ಕೋವಿಡ್ ಮಾರ್ಗಸೂಚಿ ಅನುಸರಿಸಿ ಸರಳ ಏಕಾದಶಿಯ ಆಚರಣೆ ಪಾವಗಡ ಟೌನಿನ ಸಂತಾನ ವೇಣುಗೋಪಾಲ ಸ್ವಾಮಿ ದೇಗುಲದಲ್ಲಿ, ಹಾಗೂ ಪಾವಗಡ ತಾಲೂಕು ಕೃಷ್ಣಾಪುರದಲ್ಲಿ ಚಿಕ್ಕ ತಿರುಪತಿ ಎಂದೇ ಖ್ಯಾತವಾಗಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು ಪಾವಗಡ ಕೃಷ್ಣಾಪುರ ಸೇರಿದಂತೆ ತಾಲ್ಲೂಕಿನಾದ್ಯಂತ ದೇಗುಲಗಳಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆ ನಡೆಯಿತು.
ಕೃಷ್ಣಾಪುರ ವೆಂಕಟೇಶ್ವರ ದೇಗುಲದಲ್ಲಿ ಬೆಳಗಿನ ಜಾವದಿಂದ ಅಭಿಷೇಕ, ಕುಂಕುಮಾರ್ಚನೆ ಇತ್ಯಾದಿ ಪೂಜೆಗಳು ನಡೆದವು ವೈಕುಂಠ ದ್ವಾರದಲ್ಲಿ ಉಯ್ಯಾಲೆ ಯನ್ನು ಏರ್ಪಡಿಸಿ ಅದರಲ್ಲಿ ಉತ್ಸವಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿತ್ತು. ವೈಕುಂಠ ದ್ವಾರದ ಮೂಲಕ ಭಕ್ತಾದಿಗಳು ಹಾದುಹೋಗಿ ವಿಶೇಷ ಪೂಜೆ ಸಲ್ಲಿಸಿದರು.ಪಟ್ಟಣದ ವೇಣುಗೋಪಾಲ ಸ್ವಾಮಿ ದೇಗುಲದಲ್ಲಿ ವೇಣುಗೋಪಾಲಸ್ವಾಮಿ ಮೂಲ ವಿಗ್ರಹಕ್ಕೆ ಹಾಗೂ ರುಕ್ಮಿಣಿ ಸತ್ಯಭಾಮ ಮೂಲ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು.ಕೋವಿಡ್ ಹಿನ್ನೆಲೆ ಭಕ್ತಾದಿಗಳ ಸಂಖ್ಯೆ ವಿರಳವಾಗಿತ್ತು ಆದರೆ ಎಂದಿನಂತೆ ದೇಗುಲಗಳಲ್ಲಿ ಪೂಜಾ ಕಾರ್ಯಗಳು ಸುಗಮವಾಗಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಲಾಗಿತ್ತು
ವರದಿ: ಶ್ರೀನಿವಾಸುಲು ಎ