IMG 20220104 WA0041

ಕೊರೊನಾ: ರಾಜ್ಯದಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ…!

Genaral STATE

ರಾಜ್ಯದಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ…. ನೈಟ್‌ ಕರ್ಫ್ಯೂ ಮುಂದುವರಿಕೆ

ಬೆಂಗಳೂರು: ಕೊರೊನಾ-ಒಮಿಕ್ರಾನ್ ನಿಯಂತ್ರಣಕ್ಕೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ತಜ್ಞರೊಂದಿಗೆ ಸಭೆ ನಡೆದ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್ ಅವರು ಸಭೆಯ ಮುಖ್ಯಾಂಶಗಳನ್ನು ಮಾಧ್ಯಮಗಳಿಗೆ ವಿವರಿಸಿದರು.

ಬೆಂಗಳೂರಿನಲ್ಲಿ 10 ಮತ್ತು 12ನೇ ತರಗತಿ ಹೊರತುಪಡಿಸಿ ಉಳಿದೆಲ್ಲ ಕಡೆ ಆಫ್​ಲೈನ್​ ತರಗತಿ ನಿಲ್ಲುತ್ತದೆ. ಶಾಲಾ ಕಾಲೇಜುಗಳು ಆನ್​ಲೈನ್ ವಿಧಾನದಲ್ಲಿ ನಡೆಯುತ್ತದೆ.

6ನೇ ತಾರೀಖಿನಿಂದ ಜಾರಿಯಾಗುವಂತೆ ಕರ್ನಾಟಕ ರಾಜ್ಯಾದ್ಯಂತ ಎರಡು ವಾರಗಳ ಕಾಲ ವೀಕೆಂಡ್ ಕರ್ಫ್ಯೂ ಇರಲಿದೆ. ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ವೀಕೆಂಟ್ ಕರ್ಫ್ಯೂ ಇರುತ್ತದೆ. ಈ ವೇಳೆ, ಆಹಾರ ವಸ್ತು, ಹೊಟೆಲ್​ಗಳಲ್ಲಿ ಪಾರ್ಸೆಲ್​, ಅತ್ಯಗತ್ಯ ಸೇವೆಗಳು ಮಾತ್ರ ಇರುತ್ತವೆ ಎಂದು ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಂತರ ಸಚಿವರಾದ ಆರ್. ಅಶೋಕ್‌, ಡಾ.ಕೆ. ಸುಧಾಕರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. ಚಿತ್ರಮಂದಿರ, ಮಾಲ್, ಬಾರ್, ಪಬ್​ಗಳ ಒಟ್ಟು ಸಾಮರ್ಥ್ಯದ ಅರ್ಧದಷ್ಟು ಜನರಿಗೆ ಮಾತ್ರ ಪ್ರವೇಶ (50:50 ನಿಯಮ) ಇರುತ್ತದೆ. ಇಲ್ಲಿಗೆ ಭೇಟಿ ನೀಡುವವರಿಗೆ ಲಸಿಕೆ ಕಡ್ಡಾಯ ಆಗಿರಲಿದೆ. ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಲು ಡಬಲ್ ಡೋಸ್ ಕಡ್ಡಾಯ ಆಗಿರಲಿದೆ. ಮದುವೆ ಹೊರಾಂಗಣದಲ್ಲಿದ್ದರೆ 200, ಒಳಾಂಗಣದಲ್ಲಿದ್ದರೆ 100 ಜನರಿಗೆ ಮಾತ್ರ ಅವಕಾಶ. ಅವರಿಗೂ 2 ಡೋಸ್ ಆಗಿರಬೇಕು ಎಂದು ಹೇಳಿದ್ದಾರೆ.

IMG 20220104 WA0042
ಕೋವಿಡ್ 19 ಸಭೆ

ಬೆಂಗಳೂರಿನಲ್ಲಿ ಈಗ 3048 ಸೋಂಕಿತರು 147 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಎರಡು ಮೂರು ದಿನಗಳಲ್ಲಿ ಡಬಲ್ ಆಗ್ತಿದೆ. ಮಹಾರಾಷ್ಟ್ರದಲ್ಲಿ 10 ಸಾವಿರ ಕೇಸ್ ಆಗಿದೆ. ಆದ್ದರಿಂದ ರಾಜ್ಯದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ನಿಯಮಗಳನ್ನು ಜಾರಿ ಮಾಡುವ ಅಗತ್ಯ ಇದೆ. ಆದ್ದರಿಂದ ಸಭೆಯಲ್ಲಿ ಚರ್ಚೆ ನಡೆಸಿ ಕೆಲವು ನಿರ್ಧಾರ ಮಾಡಿದ್ದೇವೆ ಎಂದು ತಿಳಿಸಿದರು.