ಧರ್ಮಸ್ಥಳ ಯೋಜನೆಯ ವತಿಯಿಂದ ಸಿಎಸ್ಸಿ ಕೇಂದ್ರ ಪ್ರಾರಂಭ
ವೈ.ಎನ್.ಹೊಸಕೋಟೆ : ಸಿಎಸ್ಸಿ ಡಿಜಿಟಲ್ ಕೇಂದ್ರ ಪ್ರಾರಂಭಿಸುವ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮನೆಮನೆಗೆ ಸರ್ಕಾರಿ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾದ ಎನ್.ಆರ್.ಅಶ್ವತ್ ಕುಮಾರ್ ತಿಳಿಸಿದ್ದಾರೆ
ಗ್ರಾಮದ ಕನ್ಯಕಾಪರಮೇಶ್ವರಿ ರಸ್ತೆಯಲ್ಲಿರುವ ಕಚೇರಿಯಲ್ಲಿ ಗುರುವಾರ ಸಿಎಸ್ಸಿ ಡಿಜಿಟಲ್ ಸೇವಾ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಹಲವು ಸೌಲಭ್ಯಗಳನ್ನು ಕೇಂದ್ರದಲ್ಲಿ ಪಡೆಯಬಹುದಾಗಿದೆ, ಗ್ರಾಮದಲ್ಲಿ ಎರಡು ಕೇಂದ್ರಗಳನ್ನು ಪ್ರಾರಂಭಿಸಿದ್ದಾರೆ ಮುಂಬರುವ ದಿನಗಳಲ್ಲಿ ಮತ್ತೊಂದು ಕೇಂದ್ರ ಆರಂಭವಾಗುತ್ತದೆ ಡಿಜಿಟಲ್ ಸೇವಾ ಕೇಂದ್ರಕ್ಕೆ ಗ್ರಾಮದ ಪ್ರತಿಯೊಬ್ಬ ನಾಗರಿಕರು ಭೇಟಿ ನೀಡಿ ಸೌಲಭ್ಯಗಳ ಉಪಯೋಗ ಪಡೆಯಬೇಕೆಂದು ಈಗಾಗಲೇ ಗ್ರಾಮದಲ್ಲಿ ಮಹಿಳೆಯರ ಸ್ವಸಹಾಯ ಗುಂಪುಗಳಿಗೆ ಸಾಲ ನೀಡಿ ಆರ್ಥಿಕವಾಗಿ ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಿದೆ ಎಂದರು.
ತಾಲ್ಲೂಕು ಯೋಜನಾಧಿಕಾರಿಗಳಾದ ನಂಜುಂಡಿ ರವರು ಮಾತನಾಡಿ ಸರ್ಕಾರದ ಹಲವು ಸೌಲಭ್ಯಗಳು ಈ ಕೇಂದ್ರದಲ್ಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು. ಮೊದಲ ಆಧ್ಯತೆಯಾಗಿ ಇಶ್ರಮ ಕಾರ್ಡನ್ನು ಉಚಿತವಾಗಿ ಮಾಡಿಕೊಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಶ್ರೀನಿವಾಸ್, ಚಂದ್ರಕಳ, ಮೇಲ್ವಿಚಾರಕ ರಮೇಶ್, ಚಂದ್ರಶೇಖರ್, ಸೇವಾಪ್ರತಿನಿಧಿಗಳು ಹಾಜರಿದ್ದರು.
ವರದಿ: ಸತೀಶ್