IMG 20220725 WA0052
DISTRICT NEWS ಬೆಂಗಳೂರು

Bangalore:ಸಂಚಾರ ದಟ್ಟಣೆ ನಿರ್ವಹಣೆಗೆ ಕ್ರಮ…!

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಜೊತೆ ಸಮನ್ವಯ ಸಭೆ:

ಬೆಂಗಳೂರು: ನಗರದಲ್ಲಿ ಪರಿಶೀಲನೆ ನಡೆಸಿರುವ ಪ್ರಮುಖ ಜಂಕ್ಷನ್ ಗಳಲ್ಲಿ ಸಾಕಷ್ಟು ಕೆಲಸಗಳಾಗಿದ್ದು, ಸಂಚಾರಿ ಪೊಲೀಸ್ ಇಲಾಖೆಯ ಪ್ರಾಥಮಿಕ ವರದಿ ಪ್ರಕಾರ ಬೇರೆ ಬೇರೆ ಸಮಯದಲ್ಲಿ ಸಾಂದ್ರತೆಗೆ ಅನುಗುಣವಾಗಿ ಸಂಚಾರ ದಟ್ಟಣೆಯು ಶೇ. 15 ರಿಂದ ಶೇ. 40 ರಷ್ಟು ಸುಧಾರಣೆ ಕಂಡಿದೆ ಎಂದು ಮುಖ್ಯ ಆಯಕ್ತರಾದ ತುಷಾರ್ ಗಿರಿ ನಾಥ್ ರವರು ತಿಳಿಸಿದರು.

IMG 20220725 WA0051

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಜೊತೆ ಸಮನ್ವಯ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು ಒಟ್ಟಿಗೆ ಸೇರಿ ಎಲ್ಲೆಲ್ಲಿ ಏನು ಸಮಸ್ಯೆಯಿದೆ, ಎಲ್ಲೆಲ್ಲಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕಿದೆ ಎಂಬುದನ್ನು ತಿಳಿದು ಸಮರ್ಪಕವಗಿ ಕೆಲಸ ಮಾಡಲಾಗುತ್ತಿದೆ. ಅದರಂತೆ ಹಂತ-ಹಂತವಾಗಿ ಸಮಸ್ಯೆಗಳನ್ನು ಬಗೆಹರಿಸಲಾಗುತ್ತಿದೆ. ಈ ಪೈಕಿ ಈಗಾಗಲೇ ಪರಿಶೀಲಿಸಿರುವ ಪ್ರಮುಖ ಜಂಕ್ಷನ್‌ಗಳಲ್ಲಿ ಕೈಗೆತ್ತಿಕೊಂಡಿರುವ ಹಲವು ಕ್ರಮಗಳಿಂದ ವಿವಿಧ ಜಂಕ್ಷನ್‌ಗಳಲ್ಲಿ ಬೇರೆ ಬೇರೆ ಸಮಯದಲ್ಲಿ ಶೇ. 15 ರಿಂದ ಶೇ. 40 ರವರೆಗೆ ಸಂಚಾರ ದಟ್ಟಣೆ ಕಡಿಮೆಯಾಗಿದ್ದು, ಅದನ್ನು ಇನ್ಫಾಸ್ಟ್ರಕ್ಚರ್ ಸಂಸ್ಥೆಗೆ ಪರಿಶೀಲನೆ ನಡೆಸಿ ನಿಖರ ವರದಿ ನೀಡಲು ತಿಳಿಸಲಾಗಿದೆ ಎಂದು ತಿಳಿಸಿದರು.

ನಗರದ ಪ್ರಮುಖ ಜಂಕ್ಷನ್ ಗಳಾದ ಹೆಬ್ಬಾಳ, ಕೆ.ಆರ್.ಪುರ, ಗೊರಗುಂಟೆ ಪಾಳ್ಯ, ಸಾರಕ್ಕಿ, ಸಿಲ್ಕ್ ಬೋರ್ಡ್ ಸೇರಿದಂತೆ ಇನ್ನಿತರೆ ಜಂಕ್ಷನ್ ಗಳಲ್ಲಿ ವಿವಿಧ ಇಲಾಖೆಗಳಿಂದ ಕೆಲಸ ನಡೆಯುತ್ತಿದ್ದು, ಬಹುತೇಕ ಕಡೆ ಶೇ. 50 ರಷ್ಟು ಕೆಲಸ ಪೂರ್ಣಗೊಂಡಿದ್ದು, ಬಾಕಿಯಿರುವ ಶೇ. 50 ರಷ್ಟು ಕೆಲಸ ಮಾಡಿ ಮುಗಿಸಿದರೆ ಸಂಚಾರ ದಟ್ಟಣೆಯ ಸಮಸ್ಯೆ ನಿಯಂತ್ರಣಕ್ಕೆ ಬರಲಿದೆ ಎಂದು ಹೇಳಿದರು.

