*ರಾಜ್ಯದಲ್ಲಿ ವೆಂಟಿಲೇಟರ್ ಬೆಡ್ ಗಳ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಸಭೆ*
ರಾಜ್ಯದಲ್ಲಿ ವೆಂಟಿಲೇಟರ್ ಬೆಡ್ ಗಳನ್ನು ಹೆಚ್ಚಿಸುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಅಧಿಕಾರಿಗಳೊಂದಿಗೆ ದೂರವಾಣಿ ಮುಖಾಂತರ ಸಭೆ ನಡೆಸಿದರು.
ಸಭೆಯ ಮುಖ್ಯಾ0ಶಗಳು:
1. ಭಾರತ ಸರ್ಕಾರದ ಪಿ.ಎಂ.ಕೇರ್ಸ್ ಅಡಿಯಲ್ಲಿ ರಾಜ್ಯಕ್ಕೆ 681 ವೆಂಟಿಲೇಟರ್ ಗಳು ದೊರಕಿವೆ.
2. ಕಳೆದ ವಾರದಲ್ಲಿ ಬೆಂಗಳೂರಿನಲ್ಲಿ 166 ಸೇರಿದಂತೆ ರಾಜ್ಯದಲ್ಲಿ ವೆಂಟಿಲೇಟರ್ ಬೆಡ್ ಗಳ ಸಂಖ್ಯೆಯನ್ನು ಒಟ್ಟು 335ಕ್ಕೆ ಹೆಚ್ಚಿಸಲಾಗಿದೆ.
3. ಇದೆ ವಾರಾಂತ್ಯದಲ್ಲಿ ಉಳಿದ 346 ವೆಂಟಿಲೇಟರ್ ಗಳನ್ನು ಅಳವಡಿಸಲಾಗುವುದು.
4. ಕೇಂದ್ರ ಸರ್ಕಾರ ರಾಜ್ಯಕ್ಕೆ ಒದಗಿಸಿರುವ 1279 ವೆಂಟಿಲೇಟರ್ ಗಳನ್ನು ಈ ಮಾಹೆಯ ಅಂತ್ಯದಲ್ಲಿ ದೊರಕಲಿವೆ.
5. ಈ ಎಲ್ಲಾ ವೆಂಟಿಲೇಟರ್ ಗಳನ್ನು ತಕ್ಷಣವೇ ಅಳವಡಿಸುವಂತೆ ಮುಖ್ಯ ಮಂತ್ರಿಗಳು ಸೂಚಿಸಿದರು.
6. ಆಸ್ಪತ್ರೆಯ ಸಿಬ್ಬಂದಿ ಈ ವೆಂಟಿಲೇಟರ್ ಗಳನ್ನು ಬಳಸಬೇಕು.
7. ಅನೆಸ್ಥಿಟಿಕ್ಸ್, ಪಾರಾ ಮೆಡಿಕಲ್ ಸಿಬ್ಬಂದಿಗಳನ್ನು ತಕ್ಷಣವೇ ನೇಮಕ ಮಾಡಿಕೊಳ್ಳುವಂತೆ ಸೂಚಿಸಿದರು.
8.ವೆಂಟಿಲೇಟರ್ ಗಳನ್ನು ಒದಗಿಸಲು ಬೆಂಗಳೂರಿನ ಖಾಸಗಿ ಆಸ್ಪತ್ರೆಗಳು ಮಾಡಿರುವ ಮನವಿಯನ್ನು ಪರಿಗಣಿಸುವಂತೆ ಸೂಚಿಸಿದ ಮುಖ್ಯಮಂತ್ರಿಗಳು, ಕೋವಿಡ್ 19 ಸಂಬಂಧ ತಾತ್ಕಾಲಿಕವಾಗಿ ಒದಗಿಸಲು ಷರತ್ತು ಮತ್ತು ನಿಯಮಗಳ ಬಗ್ಗೆ ತೀರ್ಮಾನಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
****