ಇಡಿ ಬಳಸಿಕೊಂಡು ಕೇಂದ್ರ ಕಾಂಗ್ರೆಸ್ ಪಕ್ಷದ ವಿರುದ್ಧ ದ್ವೇಶ ರಾಜಕಾರಣ ಮಾಡುತ್ತಿದೆ
ಪಾವಗಡ: .. ಕಾಂಗ್ರೆಸ್ ಪಕ್ಷದ ಬಗ್ಗೆ ದ್ವೇಷ ರಾಜಕಾರಣ ಮಾಡುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪಕ್ಷದ ಪ್ರಮುಖರು ಮಂಗಳವಾರ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ವಿರುದ್ಧ ಜಾರಿ ನಿರ್ದೇಶನಾಲಯದ ಮೂಲಕ ಬಿಜೆಪಿ ಸರ್ಕಾರ ಕಿರುಕುಳ ನೀಡಲಾಗುತ್ತಿದೆ.
ಬಿಜೆಪಿ ಸರ್ಕಾರ ಪಕ್ಷದ ಪ್ರಮುಖರ ಮೇಲೆ ಅನಗತ್ಯವಾಗಿ ಕಿರುಕುಳ ನೀಡುವುದರೊಂದಿಗೆ ದ್ವೇಷದ ರಾಜಕಾರಣ ನಡೆಸುತ್ತಿದೆ. ಇಂತಹ ಕೃತ್ಯ ಖಂಡನೀಯ. ಬಿಜೆಪಿ ಪಕ್ಷಕ್ಕೆ ಒಳ್ಳೆಯಾದಾಗುವುದಿಲ್ಲ. ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆಗಳನ್ನು ಬಳಸಿಕೊಂಡು ಬಿಜೆಪಿ ಪಕ್ಷದವರು ದುಷ್ಟತನ ಪ್ರದರ್ಶಿಸುತ್ತಿದ್ದಾರೆ ಎಂದು ಶಾಸಕ ವೆಂಕಟರವಣಪ್ಪ ಆರೋಪಿಸಿದರು.
ದೆಹಲಿಯ ಕಾಂಗ್ರೆಸ್ ಕಚೇರಿಗೆ ಪಕ್ಷದ ಜನಪ್ರತಿನಿಧಿಗಳು ಪದಾಧಿಕಾರಿಗಳು ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ. ಕಾಂಗ್ರೆಸ್ ನಾಯಕರು, ಕಾರ್ಯಕರ್ತರ ಮೇಲೆ ಪೊಲೀಸ್ ರು ದೌರ್ಜನ್ಯ ಎಸಗುತ್ತಿದ್ದಾರೆ. ಇದು ವಾಕ್ ಸ್ವಾಂತಂತ್ರವನ್ನು ಹತ್ತಿಕ್ಕುವ ಹುನ್ನಾರ ಎಂದು ದೂರಿದರು.
ಪಕ್ಷದ ಕಚೇರಿಯಿಂದ ಶನೈಶ್ಚರ ವೃತ್ತದ ಮೂಲಕ ತಹಶೀಲ್ದಾರ್ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ತಹಶೀಲ್ದಾರ್ ಕಚೇರಿ ಮುಂಭಾಗ ಕೆಲ ಕಾಲ ಪ್ರತಿಭಟನೆ ನಡೆಸಿ ನಂತರ ಗ್ರೇಡ್ 2 ತಹಶೀಲ್ದಾರ್ ಸುಮತಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಶಾಸಕ ವೆಂಕಟರವಣಪ್ಪ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಎಚ್.ವಿ.ವೆಂಕಟೇಶ್, ನಗರ ಘಟಕದ ಅಧ್ಯಕ್ಷ ಸುದೇಶ್ ಬಾಬು, ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಶಶಿ ಹುಲಿಕುಂಟೆ ಮಠ, ಮುಖಂಡ ಶಂಕರ್ ರೆಡ್ಡಿ, ಪುರಸಭೆ ಸದಸ್ಯ ಪಿ.ಎಚ್.ರಾಜೇಶ್, ರವಿ, ಎಂ ಎ ಜಿ ಇಮ್ರಾನ್, ನಾಗಬೂಷಣರೆಡ್ಡಿ, ಯುವ ಘಟಕದ ಅಧ್ಯಕ್ಷ ಸುಜಿತ್, ಮಹೇಶ್, ಪ್ರಮೋದ್ ಕುಮಾರ್, ಎಂ. ಎಸ್. ವಿಶ್ವನಾಥ್, ಷಾಬಾಬು, ರಿಜ್ವಾನ್, ನಾಗರಾಜು, ಹನುಮಂತರಾಯ ಉಪಸ್ಥಿತರಿದ್ದರು.