IMG 20221024 WA0006

ಅಡಿಕೆ:ಎಲೆಚುಕ್ಕೇ ರೋಗ ಅಧ್ಯಯನಕ್ಕೆ ಸಮಿತಿ ರಚನೆ…!

Genaral STATE

ಎಲೆಚುಕ್ಕೇ ರೋಗ ಅಧ್ಯಯನಕ್ಕೆ ಸಮಿತಿ ರಚನೆ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಸ್ವಾಗತ.

ಬೆಂಗಳೂರು, ಅಕ್ಟೋಬರ್ ೨೪

ರಾಜ್ಯದಲ್ಲಿ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ, ಪರಿಹಾರ ಕಂಡುಕೊಳ್ಳಲು, ಕೇಂದ್ರ ಸರಕಾರದ ಏಳು ಮಂದಿ ತಜ್ಞರನ್ನು ಒಳಗೊಂಡ ತಜ್ನರ ನೇಮಕಾತಿ ನಿರ್ಧಾರವನ್ನು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು, ಸ್ವಾಗತಿಸಿದ್ದಾರೆ.

ಈ ಬಗ್ಗೆ, ಮಾಧ್ಯಮಗಳ ಜತೆ ಮಾತನಾಡಿರುವ ಸಚಿವರು, ಮಲೆನಾಡು ಹಾಗೂ ಕರಾವಳಿ ಭಾಗದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ, ಕೇಂದ್ರ ಸರಕಾರ, ತಕ್ಷಣ ಸ್ಪಂದಿಸಿದ್ದು, ಅಡಿಕೆ ಬೆಳೆಗೆ ಎದುರಾಗಿರುವ ರೋಗ ನಿವಾರಣೆಗೆ, ಸಮಿತಿ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಲಿ, ಎಂದು ಹಾರೈಸಿದ್ದಾರೆ.

ಕಳೆದ ವಾರವಷ್ಟೇ, ಅಡಿಕೆ ಬೆಳೆಗಾರರ ಆತಂಕಕ್ಕೆ ಕಾರಣವಾದ, ಎಲೆ ಚುಕ್ಕೆ ರೋಗಕ್ಕೆ ಪರಿಹಾರ ಬಯಸಿ, ನಿಕಟಪೂರ್ವ ಮುಖ್ಯಮಂತ್ರಿಗಳೂ ಹಾಗೂ ಹಿರಿಯ ಬಿಜೆಪಿ ನಾಯಕರಾದ ಶ್ರೀ ಬಿ ಎಸ್ ಯಡಿಯೂರಪ್ಪ ನವರ ನೇತೃತ್ವದಲ್ಲಿ, ಕೇಂದ್ರ ಕೃಷಿ ಸಚಿವ ಶ್ರೀ ನರೆಂದ್ರ ಸಿಂಗ್ ತೋಮರ್ ಅವರಿಗೆ, ನವದೆಹಲಿಯಲ್ಲಿ ನಿಯೋಗ, ಭೇಟಿಯಾಗಿ, ಮನವಿ ಸಲ್ಲಿಸಿದ್ದು, ಕೇಂದ್ರ ಸರಕಾರ, ಸಮಸ್ಯೆಯ ಪರಿಹಾರಕ್ಕೆ, ಕ್ಷಿಪ್ರ ಗತಿಯಲ್ಲಿ, ಸ್ಪಂದಿಸಿ, ಸಮಿತಿ ರಚಿಸಿದೆ, ಎಂದರು.

ರಾಜ್ಯದಲ್ಲಿ ಸುಮಾರು 20 ಸಾವಿರ ಹೆಕ್ಟೇರ್ ಪ್ರದೇಶದ ಅಡಿಕೆ ತೋಟಗಳು, ಎಲೆ ಚುಕ್ಕೆ ರೋಗಕ್ಕೆ ಬಲಿಯಾಗಿದ್ದು, ಕಾಳ್ಗಿಚ್ಚಿನಂತೆ, ಇತರೆಡೆ ಹರಡುತ್ತಿದೆ, ಎಂದು, ಸಚಿವರು, ಆತಂಕ ವ್ಯಕ್ತಪಡಿಸಿದರು.

ಸರಿಸುಮಾರು ಐವತ್ತು ಲಕ್ಷ ಜನರಿಗೆ, ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಜೀವನೋಯ ಕಲ್ಪಿಸಿಕೊಟ್ಟಿ ರುವ, ಅಡಿಕೆ ಬೆಳೆ, ನಮ್ಮ ಭಾಗದ ರೈತರ ಆರ್ಥಿಕ ಜೀವನಾಡಿಯಾಗಿದೆ, ಎಂದು ಹೇಳಿದ್ದಾರೆ.

ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರಾವಳಿ ಭಾಗದಲ್ಲಿ, ರೈತ ಸಮುದಾಯದ ಜೀವನಾಡಿಯದ, ಅಡಿಕೆ ಬೆಳೆ, ಎಲೆ ಚುಕ್ಕೆ ರೋಗದಿಂದ, ನಲುಗಿದ್ದು, ನಿಯಂತ್ರಣ ಬಗ್ಗೆ ಕೇಂದ್ರ ಸರಕಾರದ ಗಮನ ಸೆಳೆಯಲು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ, ಶಿವಮೊಗ್ಗ ಸಂಸದ ಶ್ರೀ ಬಿ ವೈ ರಾಘವೇಂದ್ರ, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು, ಬಿಜೆಪಿ ಶಾಸಕ ಶ್ರೀ ಹರತಾಳು ಹಾಲಪ್ಪ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀ ಕೃಷ್ಣ ಭಟ್ ರವರು, ಕಳೆದ ವಾರ, ಕೇಂದ್ರ ಕೃಷಿ ಸಚಿವ ಶ್ರೀ ನರೆಂದ್ರ ಸಿಂಗ್ ತೋಮರ್ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದ್ದರು.
eom.