images 15

ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ : ಜೂನ್ 8 ರೊಳಗೆ ಅಹವಾಲು ಸಲ್ಲಿಸಲು ಸೂಚನೆ….!

Genaral STATE

ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ : ನ್ಯಾಯಮೂರ್ತಿ ಕೆ. ಭಕ್ತವತ್ಸಲ ವಿಚಾರಣಾ ಆಯೋಗಕ್ಕೆ ಜೂನ್ 8 ರೊಳಗೆ ಅಹವಾಲು ಸಲ್ಲಿಸಲು ಸೂಚನೆ

ಬೆಂಗಳೂರು, ಜೂನ್ 1 (ಕರ್ನಾಟಕ ವಾರ್ತೆ) :

ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಕುರಿತಂತೆ ವರದಿ ಸಲ್ಲಿಸಲು ರಚಿತವಾಗಿರುವ ನ್ಯಾಯಮೂರ್ತಿ ಕೆ. ಭಕ್ತವತ್ಸಲ ವಿಚಾರಣಾ ಆಯೋಗಕ್ಕೆ ಅಹವಾಲು ಅಥವಾ ಸಲಹೆಗಳನ್ನು ಜೂನ್ 8 ರೊಳಗೆ ಸಲ್ಲಿಸುವಂತೆ ಆಯೋಗವು ತಿಳಿಸಿದೆ.

ರಾಜ್ಯ ಸರ್ಕಾರವು ತನ್ನ ಆದೇಶದಲ್ಲಿ ಮೂರು ತಿಂಗಳೊಳಗೆ ವಿಚಾರಣಾ ವರದಿಯನ್ನು ಸಲ್ಲಿಸಲು ಆಯೋಗಕ್ಕೆ ಸೂಚಿಸಿದೆ. ಸಾರ್ವಜನಿಕರು, ವಿಶೇಷವಾಗಿ ಜನ ಪ್ರತಿನಿಧಿಗಳು, ಕಾರ್ಯದರ್ಶಿಗಳು, ನ್ಯಾಯಮೂರ್ತಿ ಕೆ. ಭಕ್ತವತ್ಸಲ ವಿಚಾರಣಾ ಆಯೋಗ, ಕೊಠಡಿ ಸಂಖ್ಯೆ : 133 ಮತ್ತು 134, ಮೊದಲನೇ ಮಹಡಿ ವಿಕಾಸ ಸೌಧ, ಡಾ ಅಂಬೇಡ್ಕರ್ ರಸ್ತೆ, ಬೆಂಗಳೂರು – 560 001 ಇವರಿಗೆ ತಮ್ಮ ಅಹವಾಲು ಅಥವಾ ಸಲಹೆಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿ ಅಥವಾ ವಿವರಗಳು, ಅವಶ್ಯಕತೆ ಇದ್ದಲ್ಲಿ, ಆಯೋಗದ ಕಾರ್ಯದರ್ಶಿಯವರನ್ನು ದೂರವಾಣಿ ಸಂಖ್ಯೆ : 080 – 2235 2152 ಹಾಗೂ 080 – 2203 4004 ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


ಡಿ ಪಿ ಎಂ