ಗ್ರಾಮ ಪಂಚಾಯಿತಿಗಳು ಹುದ್ದೆಗಳ ನೇಮಕಾತಿ ಮಾಡುವುದನ್ನು ನಿಷೇಧಿಸಲಾಗಿದೆಕೆ.ಎಸ್.ಈಶ್ವರಪ್ಪ
–
ಬೆಂಗಳೂರು, ಫೆಬ್ರವರಿ 16 (ಕರ್ನಾಟಕ ವಾರ್ತೆ) : ಗ್ರಾಮಪಂಚಾಯಿತಿಗಳು ಯಾವುದೇ ಹುದ್ದೆಗಳಿಗೆ ನೇಮಕಾತಿ ಮಾಡುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರಪ್ಪ ತಿಳಿಸಿದರು.
ಇಂದು ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಬಿ.ಎಂ. ಸುಕುಮಾರ್ ಶೆಟ್ಟಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಬಿಲ್ ಕಲೆಕ್ಟರ್, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್, ಅಟೆಂಡರ್ ಹುದ್ದೆಗಳು ಹಾಗೂ ನಿವೃತ್ತಿ, ಮುಂಬಡ್ತಿ ಹಾಗೂ ಇತರೆ ಕಾರಣಗಳಿಂದ ಖಾಲಿಯಾದಲ್ಲಿ ನೇಮಕಾತಿ ಮಾಡಿಕೊಳ್ಳಲು ಸಕಾರಣಗಳೊಡನೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಪೂರ್ವಾನುಮೋದನೆ ಪಡೆದು ನೇಮಕ ಮಾಡಿಕೊಳ್ಳಬಹುದಾಗಿದೆ ಎಂದರು.