IMG 20221015 WA0005

Karnataka: ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಸ‌ನ್ನ ಬಾಲಚಂದ್ರ ವರಳೆ ಪ್ರಮಾಣ ವಚನ ಸ್ವೀಕಾರ

STATE

ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಸ‌ನ್ನ ಬಾಲಚಂದ್ರ ವರಳೆ ಪ್ರಮಾಣ ವಚನ ಸ್ವೀಕಾರ
ಬೆಂಗಳೂರು, ಅ.15(ಕರ್ನಾಟಕ ವಾರ್ತೆ) : ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಗೌರವಾನ್ವಿತ ಶ್ರೀ ಪ್ರಸ‌ನ್ನ ಬಾಲಚಂದ್ರ ವರಳೆ ಅವರು ಪದವಿಯ ಅಧಿಕಾರ ಪ್ರಮಾಣವಚನವನ್ನು ಸ್ವೀಕರಿಸಿದರು.
ರಾಜಭವನದ ಗಾಜಿನ‌ಮನೆಯಲ್ಲಿ ಶನಿವಾರ ಬೆಳಗ್ಗೆ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣವಚನವನ್ನು ಬೋಧಿಸಿದರು.

IMG 20221015 WA0008

ಸಮಾರಂಭದಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು, ಕುಟುಂಬ ವರ್ಗದವರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಸಮಾರಂಭದ ಸ್ವಾಗತವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ವಂದಿತಾ ಶರ್ಮಾ ಅವರು ನೆರವೇರಿಸಿದರು.