Screenshot 2022 03 30 08 19 26 843 com.google.android.apps .nbu .files

ಹೂಡಿಕೆದಾರರ ಯೋಜನೆಗಳಿಗೆ ತ್ವರಿತ ಅನುಮೋದನೆ ನೀಡಲು ಸೂಚನೆ…!

BUSINESS

ಹೂಡಿಕೆದಾರರ ಯೋಜನೆಗಳಿಗೆ ತ್ವರಿತ ಅನುಮೋದನೆ ನೀಡಿ ನಿಗದಿತ ಕಾಲಮಿತಿಯಲ್ಲಿ ಅನುಮೋದನೆ ನೀಡಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಅವರು ಇಂದು ಬೆಂಗಳೂರಿನಲ್ಲಿ ಆಯೋಜಿಸಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ Invest Karnataka 2022 ಅನಾವರಣ ಮಾಡಿ ಮಾತನಾಡಿದರು.

ಬಂಡವಾಳವನ್ನು ಸರಿಯಾದ ಸಮಯದಲ್ಲಿ ಹೂಡಿಕೆ ಮಾಡಿದಾಗ ಯಶಸ್ಸು ಕಾಣಲು ಸಾಧ್ಯ. ಕರ್ನಾಟಕ ರಾಜ್ಯ ಅದರಲ್ಲಿಯೂ ಬೆಂಗಳೂರಿನಲ್ಲಿ ಉದ್ಯಮ ಸ್ನೇಹಿ ಪರಿಸರ, ಕೌಶಲ್ಯಭರಿತ ಮಾನವ ಸಂಪನ್ಮೂಲ, ಆಧುನಿಕ ತಂತ್ರಜ್ಞಾನ ಹಾಗೂ ಆರ್ಥಿಕತೆಯ ಕೇಂದ್ರವಾಗಿರುವ ಬಂಡವಾಳ ಹೂಡಿಕೆಗೆ ಪ್ರಶಸ್ತವಾದ ಸಮಯ ಇದಾಗಿದೆ ಎಂದು ತಿಳಿಸಿದರು.

ಪ್ರಮುಖ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸುವ ಜೊತೆಗೆ ಪ್ರಾದೇಶಿಕ ಬಂಡವಾಳ ಹೂಡಿಕೆಗೆ ಹೆಚ್ಚಿನ ಒತ್ತು ನೀಡಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ಮುನ್ನವೇ ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು. ಕೋವಿಡ್ ನಂತರ ಆರ್ಥಿಕತೆಯಲ್ಲಿ ಚೇತರಿಕೆ ಕಂಡಿರುವ ಕರ್ನಾಟಕದಲ್ಲಿ ವಿಶ್ವಾಸಾರ್ಹವಾದ ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಎಲ್ಲ ಸಹಾಯ ಸಹಕಾರವನ್ನು ನೀಡುತ್ತದೆ ಎಂದು ತಿಳಿಸಿದರು.
ರಾಜ್ಯಕ್ಕೆ ಹೈಟೆಕ್ ಉದ್ಯಮ, ಸೆಮಿ ಕಂಡಕ್ಟರ್, ನವೀಕರಿಸಬಹುದಾದ ಇಂಧನ, ವಿದ್ಯುತ್ ವಾಹನ, ಐಟಿ , ಬಿಟಿ, ಸಣ್ಣ ಕೈಗಾರಿಕೆ, ಗುಡಿ ಕೈಗಾರಿಕೆ ಹೀಗೆ ವೈವಿಧ್ಯಮಯ ವಲಯಗಳಲ್ಲಿ ಹೂಡಿಕೆ ಹರಿದು ಬರಬೇಕು. ಇದರಿಂದ ರಾಜ್ಯದ ಆರ್ಥಿಕತೆ ಸುಭದ್ರವಾಗುವುದು. ಆರ್ಥಿಕತೆ ಎಂದರೆ ಕೇವಲ ಹಣವಲ್ಲ, ಜನರು, ಜನರ ಆದಾಯ ಉತ್ಪನ್ನ ಚಟುವಟಿಕೆಗಳು ಆರ್ಥಿಕ ಅಭಿವೃದ್ಧಿಗೆ ಕಾರಣ. ಆದ್ದರಿಂದ ಜಾಗತಿಕ ಹೂಡಿಕೆದಾರರ ಸಮಾವೇಶ ಇಂತಹ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಿ ವಂತಾಗಬೇಕು ಎಂದು ತಿಳಿಸಿದರು.
ದೇಶದಲ್ಲಿ ಅತಿ ಹೆಚ್ಚು ಸ್ಟಾರ್ಟ್ ಅಪ್ ಗಳು, ಯುನಿಕಾರ್ನ್ ಕಂಪೆನಿಗಳನ್ನು ಹೊಂದಿರುವ ನಮ್ಮ ರಾಜ್ಯದಲ್ಲಿ ಯುವ, ಸೃಜನ ಶೀಲ ಮನಸ್ಸುಗಳು, ಕುಶಲ ಕೆಲಸಗಾರರು ಹಾಗೂ ಸಮೃದ್ಧ ನೈಸರ್ಗಿಕ ಸಂಪನ್ಮೂಲಗಳ ನಮ್ಮ ಶಕ್ತಿ
ಇದಕ್ಕೆ ಪೂರಕವಾಗಿ ಹೂಡಿಕೆದಾರರಿಗೆ ಅಗತ್ಯ ಸೌಲಭ್ಯ ಒದಗಿಸಲು ಲ್ಯಾಂಡ್ ಬ್ಯಾಂಕ್ ಸೃಜಿಸಲಾಗುತ್ತಿದೆ, ಕೈಗಾರಿಕಾ ನೀತಿ, ಈಸ್ ಆಫ್ ಡೂಯಿಂಗ್ ಬಿಸಿನೆಸ್ ಅಡಿ ಹಲವು ಸವಲತ್ತು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.
ಭವಿಷ್ಯದ ಇಂಟಗ್ರಟೆಡ್ ಟೌನ್ಶಿಪ್ ಗಳು, ಕೈಗಾರಿಕಾ ಟೌನ್ಶಿಪ್ ಗಳ ನಿರ್ಮಾಣ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ ವಲಯಕ್ಕೆ ಉತ್ತೇಜನ ಮೊದಲಾದ ಹಲವು ವಿನೂತನ ಉಪಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು

ಸಚಿವರಾದ ಎಂಟಿಬಿ ನಾಗರಾಜ್ ಹಾಗೂ ಮುರುಗೇಶ್ ನಿರಾಣಿ ಅವರು ಉದ್ಯಮಿಗಳಾಗಿದ್ದು, ಯುವೋದ್ಯಮಿಗಳಿಗೆ ಪ್ರೇರಣೆಯಾಗಿದ್ದಾರೆ ಎಂದು ಅವರು ಹೇಳಿದರು.