ಯಶಸ್ವಿನಿ ಯೋಜನೆಯನ್ನು ಅಕ್ಟೋಬರ್ 2 ರಂದು ಉದ್ಘಾಟನೆ ಮಾಡಲು ಸೂಕ್ತ ಕ್ರಮ ವಹಿಸಲು ಸಿಎಂ.ಸೂಚನೆ
ಬೆಂಗಳೂರು, ಮೇ 05: ಯಶಸ್ವಿನಿ ಯೋಜನೆಯನ್ನು ಅಕ್ಟೋಬರ್ 2 ರಂದು ಉದ್ಘಾಟನೆ ಮಾಡಲು ಸೂಕ್ತ ಕ್ರಮ ವಹಿಸುವಂತೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
2022- 23 ನೆ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರು ಇಂದು ಸಹಕಾರ ಇಲಾಖೆಯ ಪ್ರಗತಿ ಪರಿಶೀಲಿಸಿದರು.
ಸಭೆಯ ಇತರ ಮುಖ್ಯಾಂಶಗಳು:
. ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆಗೆ ಸಂಬಂಧಿಸಿದಂತೆ ಆರ್.ಬಿ.ಐ ನಿಯಮಾವಳಿಗಳ ಅಗತ್ಯಗಳಿಗೆ ಅನುಸಾರವಾಗಿ ದಾಖಲೆಗಳನ್ನು ಸಲ್ಲಿಸುವುದು. ಈ ತಿಂಗಳೊಳಗೆ ಕೆಲಸ ಪೂರ್ಣಗೊಳ್ಳಬೇಕು.
- ಯಶಸ್ವಿನಿ ಯೋಜನೆ ಹಾಗೂ ಎ.ಬಿ.ಆರ್. ಕೆ ಡ್ಯೂಪ್ಲಿಕೇಷನ್ ಆಗಬಾರದು. ಎ.ಬಿ.ಆರ್.ಕೆ ಅರ್ಜಿಗಳನ್ನು ತಿರಸ್ಕರಿಸಕೂಡದು. ತಜ್ಞರಿಂದ ಅಧ್ಯಯನ ಕೈಗೊಂಡು ತೀರ್ಮಾನ ಕೈಗೊಳ್ಳುವುದು.
- ಗೋಕಾಕ್, ಬೀದರ್, ಹುಬ್ಬಳ್ಳಿಯಲ್ಲಿ ಸಹಕಾರಿ ವಲಯದ ಆಸ್ಪತ್ರೆಗಳನ್ನು ಬಲಪಡಿಸಲು ಆಸ್ಪತ್ರೆಗಳಿಗೆ ನೆರವು ಒದಗಿಸಲು ಕ್ರಮ ವಹಿಸುವುದು.
- ಸಾಲಮನ್ನಾ : 50 ವರ್ಷಗಳ ಹಳೆಯ ಸೊಸೈಟಿಗಳಿಗೆ ನೆರವು ಒದಗಿಸುವ ಬಗ್ಗೆ ಕ್ರಮ ವಹಿಸುವಂತೆ ಸೂಚಿಸಿದರು.