IMG 20220924 WA0049 3

ನಿಖಿಲ್‌ ಕುಮಾರಸ್ವಾಮಿ ಅವರ ಪುತ್ರ ಚಿ.ಅವ್ಯಾನ್ ದೇವ್ ಅವರ ಮೊದಲ ಹುಟ್ಟುಹಬ್ಬ…!

Genaral STATE

ನಿಖಿಲ್‌ ಕುಮಾರಸ್ವಾಮಿ ಅವರ ಪುತ್ರ ಚಿ.ಅವ್ಯಾನ್ ದೇವ್ ಅವರ ಮೊದಲ ಹುಟ್ಟುಹಬ್ಬ

ಮರಿ ಮೊಮ್ಮಗನನ್ನು ಆಶೀರ್ವದಿಸಿದ ಮಾಜಿ ಪ್ರಧಾನಿಗಳು
ಮೊಮ್ಮಗನ ಜನ್ಮದಿನದ ಸಂಭ್ರಮದಲ್ಲಿ ಹೆಚ್ಡಿಕೆ ದಂಪತಿ


ಬೆಂಗಳೂರು: ಜಾತ್ಯತೀತ ಜನತಾದಳದ ಯುವ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹಾಗೂ ಶ್ರೀಮತಿ ರೇವತಿ ಅವರ ಸುಪುತ್ರ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಶ್ರೀಮತಿ ಅನಿತಾ ಕುಮಾರಸ್ವಾಮಿ ಅವರ ಅಕ್ಕರೆಯ ಮೊಮ್ಮಗ ಚಿ.ಅವ್ಯಾನ್ ದೇವ್ ಅವರ ಮೊದಲ ಹುಟ್ಟುಹಬ್ಬವನ್ನು ಮಾಜಿ ಪ್ರಧಾನಿಗಳು ಮತ್ತು ಮಾಜಿ ಮುಖ್ಯಮಂತ್ರಿಗಳ ಕುಟುಂಬದಲ್ಲಿ ಶನಿವಾರದಂದು ಸರಳವಾಗಿ ಆಚರಿಸಲಾಯಿತು.

IMG 20220924 WA0051 2

ಇಂದು ಬೆಳಗ್ಗೆಯೇ ನಿಖಿಲ್‌ ಕುಮಾಸ್ವಾಮಿ ಅವರು ಕುಟುಂಬ ಸಮೇತವಾಗಿ ರಾಮನಗರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಹಾಗೂ ಶ್ರೀ ಅಭಯ ಆಂಜನೇಯ ಸ್ವಾಮಿ ದೇವಾಲಯಕ್ಕೆ ತೆರಳಿ ತಮ್ಮ ಸುಪುತ್ರನ ಹೆಸರಿನಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಬಳಿಕ, ಅಲ್ಲಿಯೇ ಅಭಿಮಾನಿಗಳು ಹಾಗೂ ಜೆಡಿಎಸ್‌ ಪಕ್ಷದ ಕಾರ್ಯಕರ್ತರು ಜನ್ಮದಿನದ ಕೇಕ್‌ ಕತ್ತರಿಸಿ ಚಿ.ಅವ್ಯಾನ್ ದೇವ್ ಅವರಿಗೆ ಶುಭ ಹಾರೈಸಿದರು. ಈ ಸಂದರ್ಭಲ್ಲಿ ಶ್ರೀಮತಿ ಅನಿತಾ ಕುಮಾರಸ್ವಾಮಿ ಹಾಗೂ ಶ್ರೀಮತಿ ರೇವತಿ ಅವರೂ ಇದ್ದರು.

IMG 20220924 WA0054 1

ಸಂಜೆ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಅವರ ನಿವಾಸದಲ್ಲಿ ಕೇಕ್‌ ಕತ್ತರಿಸಿ ಚಿ.ಅವ್ಯಾನ್ ದೇವ್ ಜನ್ಮದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಹೆಚ್.ಡಿ.ದೇವೇಗೌಡರು ಮತ್ತು ಶ್ರೀಮತಿ ಚೆನ್ನಮ್ಮ ದೇವೇಗೌಡರು ಮರಿ ಮೊಮ್ಮಗನನ್ನು ಆಶೀರ್ವದಿಸಿದರು. ಈ ಸಂದರ್ಭದಲ್ಲಿ ನಿಖಿಲ್‌ ಕುಮಾರಸ್ವಾಮಿ, ಶ್ರೀಮತಿ ರೇವತಿ ಅವರು ಉಪಸ್ಥಿತರಿದ್ದರು.

IMG 20220924 WA0050

ಹಾಗೆಯೇ, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಶ್ರೀಮತಿ ಅನಿತಾ ಕುಮಾರಸ್ವಾಮಿ ಅವರ ನಿವಾಸದಲ್ಲಿಯೂ ಕೇಕ್‌ ಕತ್ತರಿಸಿ ಮೊಮ್ಮಗನ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಿಖಿಲ್‌ ಕುಮಾರಸ್ವಾಮಿ ಮತ್ತು ಶ್ರೀಮತಿ ರೇವತಿ ಅವರು ಇದ್ದರು.