IMG 20211123 WA0007

ವಿಧಾನಪರಿಷತ್ ಚುನಾವಣೆ: ಬೆಂಗಳೂರು ನಗರ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ….!

POLATICAL STATE

 

ಬೆಂಗಳೂರು: – ವಿಧಾನ ಪರಿಷತ್ ಚುನಾವಣೆ ಬೆಂಗಳೂರು ನಗರ ಅಭ್ಯರ್ಥಿ ಯೂಸುಫ್ ಷರೀಫ್ ಅವರು ಇಂದು ನಾಮಪತ್ರ ಸಲ್ಲಿಸಿದರು.

ಬೆಂಗಳೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವ ವೇಳೆ  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಅವರ ಸಮ್ಮುಖದಲ್ಲಿ ಚುನಾವಣಾಧಿಕಾರಿಯೂ ಆಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಅವರಿಗೆ ನಾಮಪತ್ರ ಸಲ್ಲಿಸಿದರು. ಶಾಸಕ ಶಿವಣ್ಣ, ಎಂಎಲ್ಸಿ ನಾರಾಯಣಸ್ವಾಮಿ ಜತೆಗಿದ್ದರು.