ತಿ, ಶಾಸಕರು ಮತ್ತು ವಿಧಾನಸಭೆಯ ಮುಖ್ಯ ಸಚೇತಕರಾದ ಸತೀಶ್ ರೆಡ್ಡಿ, ಶಾಸಕರಾದ ಅರವಿಂದ ಲಿಂಬಾವಳಿ, ಒಕ್ಕಲಿಗ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಂ. ಕೃಷ್ಣಪ್ಪ ಮತ್ತು ಗೋಪಿನಾಥ್ ರೆಡ್ಡಿ ಅವರ ಪತ್ನಿ ಶ್ರೀಮತಿ ಗಾಯತ್ರಿ ಗೋಪಿನಾಥ್ ರೆಡ್ಡಿ ಹಾಗೂ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.