IMG 20220319 WA0008

ಪಾವಗಡ ರಸ್ತೆ ಅಪಘಾತ; ಮೃತರ ಕುಟುಂಬಗಳಿಗೆ ಸಾಂತ್ವನ….!

CRIME Genaral STATE

ಪಾವಗಡ ರಸ್ತೆ ಅಪಘಾತ; ಮೃತರ ಕುಟುಂಬಕ್ಕೆ ಡಿ.ಕೆ. ಶಿವಕುಮಾರ್ ಸಾಂತ್ವನ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಾಲವಳ್ಳಿ ಕಟ್ಟೆ ಬಳಿ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಸಂತ್ರಸ್ತರ ಕುಟುಂಬಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಾಂತ್ವನ ಹೇಳಿದ್ದಾರೆ.

ಅಪಘಾತದಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ಸಿಗಬೇಕು. ಜತೆಗೆ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿರುವ ಎಲ್ಲರಿಗೂ ಉಚಿತ ಚಿಕಿತ್ಸೆ ಸಿಗಬೇಕು.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬದ ಸದಸ್ಯರಿಗೆ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಶಿವಕುಮಾರ್ ಅವರು ಸಂತಾಪ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹೆಚ್ ಡಿ ಕುಮಾರಸ್ವಾಮಿ ಸಂತಾಪ

ಶಿಕ್ಷಣ ಸಚಿವರ ಸಾಂತ್ವನ