ಬೆಂಗಳೂರು: ಜೆಡಿ ಎಸ್ ಪಕ್ಷದ ರಾಜ್ಯ ಅಧ್ಯಕ್ಷರಾಗಿ ಮಾಜಿ ಸಚಿವರಾದ ಸಿ ಎಂ ಇಬ್ರಾಹಿಂ ಅಧಿಕಾರ ಸ್ವೀಕರಿಸಿದರು.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಕೇಂದ್ರದ ಮಾಜಿ ಸಚಿವ ಸಿ. ಎಂ.ಇಬ್ರಾಹಿಂ ಅವರು ಜಾತ್ಯತೀತ ಜನತಾದಳ ರಾಜ್ಯಾಧ್ಯಕ್ಷರಾಗಿ ಇಂದು ಅಧಿಕಾರ ವಹಿಸಿಕೊಂಡರು. ತೆನೆ ಹೊತ್ತ ಮಹಿಳೆ ಯನ್ನು ಮುನ್ನೆಡುಸುವ ಜವಬ್ದಾರಿ ಈಗ ಸಿ ಎಂ ಇಬ್ರಾಹಿಂ ಅವರದ್ದಾಗಿದೆ. 2023 ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷ ವನ್ನು ಅಧಿಕಾರ ಗದ್ದು ಗೆ ತರಬೇಕಿದೆ.
ಇದೇ ಸಂದರ್ಭದಲ್ಲಿ ಹಿರಿಯ ಶಾಸಕ ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದ ಹೆಚ್.ಕೆ.ಕುಮಾರಸ್ವಾಮಿ ಅವರು ಜೆಡಿಎಸ್ ರಾಷ್ಟ್ರೀಯ ಸಂಸದೀಯ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.