ವೀಕೆಂಡ್ ಕರ್ಪೂ ರದ್ದು
ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಯಲ್ಲಿ ಕಳೆದ ಎರಡು ವಾರಗಳಿಂದ ಜಾರಿಯಲ್ಲಿದ್ದ ವೀಕೆಂಡ್ ಕರ್ಫ್ಯೂ ಗೆ ಸರ್ಕಾರ ಅಂತ್ಯ ಹಾಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಜ್ಯದ ಕೋವಿಡ್ 19 ಸ್ಥಿತಿಗತಿ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಯ ನಂತರ ವೀಕೆಂಡ್ ಕರ್ಫ್ಯೂ ರದ್ದು ಪಡಿಸಲು ತೀರ್ಮಾನಿಸಲಾಯಿತು.
ಶನಿವಾರ- ಭಾನುವಾರ ದ ಕರ್ಫ್ಯೂ ಜಾರಿ ಗೆ ಬಂದಿದ್ದರಿಂದ ಸಾರ್ವಜನಿಕ ರಿಂದ ಹಾಗೂ ಆಡಳಿತ ಪಕ್ಷದವರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ವಿಕೆಂಡ್ ಕರ್ಫ್ಯೂ ವಾಪಸ್ಸು ಪಡೆದಿದೆ.
ನೈಟ್ ಕರ್ಫ್ಯೂ ಮುಂದುವರೆಯಲಿದೆ. ಹೋಟಲ್, ಮಾಲ್ ಸಿನಿಮಾ ಸೇರಿದಂತೆ ಸಾರ್ವಜನಿಕರು ಸೇರುವ ಸ್ಥಳಗಳಲ್ಲಿ ಶೇಕಡ 50 ಜನರಿಗೆ ಅವಕಾಶ ನೀಡಲಾಗಿದೆ.
ಕೋವಿಡ್ ನಿಯಮಗಳು ಯಥಾಸ್ಥಿತಿಯಲ್ಲಿ ಮುಂದುವರೆಯುತ್ತವೆ ಎಂದು ಕಂದಾಯ ಸಚಿವರಾದ ಆರ್ ಅಶೋಕ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಶಾಲೆಗಳ ಆರಂಭಕ್ಕೆ ಅವಕಾಶ ನೀಡಿಲ್ಲ, ಇನ್ನು ರಾಜ್ಯದಲ್ಲಿ ಕೊವಿಡ್ ಪರಿಸ್ಥಿತಿ ನೋಡಿಕೊಂಡು ಜಿಲ್ಲಾಡಳಿತ ತೀರ್ಮಾನಕ್ಜೆ ಬಿಡಲಾಗಿದೆ.
ಕೋವಿಡ್ ಆಸ್ಪತ್ರೆ ದಾಖಲಾಗುವರ ಸಂಖ್ಯೆ, ಸಾವಿನ ಸಂಖ್ಯೆ ಹೆಚ್ಚಾದರೆ ಮತ್ತೆ ಕರ್ಫ್ಯೂ ಜಾರಿಗೆ ತರಲಾಗುವುದು ಆದ್ದರಿಂದ ಸಾರ್ವಜನಿಕ ರು ಕೋವಿಡ್ ನಿಯಮ ಪಾಲಿಸಲು ಸರ್ಕಾರ ಮನವಿ ಮಾಡಿದೆ.
ಸಭೆಯಲ್ಲಿ ಸಚಿವರಾದ ಆರ್. ಅಶೋಕ್, ಗೋವಿಂದ ಕಾರಜೋಳ, ಡಾ. ಕೆ. ಸುಧಾಕರ್, ಆರಗ ಜ್ಞಾನೇಂದ್ರ, ಬಿ.ಸಿ. ನಾಗೇಶ್, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಸುದರ್ಶನ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.