ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲಾ ತುಂಬಾ ಸೋರುತ್ತಿರುವುದನ್ನು ಸ್ಥಳ ಪರಿಶೀಲನೆ ಮಾಡಿದ ವಿಧಾನಪರಿಷತ್ ಸದಸ್ಯರಾದ ಆರ್ ರಾಜೇಂದ್ರ…..
ಮಧುಗಿರಿ ತಾಲೂಕು ಕೊಡಿಗೇನಹಳ್ಳಿಹೋಬಳಿ ಚಿಕ್ಕ ಮಾಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಸುಮಾರು 150 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು ವಿದ್ಯಾರ್ಥಿಗಳು ಮಳೆ ಬಂದರೆ ಕೊಠಡಿಗಳಲ್ಲಿ ಕುಳಿತುಕೊಂಡು ವಿದ್ಯಾಭ್ಯಾಸ ಮಾಡಲು ಆಗುತ್ತಿಲ್ಲ ಏಕೆಂದರೆ ಶಾಲಾ ಕೊಠಡಿಗಳು ತುಂಬಾ ಶಿಥಿಲವಾಗಿ ಸೋರುತ್ತಿವೆ ಮಕ್ಕಳು ವಿದ್ಯಾಭ್ಯಾಸ ಮಾಡಲು ತುಂಬಾ ತೊಂದರೆಯಾಗುತ್ತಿದೆ ಎಂದು
ಸಾರ್ವಜನಿಕರು ವಿದ್ಯಾರ್ಥಿಗಳು ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಗ್ರಾಮ ಪಂಚಾಯತಿ ಸದಸ್ಯರುಗಳು
ವಿಧಾನ ಪರಿಷತ್ತಿನ ಸದಸ್ಯರಾದ ಆರ್ ರಾಜೇಂದ್ರ ಅವರು ಇಂದು ಚಿಕ್ಕ ಮಾಲೂರು ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಹತ್ತಿರ ಕರೆದುಕೊಂಡು ಹೋಗಿ ಕೊಠಡಿಗಳ ಸೋರುತ್ತಿರುವುದನ್ನು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪ್ರೇಮಲತಾ ರಾಮಾಂಜಿನಪ್ಪ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಮಂಜುನಾಥ ರೆಡ್ಡಿ ಗ್ರಾಮ ಪಂಚಾಯತಿ ಸದಸ್ಯರುಗಳಾದ ರಾಮಯ್ಯ ಎಲ್ ಅಶ್ವತ್ಥಯಎ.ಎಲ್ .ವೀರಭದ್ರಪ್ಪ ಹಾಗೂ ಸಾರ್ವಜನಿಕರು, ವಿದ್ಯಾರ್ಥಿಗಳು ವಿಧಾನ ಪರಿಷತ್ ಸದಸ್ಯರಿಗೆ ತೋರಿಸಿ ಇದರ ಬಗ್ಗೆ ಮನವರಿಕೆ ಮಾಡಿಕೊಟ್ಟಾಗ ಕೂಡಲೇ ಸ್ಪಂದಿಸಿದ ಶಾಸಕರು
ಈ ಕೊಠಡಿಗಳನ್ನು ದುರಸ್ತಿ ಮಾಡಿಕೊಡುವುದಾಗಿ ಭರವಸೆ ನೀಡಿದರು. ಮತ್ತು ಆದಷ್ಟು ಬೇಗನೆ ಸಂಬಂಧಪಟ್ಟ ಶಿಕ್ಷಣ ಸಚಿವರ ಹತ್ತಿರ ಮಾತನಾಡಿ ಕೊಠಡಿಗಳ ದುರಸ್ತಿ ಕಾರ್ಯ ಮಾಡಲು ಸರ್ಕಾರದಿಂದ ಹಣ ಬಿಡುಗಡೆ ಮಾಡಲು ನಾನು ಒತ್ತಾಯ ಮಾಡಿ ಈ ಒಂದು ಶಾಲೆಗೆ ಅನುದಾನವನ್ನು ಬಿಡುಗಡೆ ಮಾಡಿಸಿ ಈ ಕೊಠಡಿಗಳನ್ನು ನಿರ್ಮಾಣ ಮಾಡಲು ಅನುಕೂಲ ಮಾಡಿಕೊಡುತ್ತೇನೆಂದು ಸಾರ್ವಜನಿಕರ ಸಮ್ಮುಖದಲ್ಲಿ ಮತ್ತು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಭರವಸೆಯನ್ನು ನೀಡಿದರು
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷಣಿಯಾದ ಪ್ರೇಮಲತಾ ಉಪಾಧ್ಯಕ್ಷರಾದ ಮಂಜುನಾಥ ರೆಡ್ಡಿ. ಗ್ರಾಮ ಪಂಚಾಯತ್ ಸದಸ್ಯರಾದ ರಾಮಯ್ಯ. ಎ .ಎಲ್. ಅಶ್ವತಯ್ಯ ವೀರಭದ್ರಯ್ಯ. ಮುಖಂಡರಾದ ನಾಗರಾಜು. ಲಕ್ಷ್ಮೀಪತಿ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ಹಾಗೂ ಊರಿನ ಗ್ರಾಮಸ್ಥರು ಹಾಜರಿದ್ದರು.
ವರದಿ. ಲಕ್ಷ್ಮಿಪತಿ ದೊಡ್ಡ ಯಲ್ಕೂರು