IMG 20220718 WA0075

ಪಶ್ಚಿಮ ಘಟ್ಟ ಸೂಕ್ಷ್ಮ ಪ್ರದೇಶ ಅಧಿಸೂಚನೆ ವಿರುದ್ಧ ಕಾನೂನು ಹೋರಾಟ

Genaral STATE

ಪಶ್ಚಿಮ ಘಟ್ಟ ಸೂಕ್ಷ್ಮ ಪ್ರದೇಶ ಅಧಿಸೂಚನೆ ವಿರುದ್ಧ ಕಾನೂನು ಹೋರಾಟ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ

ಬೆಂಗಳೂರು, ಜುಲೈ ೧೮ ಕೇಂದ್ರ ಪರಿಸರ ಸಚಿವಾಲಯ, ಪಶ್ಚಿಮ ಘಟ್ಟ ಸೂಕ್ಷ್ಮ ವಲಯದ ಬಗ್ಗೆ ಹೊರಡಿಸಿರುವ ಅಧಿಸೂಚನೆ ವಿರುದ್ಧ, ಕಾನೂನಿನ ಹೋರಾಟ ನಡೆಸಲು, ಮಲೆನಾಡು ಹಾಗೂ ಕರಾವಳಿ ಪ್ರದೇಶದ ಸಚಿವರು ಹಾಗೂ ಶಾಸಕರ ನಿರ್ಧಾರ.

ಈ ಕುರಿತು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಿದ್ದು, ಅಧಿಸೂಚನೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ

ಸಭೆಯ ನಂತರ, ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವರು, ಕೇಂದ್ರ ಪರಿಸರ ಸಚಿವಾಲಯದ ಅಧಿಸೂಚನೆ ಕುರಿತು, ಸಭೆಯಲ್ಲಿ, ಪಕ್ಷ ಬೇಧ ಮರೆತು, ಒಕ್ಕೊರಲಿನ ವಿರೋಧ ವ್ಯಕ್ತವಾಗಿದೆ

ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಯವರು ಸಭೆಯಲ್ಲಿ ಭಾಗವಹಿಸಿ ಮಾತನಾಡಿದ್ದಾರೆ.

ಅಧಿಸೂಚನೆ ವಿರುದ್ಧ ಕಾನೂನಿನ ಹೋರಾಟ ಮಾಡುವುದಲ್ಲದೆ, ಜನಾಭಿಪ್ರಾಯ ಸಂಗ್ರಹಕ್ಕೆ ನಿರ್ಧರಿಸಲಾಗಿದೆ.

ಅಧಿಸೂಚನೆ ವಿರುದ್ಧ, ಪರಿಸರ ಸಚಿವರ ಬಳಿಗೆ, ಮುಖ್ಯಮಂತ್ರಿಯವರ ನೇತೃತ್ವದಲ್ಲಿ, ಲೊಕಸಭಾ ಸದಸ್ಯರ ಹಾಗೂ ಶಾಸಕರನ್ನು ಒಳಗೊಂಡ ನಿಯೋಗವನ್ನು ತೆಗೆದುಕೊಂಡು ಹೋಗಲಾಗುತ್ತದೆ.

ವರದಿಯ ಬಗ್ಗೆ ಈ ಹಿಂದೆ ವ್ಯಕ್ತವಾದ ಯಾವುದೇ ಆಕ್ಷೇಪಣೆ ಗಳನ್ನು ಪರಿಗಣಿಸಿಲ್ಲ ಎಂದ ಸಚಿವರು, ಸರಿಯಾದ ಹಾಗೂ ವೈಜ್ಞಾನಿಕ ಸರ್ವೇ ಕಾರ್ಯ ನಡೆದಿಲ್ಲವೆಂದು ಹೇಳಿದರು.

ಒಂದು ವೇಳೆ ಅಧಿಸೂಚನೆ ಅನುಷ್ಠಾನ ಗೊಂಡರೆ ಗ್ರಾಮೀಣ ಭಾಗದ ಜನತೆಯ ಬದುಕು ಅಸಹನೀಯ ವಾಗುತ್ತದೆ ಎಂದ ಸಚಿವರು, ಅಧಿಸೂಚನೆಯನ್ನು ಶತಾಯ ಗತಾಯ ವಿರೋದಿಸಲಾಗುತ್ತದೆ,ಎಂದು ತಿಳಿಸಿದರು.

ಸಭೆಯಲ್ಲಿ, ಸಂಪುಟ ಸದಸ್ಯರಾದ, ಶ್ರೀ ಆನಂದ್ ಸಿಂಗ್, ಶಿವರಾಮ್ ಹೆಬ್ಬಾರ್, ಎಸ್ ಅಂಗಾರ, ಅಸೆಂಬ್ಲಿ ಸ್ಪೀಕರ್ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿಯವರು, ಮಾಜಿ ಮುಖ್ಯಮಂತ್ರಿ ಶ್ರೀ B S ಯಡಿಯೂರಪ್ಪ ಹಾಗೂ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್, ಶಾಸಕರು ಭಾಗವಹಿಸಿದ್ದರು.