IMG 20211228 WA0057

ಪಾಟರಿ ಟೌನ್ ಮೆಟ್ರೋ ನಿಲ್ದಾಣಕ್ಕೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಮನವಿ…!

DISTRICT NEWS FILM NEWS ಬೆಂಗಳೂರು

ಬೆಂಗಳೂರು : ಹೊಸದಾಗಿ ನಿರ್ಮಾಣವಾಗುತ್ತಿರುವ ಪಾಟರಿ ಟೌನ್ ಮೆಟ್ರೋ ನಿಲ್ದಾಣಕ್ಕೆ ಪುನೀತ್ ರಾಜ್ ಕುಮಾರ್ ರವರ ಹೆಸರನ್ನು ನಾಮಕರಣ ಮಾಡಬೇಕೆಂದು ಕರ್ನಾಟಕ ಬಹುಜನ ಫೆಡರೇಷನ್ ವತಿಯಿಂದ ಸ್ಥಳೀಯ ಶಾಸಕರಾದ ಅಖಂಡ ಶ್ರೀನಿವಾಸಮೂರ್ತಿ ಹಾಗೂ ಬಿಬಿಎಂಪಿ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ವೇಳೆ ಕರ್ನಾಟಕ ಬಹುಜನ ಫೆಡರೇಷನ್ ಸಂಸ್ಥಾಪಕ ಅಧ್ಯಕ್ಷರಾದ ಜಿ ಎಚ್ ಶಂಕರ್ ಮಾತನಾಡಿ ಕರುನಾಡಿನ ಹೆಮ್ಮೆಯ ಪುತ್ರ ಜನಮೆಚ್ಚುಗೆ ಪಡೆದು ಅಪ್ಪು ಎಂದೇ ಪ್ರಖ್ಯಾತಿ ಪಡೆದಿರುವ ಪುನೀತ್ ರಾಜ್ ಕುಮಾರ್ ಅವರು ಅಕಾಲಿಕ ಮರಣಕ್ಕೆ ತುತ್ತಾಗಿರುವುದು ನಾಡಿನ ಜನತೆಗೆ ನುಂಗಲಾರದ ತುತ್ತಾಗಿದೆ. 

ಪುನೀತ್ ರವರ ಮರಣಾನಂತರದಲ್ಲಿ ಅವರು ದೀನ ದಲಿತರಿಗೆ ಅನಾಥರಿಗೆ ಮಾಡಿರುವ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ಕಂಡು ನಾಡಿನ ಜನತೆ ಮೂಕವಿಸ್ಮಿತರಾಗಿದ್ದಾರೆ. ಇಷ್ಟೇ ಅಲ್ಲದೆ ತಮ್ಮ ಅಮೋಘ ಅಭಿನಯ ಮತ್ತು ನೃತ್ಯದ ಮೂಲಕ ಹಲವಾರು ಜನಮಾನಸದಲ್ಲಿ ಉಳಿಯುವ ಚಿತ್ರಗಳಲ್ಲಿ ಅಭಿನಯಿಸಿ ಸೈ ಎನ್ನಿಸಿಕೊಂಡಿದ್ದಾರೆ .

IMG 20211228 WA0058

ಇಂತಹ ಮಹಾನ್ ವ್ಯಕ್ತಿಯ ಹೆಸರನ್ನು ಪಾಟರಿ ಟೌನ್ ಮೆಟ್ರೋ ನಿಲ್ದಾಣಕ್ಕೆ ನಾಮಕರಣ ಮಾಡ ಬೇಕೆಂಬುದು ಈ ಭಾಗದ ಜನರ ಒತ್ತಾಯವಾಗಿದೆ. ಆದ್ದರಿಂದ  ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ ಹೊಸದಾಗಿ ನಿರ್ಮಾಣಗೊಂಡಿರುವ ಪಾಟರಿ ಟೌನ್ ಮೆಟ್ರೋ ನಿಲ್ದಾಣಕ್ಕೆ ಪುನೀತ್ ರಾಜ್ ಕುಮಾರ್ ರವರ ಹೆಸರನ್ನು ನಾಮಕರಣ ಮಾಡಿ ಅವರಿಗೆ ಘನತೆ ಗೌರವ ತಂದುಕೊಡಬೇಕೆಂದು ಕರ್ನಾಟಕ ಬಹುಜನ ಫೆಡರೇಶನ್ ವತಿಯಿಂದ ಈಗಾಗಲೇ ಸ್ಥಳೀಯ ಶಾಸಕರಿಗೆ ಹಾಗೂ ಬಿಬಿಎಂಪಿ ಆಯುಕ್ತರಿಗೆ ಮನವಿ ನೀಡಲಾಗಿದ್ದು ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ರವರಿಗೆ, ದೇಶದ ಪ್ರಧಾನಿಗಳಾದ ನರೇಂದ್ರ ಮೋದಿ ರವರಿಗೆ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ, ಸಂಸತ್ ಸದಸ್ಯರಾದ ಸದಾನಂದ ಗೌಡ ರವರಿಗೆ, ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಿಗೆ, ಪುನೀತ್ ರವರ ಸಹೋದರರಾದ ಡಾ. ಶಿವರಾಜ್ ಕುಮಾರ್ ರವರಿಗೆ, ಚಲನಚಿತ್ರ ವಾಣಿಜ್ಯ ಮಂಡಳಿ ವ್ಯವಸ್ಥಾಪಕ ನಿರ್ದೇಶಕರಿಗೆ ಹಾಗೂ ಅಧ್ಯಕ್ಷರಿಗೆ ಮನವಿ ಮಾಡಲಾಗುವುದು

ಎಲ್ಲಾ ಕನ್ನಡಪರ ಸಂಘಟನೆಗಳು ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಈ ಒಳ್ಳೆಯ ಕಾರ್ಯಕ್ಕೆ ಕೈಜೋಡಿಸಿ ಮೆಟ್ರೋ ನಿಲ್ದಾಣಕ್ಕೆ ಪುನೀತ್ ಹೆಸರನ್ನು ನಾಮಕರಣ ಮಾಡಲು ಸಹಕರಿಸಬೇಕೆಂದು ಸಂಘಟಕರು ಮನವಿ ಮಾಡಿದ್ದಾರೆ.