IMG 20211125 WA0026

ಲಸಿಕಾ ಅಭಿಯಾನವನ್ನು ತೀವ್ರಗೊಳಿಸಿ…!

Genaral STATE

*ಲಸಿಕಾ ಅಭಿಯಾನವನ್ನು ತೀವ್ರಗೊಳಿಸಿ 2 ನೇ ಡೋಸ್ ರಾಜದ್ಯ ಸರಾಸರಿಯನ್ನು*
*ಹೆಚ್ಚಿಸಲು ಮುಖ್ಯಮಂತ್ರಿಗಳ ಸೂಚನೆ:*
ಬೆಂಗಳೂರು, ನವೆಂಬರ್ 25: ಲಸಿಕಾ ಅಭಿಯಾನವನ್ನು ತೀವ್ರಗೊಳಿಸಿ 2 ನೇ ಡೋಸ್ ರಾಜದ್ಯ ಸರಾಸರಿಯನ್ನು ಹೆಚ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ಕೋವಿಡ್ ಲಸಿಕಾ ಕಾರ್ಯಕ್ರಮದ ಪ್ರಗತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳೊಂದಿಗೆ ನಡೆದ ವೀಡಿಯೋ ಸಂವಾದ ಮಾತನಾಡುತ್ತಿದ್ದರು.

ಮೊದಲನೇ ಡೋಸ್‍ನಲ್ಲಿ ರಾಜ್ಯದ ಸರಾಸರಿ ಶೇ. 90% ರಷ್ಟಿದ್ದು, ಎರಡನೇ ಡೋಸ್ ಲಸಿಕೆ ಹಾಕುವುದರಲ್ಲಿ ರಾಜ್ಯದ ಸರಾಸರಿ ಶೇ 57% ರಷ್ಟಿದೆ. ಡಿಸೆಂಬರ್ ಅಂತ್ಯದೊಳಗೆ 2 ನೇ ಡೋಸ್ ಶೇ. 70 ಕ್ಕೆ ಮುಟ್ಟಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

*ತಂಡ ರಚಿಸಿ*
ಎರಡನೇ ಡೋಸ್ ಲಸಿಕೆ ಹಾಕುವಲ್ಲಿ ಕಲಬುರ್ಗಿ ಜಿಲ್ಲೆ ಹಿಂದುಳಿದಿದ್ದು, ಬೆಂಗಳೂರು ನಗರ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಜಿಲ್ಲೆಗಳಲ್ಲಿ ಪ್ರತಿದಿನ ಜಿಲ್ಲಾಧಿಕಾರಿಗಳು ಒಂದು ಗಂಟೆ ಸಮಯವನ್ನು ಲಸಿಕಾ ಕಾರ್ಯಕ್ರಮದ ಪ್ರಗತಿಗೆ ಮೀಸಲಿಡಬೇಕು. ತಂಡಗಳನ್ನು ರಚಿಸಿ ಗ್ರಾಮಗಳಿಗೆ ಕಳುಹಿಸಿದ ಜನರ ಮನವೊಲಿಸಬೇಕು ಎಂದರು. ಜನರು ಲಸಿಕೆ ಹಾಕಿಸಿಕೊಳ್ಳಲು ಮನವೊಲಿಸಬೇಕು. ಸ್ಥಳೀಯ ಗ್ರಾಮ ಲೆಕ್ಕಿಗ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು ಹಾಗೂ ಅಗತ್ಯ ಬಿದ್ದಲ್ಲಿ ತಹಶೀಲ್ದಾರರನ್ನು ಈ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸೂಚಿಸಿದರು. ಜನರೊಂದಿಗೆ ನಿತ್ಯ ವ್ಯವಹಸರಿಸುವ ಸ್ವಯಂಸೇವಾಕರ್ತರು, ಶಿಕ್ಷಕರು, ಧಾರ್ಮಿಕ ಗುರುಗಳು, ಶಾಲಾ ಶಿಕ್ಷಕರು, ಸಹಕಾರಿ ಸಂಘಗಳ ಕಾರ್ಯದರ್ಶಿಗಳು, ಬ್ಯಾಂಕಿನ ವ್ಯವಸ್ಥಾಪಕರನ್ನು ಜನರಿಗೆ ಲಸಿಕಾ ಕಾರ್ಯಕ್ರಮದ ಮಹತ್ವದ ತಿಳಿಸಿಕೊಡಬೇಕು ಎಂದು ನಿರ್ದೇಶನ ನೀಡಿದರು.

*ಉದಾಸೀನ ಸಲ್ಲದು*:

ಕೋವಿಡ್ ಕಡಿಮೆಯಾಗಿದೆ ಎಂದ ಉದಾಸೀನ ಭಾವ ತಾಳಬಾರದು. ವಿದೇಶಗಳಲ್ಲಿ ಈಗಾಗಲೇ ಪ್ರಕರಣಗಳ ಸಂಖ್ಯೆ ಪುನ: ಹೆಚ್ಚಾಗುತ್ತಿದೆ. ಮೂರನೇ ಅಲೆಗೆ ಇಲ್ಲಿ ಅವಕಾಶ ನೀಡಬಾರದು ಎಂದು ಎಚ್ಚರಿಸಿದರು.
ಯಾವುದೇ ನೆಪಗಳನ್ನು ಹೇಳದೆ ಎರಡನೇ ಡೋಸ್ ಲಸಿಕೆ ಹಾಕಲು ಗುರಿ ನಿಗದಿಪಡಿಸಿಕೊಂಡು ಅಭಿಯಾನವನ್ನು ಚುರುಕುಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ,ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಡಾ: ಅರುಂಧತಿ ಚಂದ್ರಶೇಖರ್ ಉಪಸ್ಥಿತರಿದ್ದರು.