ಸಿಎಂ ಇಬ್ರಾಹಿಂ ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ
ಇಬ್ರಾಹಿಂ ನಿವಾಸಕ್ಕೆ ಬೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ
ಸಿದ್ದರಾಮಯ್ಯ ಕರೆದುಕೊಂಡು ಹೋದ ಯಾರನ್ನೂ ಬೆಳೆಸಲಿಲ್ಲ ಎಂದು ದೂರಿದ ಹೆಚ್.ಡಿ.ಕೆ
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಪಕ್ಷಕ್ಕೆ ಸೇರುವುದಾಗಿ ಘೋಷಣೆ ಮಾಡಿರುವ ಕೇಂದ್ರದ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರ ಜತೆ ಇಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ಶಾಸಕಾಂಗ ನಾಯಕರೂ ಅದ ಹೆಚ್.ಡಿ.ಕುಮಾರಸ್ವಾಮಿ ಅವರು ಮಹತ್ವದ ಮಾತುಕತೆ ನಡೆಸಿದರು.
ತಮ್ಮ ಸ್ವಕ್ಷೇತ್ರಕ್ಕೆ ಇಂದು ಬೆಳಗ್ಗೆಯಿಂದಲೇ ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಮಾಜಿ ಮುಖ್ಯಮಂತ್ರಿಗಳು, ಸಂಜೆ ಹೊತ್ತಿಗೆ ಇಬ್ರಾಹಿಂ ಅವರ ನಿವಾಸಕ್ಕೆ ಭೇಟಿ ನೀಡಿದರು.
ಈ ಭೇಟಿಯ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಮುಖ್ಯಮಂತ್ರಿಗಳು ಮಾಧ್ಯಮಗಳ ಜತೆ ಮಾತನಾಡಿ ಹೇಳಿದ್ದಿಷ್ಟು;
ಇಬ್ರಾಹಿಂ ಇನ್ನೂ ತೀರ್ಮಾನ ತೆಗೆದುಕೊಳ್ಳಬೇಕಿದೆ. ಏನೂ ಒತ್ತಡ ಹಾಕಿ ತೀರ್ಮಾನ ತೆಗೆದುಕೊಳ್ಳಲು ಆಗಲ್ಲ. ಹಿಂದಿನ ಕೆಲವು ಘಟನೆಗಳನ್ನು ಇಬ್ರಾಹಿಂ ಮೆಲುಕು ಹಾಕಿದ್ದಾರೆ. ನೋವಿನಿಂದ ಹಿಂದಿನ ಘಟನೆಗಳನ್ನು ಇಬ್ರಾಹಿಂ ಹೇಳಿಕೊಂಡಿದ್ದಾರೆ.
ದೇವೇಗೌಡರಿಗೂ ಇಬ್ರಾಹಿಂ ಅವರಿಗೂ ಇರುವ ನಂಟು ಸಿದ್ದರಾಮಯ್ಯ ರಾಜಕೀಯಕ್ಕೆ ಬರುವ ಮುಂದಿನಿಂದಲೂ ಇದೆ.1972 ಗೌಡರ ಜೊತೆ ಇಬ್ರಾಹಿಂ ಸಂಬಂಧ ಇದೆ. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳನ್ನ ಜನ ತಿರಸ್ಕಾರ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಯಾವಾಗ ತೀರ್ಮಾನ ಮಾಡಿದ್ರೂ ತುಂಬು ಹೃದಯದ ಸ್ವಾಗತ.
ಸೂಕ್ತ ಸಂದರ್ಭದಲ್ಲಿ ತೀರ್ಮಾನ ತೆಗೆದುಕೊಳ್ಳಲು ಸೂಕ್ತ ಸಮಯ ಹತ್ತಿರದಲ್ಲಿದೆ. ಸಿದ್ದರಾಮಯ್ಯ ಹೋರಾಟ ಮಾಡಿ, ಇಬ್ರಾಹಿಂಗೆ ರಾಜ್ಯ ಸಮಸ್ಥಾನ ಕೊಡಿಸಬಹುದಿತ್ತು. ಆದರೆ ಸಿದ್ದರಾಮಯ್ಯ ತಾವು ಬೆಳೆದರೆ ಹೊರತು ನಂಬಿಸಿ ಕಾಂಗ್ರೆಸ್ ಪಕ್ಷಕ್ಕೆ ಕರೆದುಕೊಂಡು ಹೋದವರನ್ನು ಬೆಳೆಸಲಿಲ್ಲ. ಇದು ಎಲ್ಲರಿಗೂ ಗೊತ್ತಿರುವ ಸಂಗತಿ.
ಉಳಿದಂತೆ ಮಾಜಿ ಸಚಿವ ಪುಟ್ಟರಾಜು ಹಾಗೂ ಸಿದ್ಧರಾಮಯ್ಯ ಭೇಟಿಗೆ ವಿಶೇಷ ಬೆಳವಣಿಗೆ ಏನಿಲ್ಲ. ಅದಕ್ಕೆ ಬೇರೆ ಅರ್ಥ ಕಲಿಸುವುದು ಬೇಡ.
2023ಕ್ಕೆ ಜೆಡಿಎಸ್ ಸರಕಾರ ಬರುತ್ತದೆ ಎಂದು ಇಬ್ರಾಹಿಂ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ. ನಮ್ಮ ಪಕ್ಷ ತಪ್ಪದೇ ಅಧಿಕಾರಕ್ಕೆ ಬರುತ್ತದೆ.