KACDC

ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ….!

Genaral STATE

ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಬೆಂಗಳೂರು, ಆಗಸ್ಟ್ 01,  (ಕರ್ನಾಟಕ ವಾರ್ತೆ) :
ಕರ್ನಾಟಕ ಆರ್ಯ ವೈಶ್ಯ ಸಮುದಯದ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ “ಸ್ವಯಂ ಉದ್ಯೋಗ ಸಾಲ ನೇರ ಸಾಲ ಯೋಜನೆ” ಮತ್ತು ಅರಿವು ಸಾಲ ಯೋಜನೆಯಲ್ಲಿ ಸೌಲಭ್ಯ ಒದಗಿಸಲು ಕರ್ನಾಟಕ ಆರ್ಯ ವೈಶ್ವಯ ಸಮುದಾಯಕ್ಕೆ ಸೇರಿದ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಉದ್ಯೋಗ ನೇರ ಸಾಲ ಹಾಗೂ ಅರಿವೂ ಶೈಕ್ಷಣಿಕ ಸಾಲ:
ಯೋಜನೆಗಳಲ್ಲಿ ಸಾಲ ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್ಲೈನ್ ಮೂಲಕ  kaede.karnataka.gov.in  ಇಲ್ಲಿ  ಸಲ್ಲಿಸಬೇಕಾಗಿರುತ್ತದೆ. ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು. ಅರ್ಹ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ- ಜಿ `ಯಲ್ಲಿ ಪಡೆದಿರಬೇಕು. (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು),  ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರ ಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರ, ಆಧಾರ್ಗೆ ಮೊಬೈಲ್ ಸಂಖ್ಯೆ ಜೋಡಣೆಯಾಗಿರಬೇಕು. ಅರ್ಜಿದಾರರ ಆಧಾರ್ಗೆ ಬ್ಯಾಂಕ್ ಖಾತೆಯು ಜೋಡಣೆಯಾಗಿರಬೇಕು.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ :
ಈ ಯೋಜನೆಯಡಿ ದಿನಾಂಕ 29-17-2022 ರಿಂದ 11-09-2022 ವರೆಗೆ ಅರ್ಜಿ ಸಲ್ಲಿಸಬಹುದಾಗಿದ್ದು,  ಆರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.3,00,000/-ಗಳ ಮಿತಿಯ ಒಳಗಿರಬೇಕು.  ಆರ್ಜಿದಾರರು 18 ವರ್ಷ ಮೇಲ್ಪಟ್ಟು 45 ವರ್ಷದ ಒಳಗಿನವರಾಗಿಬೇಕು. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.  ಈ ಯೋಜನೆಯಲ್ಲಿ ಕನಿಷ್ಠ ರೂ.50,000/-ಗಳಿಂದ ಗರಿಷ್ಟ ರೂ.1,00,000/-ಗಳ ಸಾಲ ಒದಗಿಸಲಾಗುವುದು, ಈ ಮೊತ್ತದಲ್ಲಿ ಶೇ.20ರಷ್ಟು ಸಹಾಯ ಧನ ಹಾಗೂ ಶೇ.80 ರಷ್ಟು ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುವುದು, 2 ತಿಂಗಳ ವಿರಾಮ-ಅವಧಿ ಇರುತ್ತದೆ, ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಈಗಾಗಲೇ ಬೇರೆ ಯಾವುದೇ ನಿಗಮಗಳ ಯೋಜನೆಗಳಲ್ಲಿ ಅಥವ ಈ ನಿಗಮದಲ್ಲೇ ಈ ಹಿಂದೆ ಸಾಲ ಪಡೆದಿದ್ದಲ್ಲಿ ಅಂತಹ ಅಭ್ಯರ್ಥಿಗಳು ಹಾಗೂ ಅವರ ಕುಟುಂಬದವರಿಗೆ ಸಾಲ ಸೌಲಭ್ಯ ಪಡೆಯಲು ಅರ್ಹವಿರುವುದಿಲ್ಲ.

ಅರಿವು ಶೈಕ್ಷಣಿಕ ಸಾಲ ಯೋಜನೆ :
ಈ ಯೋಜನೆಯಡಿ ದಿನಾಂಕ: 08-08-2022 ರಿಂದ 11-09-2022 )ವರೆಗೆ ಅರ್ಜಿ ಸಲ್ಲಿಸಬಹುದು. ಈ ಯೋಜನೆಯಲ್ಲಿ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಇತ್ಯಾದಿ ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಸಿ.ಇ.ಟಿ./ಎನ್ ಇಇಟಿ ಮೂಲಕ ಆಯ್ಕೆಯಾಗಿ ಮತ್ತು ವೃತ್ತಿಪರ ಪಿ.ಎಚ್.ಡಿ., ಕೋರ್ಸ್ನಲ್ಲಿ ವ್ಯಾಸಂಗ ಮಾಡುವವರಿಗೆ ಅರಿವು ಶೈಕ್ಷಣಿಕ ಸಾಲ ನೀಡಲಾಗುವುದು.  ಈ ಯೋಜನೆಯಲ್ಲಿ ಆರ್ಯ ವೈಶ್ಯ ಸಮುದಾಯದ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ.2ರ ಬಡ್ಡಿ ದರದಲ್ಲಿ ವಾರ್ಷಿಕ ಗರಿಷ್ಠ ರೂ.1,00,000/-ಗಳ ಶೈಕ್ಷಣಿಕ ಸಾಲವನ್ನು ಮಂಜೂರು ಮಾಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ ನಾಲ್ಕು ತಿಂಗಳ ವಿರಾಮ ಅವಧಿ ಇರುತ್ತದ ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.
ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿಬೇಕು.  ಒಂದು ಕುಟಂಬದಲ್ಲಿ ಇಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.  ಪ್ರಾಂಶುಪಾಲರಿಂದ ದೃಢೀಕರಿಸಿದ ಪ್ರಸ್ತುತ ವರ್ಷದ ವ್ಯಾಸಂಗ ಪ್ರಮಾಣ ಪತ್ರ ಮತ್ತು ನಿಗದಿತ ನಮೂನೆ ಪತ್ರ ಹೊಂದಿರಬೇಕು.

ವಿಶೇಷ ಸೂಚನೆ: ಮಹಿಳೆಯರಿಗೆ ಶೇ.33 ಹಾಗೂ ವಿಕಲಚೇತನರಿಗೆ ಶೇ.5ರಷ್ಟು ಮೀಸಲಾತಿ ಇರುತದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ, ಅಭಿವೃದ್ಧಿ ನಿಗಮ ನಿಯಮಿತದ ವೆಬ್ ಸೈಟ್ kacdc.karnataka.gov.in ನಲ್ಲಿ ಅಥವಾ ಕೇಂದ್ರ ಕಛೇರಿಯ ದೂರವಾಣಿ ಸಂಖ್ಯೆ-9448451111 ಬೆಳ್ಳಿಗೆ 10:00 ರಿಂದ 5-30ರ ವರೆಗೆ ಸಂಪರ್ಕಿಸುವುದು ಹಾಗೂ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಬೆಂಗಳೂರು ಉತ್ತರ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆ 080-23539600/23539601ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.