IMG 20220513 WA0037

ಪಾವಗಡ: ಕಾಂಗ್ರೆಸ್ ನಿಂದ ಅಲ್ಪಸಂಖ್ಯಾತರ ಸಮಾವೇಶ….!

DISTRICT NEWS ತುಮಕೂರು

ಭ್ರಾತೃತ್ವದ ಬದಲು ಕೋಮುವಾದ ಸೃಷ್ಟಿಸುತ್ತಿರುವ ಬಿಜೆಪಿ ಸರ್ಕಾರ ,ಅಲ್ಪಸಂಖ್ಯಾತರ ಜಿಲ್ಲಾ ಘಟಕ ಅಧ್ಯಕ್ಷ ಅತಿಕ್ ಅಹಮದ

ಪಾವಗಡ: ಭಾರತ ದೇಶದ ಜಾತ್ಯಾತೀತ ತತ್ವವನ್ನು ಬದಿಗೊತ್ತಿ ಹಿಂದೂ-ಮುಸ್ಲಿಂ ನಡುವೆ ದ್ವೇಷ ಬೀಜವನ್ನು ಬಿತ್ತಿ , ದುರುದ್ದೇಶದಿಂದ ಅಲ್ಪಸಂಖ್ಯಾತ ಯುವಕರನ್ನು ಮತದಾರರ ಪಟ್ಟಿಗೆ ಸೇರಿಸಿಕೊಳ್ಳದಿರಲು ಹುನ್ನಾರ ನಡೆಯುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ಮಾಡುವುದಾಗಿ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಜಿಲ್ಲಾ ಘಟಕದ ಅಧ್ಯಕ್ಷ ಅತೀಕ್ ಅಹಮದ್ ಸರ್ಕಾರಕ್ಕೆ ಎಚ್ಚರಿಸಿದರು.

ಪಟ್ಟಣದಲ್ಲಿ ಇಂದು ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡುತ್ತಾ, ಇತ್ತೀಚಿನ ದಿನಗಳಲ್ಲಿ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಹೆಚ್ಚಾಗಿವೆ. ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅಡ್ಡಿ ಮಾಡುವ ಸಲುವಾಗಿ ಹಿಜಾಬ್ ವಿವಾದ ಸೃಷ್ಟಿಸಲಾಗಿದೆ. ಅಲ್ಪಸಂಖ್ಯಾತರನ್ನು ಮತದಾರರ ಪಟ್ಟಿಯಿಂದ ಕೈ ಬಿಡುವ ಹುನ್ನಾರ ನಡೆಯುತ್ತಿದೆ. ದೇಶದಲ್ಲಿ ಅಗತ್ಯವಸ್ತುಗಳ ಬೆಲೆ ಗಗನಕ್ಕೇರಿದೆ, ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ತಡೆಯುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಅದರ ಬದಲಾಗಿ ಸರ್ಕಾರ ಕೋಮು ಗಲಭೆ ಸೃಷ್ಟಿಸುವ ಕೆಲಸವನ್ನು ಮಾಡುತ್ತಿದೆ. ಎಂದು ಆರೋಪಿಸಿದರು.

ಅಲ್ಪಸಂಖ್ಯಾತರ ಸಮಸ್ಯೆಗಳ ಬಗ್ಗೆ ಚರ್ಚಿಸುವ ಸಲುವಾಗಿ ತುಮಕೂರು ನಗರ ದಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಸಮಾವೇಶವನ್ನು ಮೇ-22 ರಂದು ಸಮಾವೇಶ ಹಮ್ಮಿಕೊಳ್ಳಲಾಗುವುದೆಂದು, ಪಕ್ಷದ ಧುರೀಣರು ಸಮಾವೇಶದಲ್ಲಿ ಅಲ್ಪಸಂಖ್ಯಾತರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಲಿದ್ದಾರೆ ಎಂದರು..

ನಂತರ ಪುರಸಭಾ ಸದಸ್ಯ ಎಂ ಎ ಜಿ ಇಮ್ರಾನ್ ಮಾತನಾಡುತ್ತಾ, ತಾಲ್ಲೂಕಿನ ಮುಸ್ಲಿಂ ಜನಾಂಗದವರು ಸಂಘಟಿತರಾಗಿ ಸಮಾವೇಶದಲ್ಲಿ ಭಾಗವಹಿಸಬೇಕು. ಸಂವಿಧಾನ ಬದ್ಧ ಹಕ್ಕುಗಳಿಗಾಗಿ ನ್ಯಾಯಯುತ ಹೋರಾಟ ನಡೆಸಬೇಕು ಎಂದರು.

ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಸುದೇಶ್ ಬಾಬು, ಮುಖಂಡ ರಿಜ್ವಾನ್, ಷಾ ಬಾಬು, ಆರ್ ಕೆ ನಿಸಾರ್.

ಮುಖಂಡ ಅನ್ವರ್ ಸಾಬ್, ಖಲೀಂ ಉಲ್ಲಾ, ರೋಷನ್, ಷಾಬತ್, ಮೊಹಮದ್ ಅಲಿ ಉಪಸ್ಥಿತರಿದ್ದರು.

ವರದಿ: ಶ್ರೀನಿವಾಸಲು ಎ