DSC 5791 scaled

ವಿಧಾನಪರಿಷತ್: ಶಿಕ್ಷಕರ ನೇಮಕಾತಿಗೆ ಅಗತ್ಯ ಕ್ರಮ…!

Genaral STATE

ಶಿಕ್ಷಕರ ನೇಮಕಾತಿಗೆ ಅಗತ್ಯ ಕ್ರಮ – ಬಿ.ಸಿ. ನಾಗೇಶ್

ಬೆಂಗಳೂರು, ಸೆಪ್ಟೆಂಬರ್ 15, (ಕರ್ನಾಟಕ ವಾರ್ತೆ) :
ಶಿಕ್ಷಕರ ನೇಮಕಾತಿಗಾಗಿ ಸರ್ಕಾರವು ಈಗಾಗಲೇ ಅಗತ್ಯ ಕ್ರಮ ವಹಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರು ತಿಳಿಸಿದರು.

ಇಂದು ವಿಧಾನ ಪರಿಷತ್ತಿನ ಕಲಾಪದ ವೇಳೆ ವಿಧಾನ ಪರಿಷತ್ತಿನ ಸದಸ್ಯರಾದ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಇವರ ಶೂನ್ಯ ವೇಳೆ ಪತ್ರಕ್ಕೆ ಉತ್ತರಿಸಿದ ಸಚಿವರು, ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಖಾಲಿಯಿರುವ 2120 ದೈಹಿಕ ಶಿಕ್ಷಣ ಶಿಕ್ಷಕರ ಖಾಲಿ ಹುದ್ದೆಗಳನ್ನು ಭರ್ತಿಗೆ ಅನುಮತಿ ನೀಡಲು ಕೋರಿದ ಕಡತವು ಆರ್ಥಿಕ ಇಲಾಖೆಯ ಪರಿಶೀಲನೆಯಲ್ಲಿರುತ್ತದೆ.

ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿಯಿರುವ ದೈಹಿಕ ಶಿಕ್ಷಕರ ಹುದ್ದೆಗಳ ಪೈಕಿ 200 ದೈಹಿಕ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಕೇಂದ್ರಿಕೃತ ದಾಖಲಾತಿ ಘಟಕ, ಬೆಂಗಳೂರು (ಸಿಎಸಿ) ಇವರ ಮೂಲಕ ಕ್ರಮವಹಿಸುವಂತೆ ಸರ್ಕಾರದ ಪತ್ರ ಸಂಖ್ಯೆ: ಇಪಿ 14 ಎಲ್ಬಿಪಿ 2022ರಲ್ಲಿ ದಿ:13/09/2022ರಲ್ಲಿ ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರಿಗೆ ತಿಳಿಸಲಾಗಿದೆ.

ಸರ್ಕಾರದ ಅಧಿಸೂಚನೆ ಸಂಖ್ಯೆ ಇಡಿ 35 ಡಿಜಿಒ 2009 ದಿ:15-05-2014ರ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಒಟ್ಟು 20 ದೈಹಿಕ ಶಿಕ್ಷಣ ಉಪನ್ಯಾಸಕರ ಹುದ್ದೆಗಳಿಗೆ ಮಂಜೂರಾತಿ ಇರುತ್ತದೆ.

ಮಂಜೂರಾದ ಹುದ್ದೆಗಳಲ್ಲಿ ಶೇಕಡಾ 50 ರಷ್ಟನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು, ಶೇಕಡ 50 ರಷ್ಟನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರೇಡ್-1 ದೈಹಿಕ ಶಿಕ್ಷಕರಿಗೆ ಬಡ್ತಿ ನೀಡುವ ಮೂಲಕ ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ.

ಪ್ರಸ್ತುತ ಮಂಜೂರಾಗಿರುವ 20 ದೈಹಿಕ ಶಿಕ್ಷಣ ಉಪನ್ಯಾಸಕರ ಹುದ್ದೆಗಳು ಖಾಲಿಯಿದ್ದು, ಇದರಲ್ಲಿ 10 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿಗಾಗಿ ದಿನಾಂಕ: 18-11-2021ರಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ.

10 ಹುದ್ದೆಗಳನ್ನು ಬಡ್ತಿ ಮೂಲಕ ಭರ್ತಿ ಮಾಡಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಹ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರಿಂದ ವ್ಯಕ್ತಿ ಪೂರ್ವೋತ್ತರ  ದಸ್ತಾವೇಜುಗಳನ್ನು ಸಲ್ಲಿಸುವಂತೆ ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರಿಗೆ ದಿನಾಂಕ: 01-08-2022 ರಲ್ಲಿ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.

ವಸತಿ ನಿಲಯವನ್ನು ಕಲ್ಪಿಸಲಾಗಿದೆ ಎಂದರು.

DSC 5589

15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗಳ ನೇಮಕಾತಿ


      ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿದ್ದು, ಆದಷ್ಟು ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

     ಅವರು ಇಂದು ವಿಧಾನಸಭಾ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಬಿ.ಶಿವಣ್ಣ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಗೌರವ ಸಂಭಾವನೆ ಪಾವತಿಸುವ ಮೂಲಕ ತಾತ್ಕಾಲಿಕವಾಗಿ 27 ಸಾವಿರ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಲಾಗಿದೆ ಎಂದರು.

ಸರ್ಕಾರಿ ಪ್ರೌಢಶಾಲೆಗಳ ವಿವಿಧ ವೃಂದಗಳ 25 ಸಾವಿರ ಹುದ್ದೆಗಳನ್ನು  ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಉದ್ದೇಶಿಸಲಾಗಿದೆ.  ರಾಜ್ಯದ ಆರ್ಥಿಕ ಸಂಪನ್ಮೂಲಗಳನ್ನಾಧರಿಸಿ ಖಾಲಿರುವ ಮತ್ತು ಖಾಲಿಯಾಗುವ ಶಿಕ್ಷಕರ ಹುದ್ದೆಗಳನ್ನು ಆದ್ಯತೆ ಮೇರೆಗೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.