ವಂದೇ ಮಾತರಂ, ನಾಡಗೀತೆ, ರೈತಗೀತೆ ಮೂಲಕ ಮೇಕೆದಾಟು ಪಾದಯಾತ್ರೆ 2.0 ಗೆ ರಾಮನಗರದಲ್ಲಿ ಭಾನುವಾರ ಚಾಲನೆ…
ಮುಖಂಡರಿಂದ ನಗಾರಿ ಬಾರಿಸುವ ಮೂಲಕ ಉದ್ಘಾಟನೆ.
ಮೇಕೆದಾಟು ಪಾದಯಾತ್ರೆ ಎರಡನೇ ಹಂತದ ಕಾರ್ಯಕ್ರಮದಲ್ಲಿ ಡಿ.ಕೆ. ಸುರೇಶ್ ಅವರ ಪ್ರಾಸ್ತಾವಿಕ ನುಡಿ:
ಮೊದಲ ಹಂತದಲ್ಲಿ ಮೇಕೆದಾಟುನಿಂದ ಆರಂಭ ಮಾಡಿದ್ದ ಪಾದಯಾತ್ರೆ ನಾಲ್ಕು ದಿನಗಳಲ್ಲಿ ರಾಮನಗರ ತಲುಪಿತ್ತು.
ಕೋವಿಡ್ ಮೂರನೇ ಅಲೆ, ಜನರ ಆರೋಗ್ಯ ಹಿತದೃಷ್ಟಿ ಹಾಗೂ ನ್ಯಾಯಾಲಯದ ಅಭಿಪ್ರಾಯಕ್ಕೆ ಗೌರವ ನೀಡಿ ಪಾದಯಾತ್ರೆ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಇಂದು ಮತ್ತೆ ಆರಂಭವಾಗುತ್ತಿದೆ.
ಇಂದಿನಿಂದ ಐದು ದಿನಗಳ ಕಾಲ ಈ ಪಾದಯಾತ್ರೆ ನಡೆಯಲಿದೆ.
ಮೇಕೆದಾಟು ಸಮತೋಲಿತ ಜಲಾಶಯ ನಿರ್ಮಾಣಕ್ಕೆ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದಲ್ಲಿ ಅಂದಿನ ನೀರಾವರಿ ಸಚಿವ ಎಂ.ಬಿ ಪಾಟೀಲ್ ಅವರು 3 ಬಾರಿ ಡಿಪಿಆರ್ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದರು.
ನೀರು ಹಂಚಿಕೆ ಕುರಿತು ಸುಪ್ರೀಂಕೋರ್ಟ್ ತೀರ್ಪು ಬಂದ ನಂತರ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಡಿ.ಕೆ. ಶಿವಕುಮಾರ್ ಅವರು ಜಲ ಸಂಪನ್ಮೂಲ ಸಚಿವರಾಗಿದ್ದಾಗ ಮತ್ತೊಮ್ಮೆ ಡಿಪಿಎಆರ್ ಸಿದ್ಧಪಡಿಸಿ ಕೇಂದ್ರ ಜಲ ಮಂಡಳಿ ಒಪ್ಪಿಗೆ ಪಡೆಯಲು ಸಾಕಷ್ಟು ಪ್ರಯತ್ನ ಪಟ್ಟು ಯಶಸ್ವಿಯಾಗಿದ್ದರು.
ಕಳೆದ ಎರಡೂವರೆ ವರ್ಷಗಳಿಂದ ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಆದರೂ ರಾಜ್ಯದ ಹಾಗೂ ಕೇಂದ್ರದ ಮುಖಂಡರುಗಳು ಈ ಯೋಜನೆ ಅನುಷ್ಠಾನದ ಪ್ರತಿಪಾದನೆ ಮಾಡಲಿಲ್ಲ
ಹೀಗಾಗಿ ನಮ್ಮ ನೀರು ಹಾಗೂ ಅದರ ಮೇಲಿನ ಹಕ್ಕನ್ನು ಪ್ರತಿಪಾದಿಸಿ ಬೆಂಗಳೂರು ಹಾಗೂ ಹಳೆ ಮೈಸೂರು ಭಾಗದ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ನೀಡುವ ಈ ಯೋಜನೆ ಜಾರಿಗೆ ಆಗ್ರಹಿಸಿ ಇಂದು ಈ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಉಸ್ತುವಾರಿ ವಹಿಸಿರುವ ಏಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಶ್ರೀ ಕ್ಷೇತ್ರ ಆದಿಚುಂಚನಗಿರಿಯ ರಾಮನಗರ ಶಾಖಾ ಮಠದ ಶ್ರೀ ಅನ್ನದಾನಿ ಸ್ವಾಮೀಜಿ, ಕೇಂದ್ರದ ಮಾಜಿ ಸಚಿವರಾದ ಕೆ ಎಚ್ ಮುನಿಯಪ್ಪ, ಸಂಸದ ಡಿ.ಕೆ. ಸುರೇಶ್, ರಾಜ್ಯದ ಮಾಜಿ ಸಚಿವರಾದ ಹೆಚ್.ಕೆ ಪಾಟೀಲ್, ಅಲ್ಲಂ ವೀರಭದ್ರಪ್ಪ, ಎಚ್.ಎಂ. ರೇವಣ್ಣ, ಎಂ.ಬಿ. ಪಾಟೀಲ್, ಚಲುವರಾಯಸ್ವಾಮಿ, ನರೇಂದ್ರಸ್ವಾಮಿ, ಕೆಪಿಸಿಸಿ ಕಾರ್ಯದಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಧ್ರುವ ನಾರಾಯಣ್, ರಾಜ್ಯಸಭಾ ಸದಸ್ಯರಾದ ಜಿ.ಸಿ ಚಂದ್ರಶೇಖರ್, ಡಾ ಎಲ್ ಹನುಮಂತಯ್ಯ, ನಾಸೀರ್ ಹುಸೇನ್, ವಿಧಾನ ಸಭಾ ಉಪ ನಾಯಕರಾದ ಯು.ಟಿ ಖಾದರ್, ವಿಧಾನ ಪರಿಷತ್ ವಿರೋಧ ಪಕ್ಷದ ಉಪನಾಯಕ ಗೋವಿಂದರಾಜ್, ಚಿತ್ರನಟರಾದ ನೆನಪಿರಲಿ ಪ್ರೇಮ್, ಸಾಧು ಕೋಕಿಲ, ಎಂಎಲ್ಸಿ ಎಸ್. ರವಿ ಮತ್ತಿತರರು ಭಾಗವಹಿಸಿದ್ದರು.