IMG 20211125 WA0016

JD(S) :ಬಿಜೆಪಿ-ಕಾಂಗ್ರೆಸ್‌ ನಡುವೆ ಒಳ ಒಪ್ಪಂದ ಆಗಿದೆ…!

POLATICAL STATE

ಪ್ರತಿ ಚುನಾವಣೆ ಬಂದಾಗಲೂ ಕಾಂಗ್ರೆಸ್‌ ನಾಯಕರಿಗೆ *ಜೆಡಿಎಸ್‌ ಜ್ವರ* ಬರುತ್ತೆ!!
*ಬಿಜೆಪಿ-ಕಾಂಗ್ರೆಸ್‌ ನಡುವೆ ಒಳ ಒಪ್ಪಂದ ಆಗಿದೆ; ಮಂಡ್ಯ-ಕೊಡಗು ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳೇ ಇದಕ್ಕೆ ಸಾಕ್ಷಿ‌*
ಸಚಿವ ಡಾ.ಕೆ.ಸುಧಾಕರ್‌ ಆಕಾಶದಲ್ಲಿದ್ದಾರೆ, ಮುಂದೆ ಜನರೇ ತೀರ್ಮಾನ ಮಾಡುತ್ತಾರೆ..

ಚಿಕ್ಕಬಳ್ಳಾಪುರ: ಪ್ರತಿ ಬಾರಿ ಚುನಾವಣೆ ಬಂದಾಗಲೂ ಕಾಂಗ್ರೆಸ್‌ ಪಕ್ಷದ ನಾಯಕರಿಗೆ ಜೆಡಿಎಸ್‌ ಜ್ವರ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ ನಡೆಸಿದರು.

ಶಿಡ್ಲಘಟ್ಟ ತಾಲೂಕಿನ ಮೇಲೂರು ಗ್ರಾಮದಲ್ಲಿರುವ ಪಕ್ಷದ ಮುಖಂಡ ರವಿ ಅವರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; “ಯಾವ ಚುನಾವಣೆಯೇ ಬರಲಿ, ಕಾಂಗ್ರೆಸ್‌ ನಾಯಕರಿಗೆ ತಕ್ಷಣ ನೆನಪಾಗುವುದು ಜೆಡಿಎಸ್‌ ಪಕ್ಷ ಮಾತ್ರ. ಜೆಡಿಎಸ್‌-ಬಿಜೆಪಿ ಒಪ್ಪಂದ ಮಾಡಿಕೊಂಡಿವೆ ಎಂದು ಆ ಪಕ್ಷದ ನಾಯಕರು ಹೇಳುತ್ತಾರೆ. ಆ ಚುನಾವಣೆ ಮುಗಿದ ಮೇಲೆ ಆ ವಿಷಯವನ್ನು ಅಲ್ಲಿಯೇ ಕೈಬಿಡುತ್ತಾರೆ. ಅವರು ಪದೇಪದೆ ಯಾಕೆ ಈ ರೀತಿಯ ಅಪಪ್ರಚಾರ ನಡೆಸುತ್ತಿದ್ದಾರೆ ಎನ್ನುವುದು ನನಗಂತೂ ಅರ್ಥವಾಗುತ್ತಿಲ್ಲ” ಎಂದರು.IMG 20211125 WA0017

ಒಂದು ವೇಳೆ ನಮ್ಮ ಪಕ್ಷ ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡಿದ್ದಿದ್ದರೆ ಜೆಡಿಎಸ್‌ ಸ್ಪರ್ಧೆ ಮಾಡಿರುವ ಏಳು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಹಾಕುತ್ತಿತ್ತೇ? ಈ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕೋಲಾರ-ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿಗೆ ಮತಗಳೇ ಇಲ್ಲದಿದ್ದರೂ ಅಭ್ಯರ್ಥಿಯನ್ನು ನಿಲ್ಲಿಸಲಾಗಿದೆ. ಚುನಾವಣೆಯಲ್ಲಿ ನಮ್ಮನ್ನು ಸೋಲಿಸಬೇಕು ಎಂದು ಬಿಜೆಪಿ ನಾಯಕರು ಕೂಡ ಪ್ರಯತ್ನ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಕೂಡ ಯತ್ನಿಸುತ್ತಿದೆ. ಹೀಗಿದ್ದರೂ ಕಾಂಗ್ರೆಸ್‌ ನಾಯಕರು ವಿನಾಕಾರಣ ನಮ್ಮ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆಂದು ಹೆಚ್‌ʼಡಿಕೆ ಬೇಸರ ವ್ಯಕ್ತಪಡಿಸಿದರು.