ನಗರದಲ್ಲಿ ರಸ್ತೆ ಗುಂಡಿಗಳಿಗೆ ಸಂಬಂಧಿಸಿದಂತೆ ಸಂಚಾರಿ ಪೊಲೀಸ್ ಇಲಾಖೆಯಿಂದ ಗುರುತಿಸಿರುವ 3,750 ಗುಂಡಿಗಳಲ್ಲಿ ಸುಮಾರು 3,000 ಗುಂಡಿಗಳನ್ನು ಮುಚ್ಚಲಾಗಿದ್ದು, ಬಾಕಿಯಿರುವ 750 ಗುಂಡಿಗಳನ್ನು ವಾರದೊಳಗಾಗಿ ಮುಚ್ಚಲು ಅಧಿಕಾರಿಗಳಿಗೆ ತಿಳಿಸಲಾಗಿದೆ. ಪೊಲೀಸ್ ಇಲಾಖೆಯಿಂದ ಗುರುತಿಸಿದ್ದ ರಸ್ತೆ ಗುಂಡಿಗಳನ್ನು ಮುಚ್ಚಿರುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.

ಪಾಲಿಕೆ ವ್ಯಾಪ್ತಿಯಲ್ಲಿ 50 ಕಡೆ ವಾಟರ್ ಲಾಗಿಂಗ್ ಪಾಯಿಂಟ್ಸ್ ಗಳನ್ನು ಗುರುತಿಸಿದ್ದು, ಬಹುತೇಕ ಕಡೆ ವಾಟರ್ ಲಾಗಿಂಗ್ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಇನ್ನು 54 ರಸ್ತೆ ಮೇಲ್ಮೈ ಹಾಳಾಗಿರುವ ಕಡೆಯೂ ಕೆಲವೆಡೆ ಸಮಸ್ಯೆ ಬಗೆಹರಿಸಲಾಗಿದ್ದು, ಸಂಪೂರ್ಣ ರಸ್ತೆಯನ್ನು ಸರಿಪಡಿಸಿಬೇಕಿದೆ. ಈ ಪೈಕಿ ಒಂದು ವಾರದಲ್ಲಿ ತಾತ್ಕಾಲಿಕವಾಗಿ ಇರುವ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಮುಂದಿನ ದಿನಗಳಲ್ಲಿ ಶಾಶ್ವತ ಪರಿಹಾರ ಕಲ್ಪಿಸಿ ಇರುವ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ತಿಳಿಸಿದರು

IMG 20220725 WA0050

.

ಸ್ಮಾರ್ಟ್ ಸಿಟಿ ರಸ್ತೆಗಳ ನಿರ್ವಹಣೆ ಮಾಡಿ:

ಬೆಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ಕೈಗೆತ್ತಿಕೊಂಡಿರುವ ರಸ್ತೆಗಳಲ್ಲಿ ವಾಟರ್ ಲಾಗಿಂಗ್ ಆಗದಂತೆ ನೋಡಿಕೊಳ್ಳಬೇಕು. ಎಲ್ಲಾದರು ರಸ್ತೆ ಗುಂಡಿಗಳು ಬಿದ್ದಿದ್ದರೆ ಕೂಡಲೆ ರಸ್ತೆ ಗುಂಡಿಗಳನ್ನು ಮುಚ್ಚಬೇಕು. ಪಾದಚಾರಿ ಮಾರ್ಗವನ್ನು ಸರಿಯಾಗಿ ನಿರ್ವಹಣೆ ಮಾಡಬೇಕು ಹಾಗೂ ಭಗ್ನಾವೇಷೇಶಗಳು ಹಾಕಿದ್ದರೆ ಕೂಡಲೆ ತೆರವುಗೊಳಿಸಲು ಸ್ಮಾರ್ಟ್ ಸಿಟಿ ಮುಖ್ಯ ಅಭಿಯಂತರರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಒಳಾಡಳಿತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾದ ರಜನೀಶ್ ಗೋಯಲ್, ಆಡಳಿತಗಾರರಾದ ರಾಕೇಶ್ ಸಿಂಗ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಪ್ರತಾಪ್ ರೆಡ್ಡಿ, ಬಿ.ಎಂ.ಆರ್.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಅಂಜುಂ ಫರ್ವೇಜ್, ಜಲಮಂಡಳಿ ಅಧ್ಯಕ್ಷರಾದ ಜಯರಾಮ್, ಸಂಚಾರಿ ಪೋಲಿಸ್ ಜಂಟಿ ಆಯುಕ್ತರಾದ ರವಿಕಾಂತೆ ಗೌಡ, ಬಿಎಂಟಿಸಿ ನಿರ್ದೇಶಕರಾದ ಸೂರ್ಯ ಸೇನ್, ಪಾಲಿಕೆಯ ವಿಶೇಷ ಆಯುಕ್ತರುಗಳು, ಬಿ.ಎಂ.ಆರ್.ಸಿ.ಎಲ್, ಬಿ.ಎಂ.ಟಿ.ಸಿ, ಕೆ.ಎಸ್.ಆರ್.ಟಿ.ಸಿ, ಬಿಡಿಎ, ರೈಲ್ವೇ, ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.