IMG 20220601 WA0010

ಪಾವಗಡ:ವಿಶ್ವ ತಂಬಾಕು ರಹಿತ ದಿನಾಚರಣೆ…!

DISTRICT NEWS ತುಮಕೂರು

ಸಾರ್ವಜನಿಕರು ತಂಬಾಕು ಬಳಕೆ ಕಡಿಮೆ ಮಾಡಿ ಆರೋಗ್ಯ ವೃದ್ಧಿಸಿಕೊಳ್ಳಬೇಕೆಂದು ಪಾವಗಡ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಲಕ್ಷ್ಮಿಕಾಂತ್ ಕರೆ..

ಪಾವಗಡ .. ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಿಬ್ಬಂದಿಗಳ ನೇತೃತ್ವದಲ್ಲಿ ಪಟ್ಟಣದ ಆದರ್ಶ ಶಾಲಾಮಕ್ಕಳಿಂದ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಪಾವಗಡ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಲಕ್ಷ್ಮಿಕಾಂತ್ ಅವರು ಉದ್ಘಾಟಿಸಿ ಮಾತನಾಡುತ್ತಾ, ತಂಬಾಕು ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ ಆರೋಗ್ಯವೇ ಮಹಾಭಾಗ್ಯ ಎಂಬ ನಾಣ್ನುಡಿಯಂತೆ ಎಲ್ಲರೂ ನಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿಕೊಂಡು ಆರೋಗ್ಯ ವೃದ್ಧಿಸುವಂತಹ ಅಭ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದರು. ಕಾರ್ಯಕ್ರಮ ಉದ್ದೇಶಿಸಿ ಪಿ.ಇ.ಒ ಚಿದಾನಂದ ಸ್ವಾಮಿ ಮಾತನಾಡುತ್ತಾ, ನಮಗೆ ಉತ್ತಮ ಆರೋಗ್ಯ ಇರಬೇಕಾದರೆ ನಾವು ಒಳ್ಳೆಯ ಅಭ್ಯಾಸಗಳನ್ನು ರೂಡಿಸಿ ಕೊಳ್ಳಬೇಕೆಂದು, ಇತ್ತೀಚಿನ ದಿನಗಳಲ್ಲಿ ಪತ್ರಿಕೆಗಳು ಹಾಗೂ ಮಾಧ್ಯಮಗಳಲ್ಲಿ ತಂಬಾಕು ಸೇವನೆ ಇಂದ ಆಗುವ ಅನಾಹುತಗಳನ್ನು ದಿನನಿತ್ಯ ವರದಿ ಮಾಡುತ್ತಿದ್ದರೂ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ ಎಂದರು. ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರ ವೆಂದು ಅನೇಕ ಜಾಹಿರಾತುಗಳು ಬಂದರೂ ಜನರು ಎಚ್ಚೆತ್ತುಕೊಳ್ಳದಿರುವುದು ದುರದೃಷ್ಟಕರ ಸಂಗತಿಯಾಗಿದ್ದು. ತಂಬಾಕು ಸೇವನೆಯಿಂದಾಗಿ ಶ್ವಾಸಕೋಶ ಸಂಬಂಧಿಸಿದ ಕಾಯಿಲೆಗಳು ಒಂದು ಆರೋಗ್ಯ ಕ್ಷೀಣಿಸುತ್ತಿದೆ ಆದ್ದರಿಂದ ಶಾಲೆ ಮಕ್ಕಳು ತಮ್ಮ ಪೋಷಕರ ಹಾಗೂ ಸುತ್ತಮುತ್ತಲಿನ ಜನಗಳಿಗೆ ತಂಬಾಕು ಸೇವನೆಯಿಂದ ಆಗುವ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವುದು ಒಂದು ಉತ್ತಮ ಕಾರ್ಯ ಎಂದರು. ಕಾರ್ಯಕ್ರಮದಲ್ಲಿ ಪಿ.ಇ.ಓ ಚಿದಾನಂದ ಸ್ವಾಮಿ. ದೈಹಿಕ ಶಿಕ್ಷಕ ಬಸವರಾಜ್. ಆರೋಗ್ಯ ಇಲಾಖೆ ಪ್ರಕಾಶ್. ಪಾವಗಡ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಲಕ್ಷ್ಮಿಕಾಂತ್. ಆರೋಗ್ಯ ಸುರಕ್ಷಣಾಧಿಕಾರಿ ಪ್ರಭಾಮಣಿ. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಸುರೇಶ್. ಆರೋಗ್ಯ ನಿರೀಕ್ಷಕರಾದ ಚಂದ್ರಶೇಖರ್ ಹಾಗೂ ಆದರ್ಶ ಶಾಲೆಯ ಶಿಕ್ಷಕರು ಹಾಜರಿದ್ದರು.

ವರದಿ: ಶ್ರೀನಿವಾಸಲು ಎ