ಒಳ ಒಪ್ಪಂದ ಎಂದರೆ ಇದು!:

ಕಳೆದ ಲೋಕಸಭೆ ಚುನಾವಣೆ ವೇಳೆ ಹಾಸನದಲ್ಲಿ ಕಾಂಗ್ರೆಸ್‌ ಸರಕಾರದಲ್ಲಿ ಮಂತ್ರಿಯಾಗಿದ್ದ ನಾಯಕನನ್ನು ಬಿಜೆಪಿಗೆ ಕಳಿಸಿ ಅಭ್ಯರ್ಥಿಯನ್ನಾಗಿ ಮಾಡಿಸುತ್ತಾರೆ. ಈಗ ಅದೇ ನಾಯಕನ ಪುತ್ರ ಕೊಡಗಿನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಈಗ ಇಲ್ಲಿ ಅಪ್ಪ ಬಿಜೆಪಿ ಪಾರ್ಟಿ, ಮಗ ಕಾಂಗ್ರೆಸ್‌ ಪಾರ್ಟಿ! ಇದೇನು ಒಪ್ಪಂದ? ಜನರಿಗೆ ಎಲ್ಲವೂ ಚೆನ್ನಾಗಿ ಅರ್ಥವಾಗುತ್ತಿದೆ. ನಿಜಕ್ಕೂ ಒಳ ಒಪ್ಪಂದ ಎಂದರೆ ಇದೇ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.IMG 20211125 WA0015

ಬಿಜೆಪಿ ಸರಕಾರದ ಮಂತ್ರಿಯೊಬ್ಬರಿಗೆ ಆಪ್ತ ಕಾರ್ಯದರ್ಶಿ ಆಗಿದ್ದ ವ್ಯಕ್ತಿಗೆ ಮಂಡ್ಯದಲ್ಲಿ ಕಾಂಗ್ರೆಸ್‌ ಪಕ್ಷವು ಟಿಕೆಟ್‌ ನೀಡಿದೆ. ಒಳ ಒಪ್ಪಂದ ಜೆಡಿಎಸ್-ಬಿಜೆಪಿ ನಡುವೆ ಆಗಿದೆಯೋ ಅಥವಾ ಕಾಂಗ್ರೆಸ್-ಬಿಜೆಪಿ ನಡುವೆ ಆಗಿದೆಯೋ? ಎನ್ನುವುದನ್ನು ಜನತೆಯೇ ತೀರ್ಮಾನ ಮಾಡಲಿ. ಇನ್ನಾದರೂ ಕಾಂಗ್ರೆಸ್‌ ಪಕ್ಷದ ನಾಯಕರು ಜೆಡಿಎಸ್‌ ಬಗ್ಗೆ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಅವರು ತಾಕೀತು ಮಾಡಿದರು.

ಕಳೆದ ಬಾರಿ ಕೋಲಾರ-ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿಯನ್ನು ಮತದಾರರು ಗೆಲ್ಲಿಸಿದ್ದರು. ಆದರೆ, ಪ್ರತಿ ಬಾರಿ ಚುನಾವಣೆ ಬಂದಾಗ ಕಾಂಗ್ರೆಸ್‌ ಪಕ್ಷದ ನಾಯಕರು ನಮ್ಮ ಪಕ್ಷದ ವಿರುದ್ಧ ಕುತಂತ್ರಗಳನ್ನು ಹೂಡುತ್ತಲೇ ಇದ್ದಾರೆ. ಈ ಚುನಾವಣೆ ಇಂಥ ಕುತಂತ್ರಗಳಿಗೆ ಮತದಾರರು ತಕ್ಕ ಉತ್ತರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಮನವಿ ಮಾಡಿದರು.

ಈ ಸಲ ಸ್ಪರ್ಧೆ ಮಾಡಿರುವ ಜೆಡಿಎಸ್‌ ಅಭ್ಯರ್ಥಿ ವಕ್ಕಲೇರಿ ರಾಮು ಬಗ್ಗೆ ಜನರಲ್ಲಿ ಉತ್ತಮ ಅಭಿಪ್ರಾಯವಿದೆ, ಅನುಕಂಪವೂ ಇದೆ. ಅವರು ಸಮರ್ಥ ಅಭ್ಯರ್ಥಿಯಾಗಿದ್ದು, ಖಂಡಿತಾ ಗೆಲುವು ಸಾಧಿಸಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದ ಅವರು; ನಾಳೆ ನಾನು ಪುನಾ ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡುತ್ತಿದ್ದೇನೆ ಎಂದರು.

