ಗ್ರಾಮಪಂಚಾಯಿತಿಯ ಉಪಾಧ್ಯಕ್ಷರ ಆಯ್ಕೆ
ವೈ.ಎನ್.ಹೊಸಕೋಟೆ::
ರಾಜಿನಾಮೆಯಿಂದ ತೆರವಾಗಿದ್ದ ಗ್ರಾಮಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು.
ಕೆ.ಎಸ್.ಗೋವಿಂದಪ್ಪ ವೈ ಎನ್ ಹೊಸಕೋಟೆ ಉಪಾಧ್ಯಕ್ಷ ರಾಗಿ. ಅವಿರೋಧವಾಗಿ ಆಯ್ಕೆಯಾದರು.
ಗುರುವಾರ ನಡೆದ ಚುನಾವಣೆಯಲ್ಲಿ ಕೆ.ಎಸ್.ಗೋವಿಂದ ಏಕೈಕ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಶಿರಸ್ತೇದಾರ್ ನರಸಿಂಹಮೂರ್ತಿಯವರು ಕೆ.ಎಸ್.ಗೋವಿಂದಪ್ಪ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿರುವಂತೆ ಘೋಷಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಸದಸ್ಯರು, ಗ್ರಾಮಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಮುಖಂಡರು ಹಾಜರಿದ್ದರು.