ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮ…. ಪಾವಗಡ… ಇಂದು ಪಟ್ಟಣದ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ 47ನೇ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲ ಕೆ.ಓ ಮಾರಪ್ಪನವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡುತ್ತಾ, ಇಂದು ಕೇಂದ್ರ ಮತ್ತು ರಾಜ್ಯ ಸರ್ಕಾರ ಮಹಿಳೆಯರಿಗೆ ಶಿಕ್ಷಣ ನೀಡಲು ಹೆಚ್ಚಿನ ಅವಕಾಶಗಳನ್ನು ಒದಗಿಸಿದೆ ಎಂದರು. ಪ್ರತಿಯೊಬ್ಬರೂ ಕೂಡ ಈ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಮುನ್ನುಗ್ಗಬೇಕು ಎಂದರು . ಪ್ರತಿ ಕ್ಷೇತ್ರದಲ್ಲೂ ಮಹಿಳೆಯರು ರಾಣಿಸ ಬೇಕಿದೆ, ಉಕ್ಕಿನ ಮಹಿಳೆ ಇಂದಿರಾಗಾಂಧಿ, ದೇಶದ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್, ಸೇರಿದಂತೆ ರಾಜಕೀಯ, ಕ್ರೀಡಾ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆ ಮರೆಯುವಂತಿಲ್ಲ ಎಂದರು. ಇತಿಹಾಸದ ಉಪನ್ಯಾಸಕಿ ರಾಮಾಂಜಿನಮ್ಮ ಮಾತನಾಡುತ್ತಾ, ನಮ್ಮ ದೇಶವು ಹಲವಾರು ವೀರವನಿತೆಯರಿಗೆ ಜನ್ಮ ನೀಡಿದೆ ,ಆದರೆ ಇಂದಿಗೂ ಮಹಿಳೆಯರಿಗೆ ಪೂರ್ಣಪ್ರಮಾಣದಲ್ಲಿ ಸ್ಥಾನಮಾನ ಸಿಕ್ಕಿಲ್ಲ ಎಂದರು. ಯ.ನಾ. ಹೊಸಕೋಟೆಯ ಪಿ. ಎಸ್. ಐ ಭಾರತೀ ಅವರು ಮಾತನಾಡುತ್ತಾ, ಮಹಿಳಾ ದಿನಾಚರಣೆಯ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು, ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಮಹಿಳೆಯರ ಪಾತ್ರ ಪ್ರಮುಖವಾದದ್ದು, ವಿದ್ಯಾರ್ಥಿನಿಯರು ಉನ್ನತ ಶಿಕ್ಷಣವನ್ನು ಪಡೆದು ಅಕ್ಷರ ಕ್ರಾಂತಿ ಸೃಷ್ಟಿಸಿದಾಗ ಮಾತ್ರ ತಂದೆ ತಾಯಿಯರ ಆಸೆ ಆಕಾಂಕ್ಷೆಗಳನ್ನು ಈಡೇರಿಸಲು ಸಾಧ್ಯವಾಗುತ್ತದೆ ಎಂದರು. ಸರ್ಕಾರ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಪ್ರತಿವರ್ಷ ಕೋಟ್ಯಂತ ರೂಗಳನ್ನು ಖರ್ಚು ಮಾಡುತ್ತಿದ್ದು ಅದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ, ವಿಜಯ ಮೂರ್ತಿ ಮಾತನಾಡುತ್ತಾ , ಮಹಿಳೆಯರಿಗೆ ಇಂದು ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳಿವೆ ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವುದು ನಿಮ್ಮ ಕೈಯಲ್ಲಿದೆ ಎಂದರು. ಉತ್ತಮ ಶಿಕ್ಷಣ ಪಡೆದು ಸ್ವಾವಲಂಬನೆ ಜೀವನ ನಡೆಸಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಗ್ರೇಡ್ 2 ತಹಶೀಲ್ದಾರ್ ಸುಮತಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬಸವಲಿಂಗಪ್ಪ, ನಾಗರತ್ನಮ್ಮ, ಸುಮಾ ದೇವಿ, ಲಲಿತಾ, ಶಾಂತಮ್ಮ, ನಾಗರಾಜು, ಸತೀಶ್, ರಾಜಣ್ಣ ಮುಂತಾದವರು ಉಪಸ್ಥಿತರಿದ್ದರು.
ವರದಿ: ಶ್ರೀನಿವಾಸುಲು ಎ