DSC 5026 scaled

Tumkur:ಭೂಮಿ ಯೋಜನೆ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಜಿಲ್ಲಾಧಿಕಾರಿ ಸೂಚನೆ…!

DISTRICT NEWS ತುಮಕೂರು

ಭೂಮಿ ಯೋಜನೆ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಜಿಲ್ಲಾಧಿಕಾರಿ ಸೂಚನೆ
ತುಮಕೂರು (ಕ.ವಾ) ಜು.25: ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿಂದು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಚರ್ಚಿಸಿದರು.
ಗ್ರಾಮೀಣ ಮತ್ತು ನಗರ ಪ್ರದೇಶಗಳ ಅಂಗನವಾಡಿ ಕೇಂದ್ರಗಳಿಗೆ ನಿವೇಶನ ಒದಗಿಸಬೇಕಾಗಿದ್ದು, ಕನಿಷ್ಠ 20×30 ಅಳತೆಯ ನಿವೇಶನಗಳನ್ನು ಪಾಲಿಕೆ, ಸ್ಥಳೀಯ ಸಂಸ್ಥೆಗಳ ಆಯುಕ್ತರು, ಪೌರಾಯುಕ್ತರು, ಮುಖ್ಯಾಧಿಕಾರಿಗಳು ಮತ್ತು ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಪಿಡಿಓಗಳು ನಿವೇಶನ ಒದಗಿಸುವಂತೆ ಸೂಚಿಸಿದರು.
15ನೇ ಹಣಕಾಸು ಪ್ರಗತಿ ಪರಿಶೀಲನೆ ನಡೆಸಿದ ಅವರು, ಕುಡಿಯುವ ನೀರು, ಅಮೃತ್ ನಿರ್ಮಲ ನಗರ ಯೋಜನೆ, ಅಂಬೇಡ್ಕರ್, ವಾಜಪೇಯಿ ವಸತಿ ಯೋಜನೆಗಳಡಿ ನಿರೀಕ್ಷಿತ ಪ್ರಗತಿ ಸಾಧಿಸುವಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.
ನೋಟಿಸ್ ಅವಧಿಯ ಭೂಮಿ ಅರ್ಜಿಗಳನ್ನು 33 ದಿನಗಳೊಗಾಗಿ ವಿಲೇವಾರಿ ಮಾಡದ ತಹಸಿಲ್ದಾರ್, ಕಂದಾಯ ನಿರೀಕ್ಷಕ, ಸರ್ವೇ ಸೂಪರ್‍ವೈಸರ್‍ಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು. ಜಿಲ್ಲೆಯಲ್ಲಿ 6850 ಪಹಣಿ ಕಾಲಂ 3/9 ಮಿಸ್ ಮ್ಯಾಚ್ ಪ್ರಕರಣಗಳಿದ್ದು, ಶೀಘ್ರ ವಿಲೇವಾರಿ ಮಾಡುವಂತೆ ಸೂಚಿಸಿದರು.

DSC 5013


ಕಂದಾಯ ಇಲಾಖೆಯ ಸರ್ಕಾರಿ ಭೂಮಿಯಲ್ಲಿರುವ ಶಾಲೆಗಳನ್ನು ಶಿಕ್ಷಣ ಇಲಾಖೆಯ ಹೆಸರಿಗೆ ಕಾಯ್ದಿರಿಸಿ ಖಾತೆ ಮಾಡಿಸುವ ಕೆಲಸ ಪ್ರಗತಿಯಲ್ಲಿರುತ್ತದೆ. ತುಮಕೂರು, ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ ವ್ಯಾಪ್ತಿಯಲ್ಲಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ನಿಗಧಿತ ನಮೂನೆಯಲ್ಲಿ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ತಾಲ್ಲೂಕು ಕಚೇರಿ ಹಾಗೂ ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಿಗೆ ಶಿಕ್ಷಣ ಇಲಾಖೆ ಬಿ.ಇ.ಓ, ಬಿ.ಆರ್.ಪಿ,ಮತ್ತು ಸಿ.ಆರ್.ಪಿ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಿದರು. ತಾಲ್ಲೂಕುವಾರು ಪ್ರತಿ ವಾರಕ್ಕೆ ಕನಿಷ್ಠ 5 ಪ್ರಕರಣಗಳನ್ನು ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.


ಕೋವಿಡ್ ಲಸಿಕಾಕರಣಕ್ಕೆ ಸಂಬಂಧಿಸಿದಂತೆ 12-14 ವಯೋಮಾನದವರ ಮೊದಲೆರಡು ಡೋಸ್ ಕ್ರಮವಾಗಿ ಶೇ 114.8%, ಶೇ.91.7 ಮತ್ತು 15-17 ವಯಸ್ಸಿನವರ ಲಸಿಕಾಕರಣ ಮೊದಲ ಡೋಸ್ ಶೇ.80.8% ಎರಡನೇ ಡೋಸ್ ಶೇ 75.5 ಇದ್ದು ಶೀಘ್ರ ಶೇ.100ರಷ್ಟು ಲಸಿಕಾಕರಣ ಪೂರೈಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಜುಲೈ 15 ರಿಂದ ಹತ್ತಿರದ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ 18 ರಿಂದ 59ರ ವಯೋಮಾನದವರಿಗೆ ಮುಂಜಾಗ್ರತಾ ಡೋಸ್ ನೀಡುತ್ತಿದ್ದು ಲಸಿಕಾಕರಣಕ್ಕೆ ಆದ್ಯತೆ ನೀಡುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿ ವಿ.ಅಜಯ್, ತಹಸಿಲ್ದಾರ್ ಮೋಹನ್ ಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ: ಟಿ.ಎ. ವೀರಭದ್ರಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.