IMG 20211210 WA0067

ಪಾವಗಡ: ಅತಿಥಿ ಉಪನ್ಯಾಸಕರ ಬೇಡಿಕೆಗಳಿಗೆ ಒತ್ತಾಯಿಸಿ ಪ್ರತಿಭಟನೆ…

DISTRICT NEWS ತುಮಕೂರು

ಅತಿಥಿ ಉಪನ್ಯಾಸಕರ ಬಗ್ಗೆ ಸರ್ಕಾರದ ಮಲತಾಯಿ ದೊರಣೆ ಖಂಡಿಸಿ ಪ್ರತಿಭಟನೆ…

ಪಾವಗಡ: ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ.

ಅತಿಥಿ ಉಪನ್ಯಾಸಕರ ಬಗ್ಗೆ ಸರ್ಕಾರದ ಮಲತಾಯಿ ಧೋರಣೆ ನಿಲ್ಲಬೇಕು,ನಮ್ಮ ಬೇಡಿಕೆಗಳನ್ನು ಮಾನ್ಯ ಮಾಡಬೇಕು ಎಂದು ಆಗ್ರಹಿಸಿ ಶ್ರೀಮತಿ ವೈ ಇ ಆರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ಸರ್ಕಾರ ವರ್ಷದಲ್ಲಿ 7 ರಿಂದ 8 ತಿಂಗಳು ಮಾತ್ರ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಂಡು 11 ಸಾವಿರದಿಂದ 13 ಸಾವಿರ ರೂ ವೇತನ ನೀಡುತ್ತಿದೆ. ವೇತನವನ್ನು ಕಾಲ ಕಾಲಕ್ಕೆ ನೀಡದೆ ತಮಗೆ ತೋಚಿದಂತೆ ಯಾವಾಗಲೊ ನೀಡಲಾಗುತ್ತಿದೆ. ಇದರಿಂದ ಅತಿಥಿ ಉಪನ್ಯಾಸಕರಿಗೆ ಸಮಸ್ಯೆಯಾಗುತ್ತಿದೆ ಎಂದು ಪ್ರತಿಭಟನಾ ನಿರತರು ಆರೋಪಿಸಿದರು.

ಪರೀಕ್ಷೆ, ಮೌಲ್ಯಮಾಪನ, ಪಠ್ಯ, ಪಠ್ಯೇತರ ಚಟುವಟಕೆಗಳಿಗೂ ಅತಿಥಿ ಉಪನ್ಯಾಸಕರನ್ನು ಬಳಸಿಕೊಳ್ಳಲಾಗುತ್ತದೆ. ಆದರೆ ಕನಿಷ್ಠ ವೇತನ, ಸೇವಾ ಭದ್ರತೆ ಕಲ್ಪಿಸದೆ ಅತಿಥಿ ಉಪನ್ಯಾಸಕರಿಗೆ ಅನ್ಯಾಯವೆಸಗಲಾಗುತ್ತಿದೆ. ಸಕಾಲಕ್ಕೆ ವೇತನ ನೀಡದ ಕಾರಣ ಮನೆ ಬಾಡಿಗೆ, ಮಕ್ಕಳ ಶಿಕ್ಷಣ ಸೇರಿದಂತೆ ಜೀವನ ನಡೆಸಲೂ ಕಷ್ಟ ಪಡುವ ಸ್ಥಿತಿಯಲ್ಲಿ ನಾವಿದ್ದೇವೆ ಎಂದು ಅತಿಥಿ ಉಪನ್ಯಾಸಕರು ಅಳಲನ್ನು ತೋಡಿಕೊಂಡರು.

ಹಲವು ಬಾರಿ ಸರ್ಕಾರಕ್ಕೆ ಕನಿಷ್ಠ ವೇತನ ನೀಡಿ ಸೇವಾ ಭದ್ರತೆ ಕಲ್ಪಿಸುವಂತೆ ಮನವಿ ನೀಡಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ರಾಜ್ಯ ಸಮಿತಿಯ ಕರೆಯ ಮೇರೆಗೆ ರಾಜ್ಯಾದ್ಯಂತ ಅನಿರ್ದಿಷ್ಠಾವಧಿ ತರಗತಿ ಬಹಿಷ್ಕರಿಸಲು ತೀರ್ಮಾನಿಸಲಾಗಿದೆ ಎಂದು ಅತಿಥಿ ಉಪನ್ಯಾಸಕರು ತಿಳಿಸಿದರು.

ವರ್ಷವಿಡೀ ವೇತನ ನೀಡಬೇಕು, ವೇತನ ಪರಿಷ್ಕರಿಸಬೇಕು, ಸೇವಾ ಭದ್ರತೆ ಕಲ್ಪಿಸಬೇಕು. ಕಾಲ ಕಾಲಕ್ಕೆ ವೇತನ ನೀಡಬೇಕು ಎಂದು ಒತ್ತಾಯಿಸಿದರು. ಶಿಕ್ಷಕ ಕ್ಷೇತ್ರದಿಂದ ಗೆದ್ದಿರುವ ವೈ.ಎ.ನಾರಾಯಣಸ್ವಾಮಿ ಹಾಗೂ ಪದವೀಧರ ಕ್ಷೇತ್ರದಿಂದ ಗೆದ್ದಿರುವ ಚಿದಾನಂದಗೌಡ ಅವರ ಗಮನಕ್ಕೆ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ತಿಳಿಸಿದ್ದರು ಅವರು ಯಾವುದೇ ಅನುಕೂಲ ಮಾಡಿಕೊಟ್ಟಿಲ್ಲ ಎಂಬುದು ಅತಿಥಿ ಉಪನ್ಯಾಸಕರ ಅಳಲಾಗಿದೆ…… ಉಪನ್ಯಾಸಕರ ಸಮಸ್ಯೆಗಳಿಗೆ ಸ್ಪಂದಿಸ ಬೇಕು ಮತ್ತು
ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರಾಂಶುಪಾಲ ಡಾ. ಎನ್. ಶ್ರೀಧರ್ ಅವರಿಗೆ ಮನವಿ ಸಲ್ಲಿಸಿದರು.
ಅತಿಥಿ ಉಪನ್ಯಾಸಕರಾದ ಶ್ರೀನಿವಾಸ್, ಮಲ್ಲಯ್ಯ, ಓಬಳೇಶಪ್ಪ, ಶಂಕರನಾಯ್ಕ, ವಿಜಯಸಿಂಹ, ಅಂಜಿನಪ್ಪ, ಶಿವಕುಮಾರ್, ಪ್ರಿಯಾಂಕ, ಶೋಭ, ಪುಷ್ಪಇತರೆ ಅತಿಥಿ ಉಪನ್ಯಾಸಕರು ಮತ್ತು ಉಪನ್ಯಾಸಕಿಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು

ವರದಿ: ಶ್ರೀನಿವಾಸುಲು ಎ