ಬೆಂಗಳೂರು ನಗರ ಶೇ.99.86 ರಷ್ಟು ಮತದಾನ : ಜಿಲ್ಲಾಧಿಕಾರಿ ಜೆ.ಮಂಜುನಾಥ್
ಬೆಂಗಳೂರು ನಗರ ಜಿಲ್ಲೆ, ಡಿ.10 ( ಕರ್ನಾಟಕ ವಾರ್ತೆ) : ಬೆಂಗಳೂರು ನಗರ ಜಿಲ್ಲೆಯ 86 ಮತಗಟ್ಟೆಗಳಲ್ಲಿ ಬೆಂಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಾಣೆ 2021 ರಲ್ಲಿ ಶೇ.99.86 ರಷ್ಟು ಮತದಾನವಾಗಿದ್ದು, ಯಾವುದೇ ಅಹಿತಕರ ಘಟನೆ ಇಲ್ಲದಂತೆ ಶಾಂತಿಯುತವಾಗಿ ಮತದಾನ ನಡೆದಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜೆ.ಮಂಜುನಾಥ್ ಅವರು ತಿಳಿಸಿದ್ದಾರೆ.
ಮತದಾನ ಅಂತ್ಯಗೊಳ್ಳುವ ವೇಳೆಗೆ ಒಟ್ಟು 2073 ಮತದಾರರಲ್ಲಿ 2070 ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ್ದು, ಇದರಲ್ಲಿ 992 ಪುರುಷ ಮತದಾರರು, 1077 ಮಹಿಳಾ ಮತದಾರರು ಹಾಗೂ ಇತರೆ ಒಬ್ಬ ಮತದಾರರು ಮತದಾನ ಮಾಡಿದ್ದಾರೆ ಎಂದು ಅವರು ತಿಳಿಸಿದರು.