ಪಾವಗಡ ತಾಲೂಕು ಲಿಂಗದಹಳ್ಳಿ ಗ್ರಾಮದ ನಿವಾಸಿ ಶ್ರೀಮತಿ ಭಾಗ್ಯಮ್ಮ(48). ಇಂದು ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ಮರಣ ಹೊಂದಿರುತ್ತಾರೆ.
ಮೃತ ಭಾಗ್ಯಮ್ಮ ಕೋಟಗುಡ್ಡ ಕ್ಷೇತ್ರದ ಮಾಜಿ ಜಿಲ್ಲಾ ಪಂಚಾಯತಿಯ ಸದಸ್ಯರಾಗಿದ್ದು ಉತ್ತಮ ಕಾರ್ಯವನ್ನು ನಿರ್ವಹಿಸಿ ಜನರ ಮನಸ್ಸನ್ನು ಗೆದ್ದಿದ್ದರು.
ಮೃತ ಭಾಗ್ಯಮ್ಮ , ಪತಿ , ಓಬ್ಬ ಪುತ್ರ ಮತ್ತು ಓಬ್ಬ ಪುತ್ರಿಯನ್ನು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ ಎಂದು ದೈಹಿಕ ಶಿಕ್ಷಕ ರಾದ ಬಸವರಾಜ್ ತಿಳಿಸಿದ್ದಾರೆ. ಮೃತರ ಅಂತ್ಯ ಸಂಸ್ಕಾರವನ್ನು ಸ್ವಗ್ರಾಮ ಲಿಂಗದಹಳ್ಳಿಯ ಜಮೀನಿನಲ್ಲಿ ನಡೆಸುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.