IMG 20211208 WA0043

ಬಿಪಿನ್ ರಾವತ್ ನಿಧನಕ್ಕೆ ಗಣ್ಯರ ಸಂತಾಪ…

NATIONAL National - ಕನ್ನಡ

ಬಿಪಿನ್ ರಾವತ್ ನಿಧನಕ್ಕೆ ಗಣ್ಯರ ಸಂತಾಪ…

*ಜನರಲ್ ಬಿಪಿನ್ ರಾವತ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ*

ಬೆಂಗಳೂರು, ಡಿಸೆಂಬರ್ 8- ದೇಶದ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಜನರಲ್ ರಾವತ್, ಅವರ ಪತ್ನಿ ಹಾಗೂ ಇತರ ಸೇನಾ ಸಿಬ್ಬಂದಿ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿರುವುದು ಅತ್ಯಂತ ಆಘಾತಕಾರಿ ಹಾಗೂ ದುರದೃಷ್ಟಕರ. ಭಗವಂತನು ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬದವರಿಗೆ ಈ ಆಘಾತವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಯವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

IMG 20211208 WA0028

 

ಸಿಡಿಎಸ್ ಬಿಪಿನ್ ರಾವತ್ ನಿಧನಕ್ಕೆ ಘನತೆವೆತ್ತ ರಾಜ್ಯಪಾಲರ ಸಂತಾಪ

ತಮಿಳುನಾಡಿನ ಕೂನೂರಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಹಾಗೂ ಇತರೆ ಸೇನಾ ಪಡೆಯ ಸಿಬ್ಬಂದಿಗಳು ಮೃತಪಟ್ಟಿರುವುದಕ್ಕೆ ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಸಂತಾಪ ಸೂಚಿಸಿದ್ದಾರೆ.

ತಮಿಳುನಾಡಿನ ಕುನೂರಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಸೇನಾ ಮುಖ್ಯಸ್ಥರಾದ ಬಿಪಿನ್ ರಾವತ್, ಅವರ ಪತ್ನಿ ಹಾಗೂ ಸೇನಾ ಪಡೆಯ ಇತರ ಸಿಬ್ಬಂದಿಗಳು ಮೃತಪಟ್ಟಿರುವುದು ಆಘಾತದ ಸಂಗತಿಯಾಗಿದ್ದು, ರಾಷ್ಟ್ರಕ್ಕೆ ನಷ್ಟವುಂಟಾಗಿದೆ.

 

ದೇಶದ ರಕ್ಷಣಾ ವಲಯಕ್ಕೆ ಸಿಡಿಎಸ್ ರಾವತ್ ಅವರ ಕೊಡುಗೆ, ನಿಸ್ವಾರ್ಥ ಸೇವೆ ಸ್ಮರಣೀಯ. ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ದೊರೆಯಲಿ ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ರಾಜ್ಯಪಾಲರು ಟ್ವೀಟ್ ಮಾಡಿದ್ದಾರೆ.

IMG 20211208 WA0042

*ಇಂದು ದೇಶಕ್ಕೆ ಅತ್ಯಂತ ದುಃಖದ ದಿನ*
*ಸೇನಾಧಿಕಾರಿಗಳು ಅಗಲಿಕೆಗೆ ಹೆಚ್’ಡಿಕೆ ಕಂಬನಿ*
ಹೆಲಿಕಾಪ್ಟರ್ ದುರಂತದಲ್ಲಿ ಜ.ಬಿಪಿನ್ ರಾವತ್ ಸೇರಿ ಉನ್ನತ ಸೇನಾಧಿಕಾರಿಗಳ ದುರ್ಮರಣ ಘಟನೆ

****
ಬೆಂಗಳೂರು: ತಮಿಳುನಾಡು ನೀಲಗಿರಿ ಜಿಲ್ಲೆಯ ಕೂನೂರು ಬಳಿ ಇಂದು ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸೇನಾ ಪಡೆಗಳ ಮುಖ್ಯಸ್ಥರಾದ (ಸಿಡಿಎಸ್) ಬಿಪಿನ್ ರಾವತ್ ಮತ್ತಿತರೆ ಉನ್ನತ ಸೇನಾಧಿಕಾರಿಗಳು ದುರಂತ ಅಂತ್ಯ ಕಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.IMG 20211208 WA0025

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ದೇಶದ ಭದ್ರತೆಗೆ ಅನನ್ಯ ಕೊಡುಗೆ ನೀಡಿರುವ ಸೇನಾಧಿಕಾರಿಗಳನ್ನು ಕಳೆದುಕೊಂಡಿರುವುದು ಆಘಾತಕಾರಿ. ಇಂದು ದೇಶಕ್ಕೆ ಅತ್ಯಂತ ದುಃಖದ ದಿನ” ಎಂದು ಹೇಳಿದ್ದಾರೆ.

ಸೇನಾ ಪಡೆಗಳ ಮುಖ್ಯಸ್ಥರಾದ (ಸಿಡಿಎಸ್) ಬಿಪಿನ್ ರಾವತ್, ಅವರ ಶ್ರೀಮತಿಯವರು, ಸೇನೆಯ ಉನ್ನತಾಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಊಟಿ ಸಮೀಪದ ಕೂನೂರು ಬಳಿ ದುರಂತಕ್ಕೀಡಾಗಿ ರಾವತ್, ಮತ್ತವರ ಶ್ರೀಮತಿ ಮಧುಲಿಕಾ ರಾವತ್ ಸೇರಿ ಇನ್ನಿತರೆ ಉನ್ನತ ಸೇನಾಧಿಕಾರಿಗಳು ಅಸುನೀಗಿರುವುದು ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ.

ದೇಶದ ರಕ್ಷಣೆಗೆ ಅನನ್ಯ ಕೊಡುಗೆ ನೀಡಿದ್ದ ಈ ಸೇನಾಧಿಕಾರಿಗಳ ದುರಂತ ಸಾವು ದೇಶದ ಪಾಲಿಗೆ ಆಘಾತಕಾರಿ ಘಟನೆ ಹಾಗೂ ಇಂದು ಅತ್ಯಂತ ದುಃಖದ ದಿನವೂ ಕೂಡ. ದುರಂತದಲ್ಲಿ ಜೀವ ಚೆಲ್ಲಿದ ಎಲ್ಲ ಸೇನಾಧಿಕಾರಿಗಳಿಗೆ ನನ್ನ ಪ್ರಣಾಮಗಳು. ಅವರೆಲ್ಲರಿಗೂ ಚಿರಶಾಂತಿ ಸಿಗಲಿ ಹಾಗೂ ದುಃಖ ಭರಿಸುವ ಶಕ್ತಿಯನ್ನು ಭಗವಂತ ಎಲ್ಲರ ಕುಟುಂಬಗಳಿಗೆ ನೀಡಲಿ ಎಂದು ಭಗವಂತನನ್ನು ಪ್ರಾರ್ಥಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿಗಳು ಟ್ವೀಟ್ ನಲ್ಲಿ ಹೇಳಿದ್ದಾರೆ.