ಪಾವಗಡ. ತಾಲೂಕಿನಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ನಿರಂತರವಾಗಿ ಏರಿಕೆ ಯಾಗುತ್ತಿವೆ. ಆರೋಗ್ಯ ಇಲಾಖೆ ಮೂಲಗಳ ಪ್ರಕಾರ ಇಂದಿಗೆ ತಾಲೂಕಿನಾದ್ಯಂತ 107 ಕೋವಿಡ್ ಸಕ್ರಿಯ ಪ್ರಕರಣಗಳು ದಾಖಲಾಗಿದೆ ಯಂತೆ
ಸೋಂಕು ಹೆಚ್ತುತ್ತಿರುವುದು ತಾಲೂಕಿನ ಜನರಲ್ಲಿ ಆತಂಕವನ್ನುಂಟು ಮಾಡಿದೆ. ಕೊನೆಗೂ ಎಚ್ಚೆತ್ತುಕೊಂಡ ತಾಲೂಕು ಆಡಳಿತ ತಹಸೀಲ್ದಾರ್ ಕೆ ಆರ್ ನಾಗರಾಜ್ ಅವರ ನೇತ್ರತ್ವದಲ್ಲಿ ಸಭೆ ನಡೆಸಿದ್ದಾರೆ.
ಇತ್ತೀಚೆಗೆ ತಾಲೂಕಿನ ಶಾಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಶಿಕ್ಷಣ ಇಲಾಖೆಯ ಅಧಿಕಾರಿ ಗಳನ್ನು ಸಭೆಗೆ ಕರೆಸಿ ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸಲಹೆ,ಸೂಚನೆ, ಮಾರ್ಗದರ್ಶನ ನೀಡಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಶಿಕ್ಷಣ ಇಲಾಖೆಯ ಎಲ್ಲಾ ಮೇಲ್ವಿಚಾರಣಾ ಅಧಿಕಾರಿಗಳಿಗೆ ಬೂಸ್ಟರ್ ಲಸಿಕೆ ನೀಡುವಂತೆ ಮನವಿ ಸಲ್ಲಿಸಿದಾಗ ತಹಶೀಲ್ದಾರ್ ಅವರು ಶೀಘ್ರವಾಗಿ ಬೂಸ್ಟರ್ ಲಸಿಕೆ ಕೊಡಿಸುವುದಾಗಿ ಭರವಸೆ ನೀಡಿದರು.
ಪಾವಗಡ ಟೌನಿನ SSK ಕಾಲೇಜಿನಲ್ಲಿ ಸಿಬ್ಬಂದಿ ಹಾಗೂ ವಿಧ್ಯಾರ್ಥಿಗಳು ಸೇರಿ ಸುಮಾರು 30 ಮಂದಿಗೆ ಕೊರೊನಾ ದೃಢಪಟ್ಟಿದೆ ಎನ್ನಲಾಗುತ್ತಿದೆ..ಮಾಹಿತಿ ನೀಡಬೇಕಾದ ಟಿಎಚ್ಒ ಸಂಪರ್ಕಕ್ಜೆ ಸಿಗುತ್ತಿಲ್ಲ.
ವರದಿ: ಶ್ರೀನಿವಾಸುಲು ಎ