ಮಂತ್ರಿಗಳ ನೆರೆ ವೀಕ್ಷಣೆ ವೈಖರಿಗೆ ತರಾಟೆ:

ಕಳೆದ ಅನೇಕ ದಿನಗಳಿಂದ ಜಿಲ್ಲೆಯಲ್ಲಿ ಮಳೆಯಾಗಿ ಜನರು ಅತೀವ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಮಂತ್ರಿಗಳ ನೆರೆ ವೀಕ್ಷಣೆ ಹೇಗಿದೆ ಎಂದರೆ, ಬಂದ ಪುಟ್ಟಾ.. ಹೋದ ಪುಟ್ಟಾ ಎನ್ನುವಂತಿದೆ. ಹಿಂದೆ ನೆರೆ ಬಂದಾಗಲೇ ಮನೆ ಕಳೆದುಕೊಂಡವರಿಗೆ, ಬೆಳೆ ನಷ್ಟವಾದರಿಗೆ ಇನ್ನೂ ಪರಿಹಾರ ನೀಡಲಿಲ್ಲ. ಈಗ ಮನೆ ಕಳೆದುಕೊಂಡವರಿಗೆ ಐದು ಲಕ್ಷ ರೂ. ಪರಿಹಾರ ಕೋಡಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಮೂರು ವರ್ಷಗಳ ಹಿಂದೆಯೇ ಘೋಷಣೆ ಮಾಡಿದ್ದ ಹಣವನ್ನೇ ಇನ್ನೂ ಬಿಡುಗಡೆ ಮಾಡಿಲ್ಲ. ಈಗ ಬಿಡುಗಡೆ ಮಾಡುತ್ತೆ ಅನ್ನುವುದಕ್ಕೆ ಖಾತ್ರಿ ಏನಿದೆ? ಈ ಸರಕಾರ ಬರೀ ಘೋಷಣೆಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಕಟುವಾಗಿ ಟೀಕಿಸಿದರು.IMG 20211125 WA0018

ಮಳೆ ಸಂತ್ರಸ್ತರಿಗೆ ಸಚಿವ ಡಾ,ಕೆ.ಸುಧಾಕರ್‌ ಅವರು ಧಮ್ಕಿ ಹಾಕಿರುವ ವಿಷಯದ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು ಹೇಳಿದ್ದಿಷ್ಟು;

ಜಿಲ್ಲಾ ಉಸ್ತುವಾರಿ ಸಚಿವರಿಗೆ ಜನರ ಬವಣೆ ಬಗ್ಗೆ ಗೊತ್ತಿಲ್ಲ. ಅವರು ಆಕಾಶದಲ್ಲಿದ್ದಾರೆ. ಅವರ ಬಗ್ಗೆ ನನಗೆ ಎಲ್ಲ ಮಾಹಿತಿ ಇದೆ. ಮುಂದಿನ ದಿನಗಳಲ್ಲಿ ಅವರ ಬಗ್ಗೆ ಜನವೇ ತೀರ್ಮಾನ ಮಾಡುತ್ತಾರೆ. ಇವರೆಲ್ಲಾ ಹಣದ ಮೂಲಕ ಏನನ್ನಾದರೂ ಸಾಧಿಸಬಹುದು ಎಂದು ಭಾವಿಸಿದ್ದಾರೆ. ಇವತ್ತು ಹಣ ಮಾಡಿಟ್ಟರೆ, ಚುನಾವಣೆ ಬಂದಾಗ ಹಣ ಹಂಚಿ ಜನರನ್ನು ಕೊಂಡುಕೊಳ್ಳಬಹುದು ಎಂದು ಅವರು ಭಾವಿಸಿದಂತಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ-ಕೋಲಾರದ ಇದೇ ಜನವೇ ಹಣವನ್ನು ಧಿಕ್ಕರಿಸಿ ಹಣ ಬಲಕ್ಕಿಂತ ಜನ ಬಲವೇ ದೊಡ್ಡದು ಎಂದು ಸಾಬೀತು ಮಾಡಲಿದ್ದಾರೆ” ಎಂದರು.

ಮಳೆಯಿಂದ ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಲ್ಲಿ ಭಾರೀ ಹಾನಿಯಾಗಿದೆ. ಸರಕಾರ ಕೂಡಲೇ ಸ್ಪಂದಿಸಬೇಕು. ಈಗಾಗಲೇ ಮುಖ್ಯಮಂತ್ರಿಗಳು ಹಾಗೂ ಪ್ರತಿಪಕ್ಷ ನಾಯಕರು ಭೇಟಿ ನೀಡಿದ್ದಾರೆ. ಬರೀ ಭೇಟಿ ನೀಡಿದರೆ ಸಾಲದು, ಸರಕಾರ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು. ಕೇವಲ ಎನ್ಡಿಆರ್ಎಫ್ ಅಥವಾ ಎಸ್ಟಿಆರ್ಎಫ್ ನಿಯಮಗಳನ್ನು ಹೇಳುತ್ತಾ ಕೂತರೆ ಪ್ರಯೋಜನವಿಲ್ಲ. ಅಲ್ಪ ಪ್ರಮಾಣದ ಪರಿಹಾರದಿಂದ ಜನರಿಗೇನು ಉಪಯೋಗ ಎಂದು ಅವರು ಪ್ರಶ್ನಿಸಿದರು.