ಬೆಂಗಳೂರು, ಮೇ 30-
31 ರಂದು ನಿವೃತ್ತ ರಾಗಲಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಟ್ಟರು.
ನಿಯೋಜಿತ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಸಹ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಸಚಿವ ಸಂಪುಟದ ಸದಸ್ಯರು, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.