IMG 20221113 WA0029

Tumkur:ಜೆಡಿಎಸ್ ಸೇರಿದ ಬಿಜೆಪಿ, ಕಾಂಗ್ರೆಸ್ ನಾಯಕರು…!

POLATICAL STATE

ದೊಡ್ಡ ಪ್ರಮಾಣದಲ್ಲಿ ಜೆಡಿಎಸ್ ಸೇರಿದ ತುಮಕೂರು ಜಿಲ್ಲೆಯ ಬಿಜೆಪಿ, ಕಾಂಗ್ರೆಸ್ ನಾಯಕರು

ಪಕ್ಷದ ಕಚೇರಿಯಲ್ಲಿ ಬರ ಮಾಡಿಕೊಂಡ ಹೆಚ್.ಡಿ.ಕುಮಾರಸ್ವಾಮಿ

ಪಂಚರತ್ನ ಯೋಜನೆಗಳಿಂದ ರಾಜ್ಯದ ಚಿತ್ರಣವೇ ಬದಲು


ಬೆಂಗಳೂರು: ತುಮಕೂರು ಜಿಲ್ಲೆ, ಅದರಲ್ಲೂ ಶಿರಾ ವಿಧಾನಸಭೆ ಕ್ಷೇತ್ರದ ವಿವಿಧ ಪಕ್ಷಗಳ ಮುಖಂಡರು ಇಂದು ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಜಾತ್ಯತೀತ ಜನತಾದಳಕ್ಕೆ ಸೇರ್ಪಡೆಯಾದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯ ಕೆ.ಎನ್.ತಿಪ್ಪೇಸ್ವಾಮಿ ಅವರ ಸಮ್ಮುಖದಲ್ಲಿ ಶಿರಾ ಕ್ಷೇತ್ರದ ಕಾಂಗ್ರೆಸ್, ಬಿಜೆಪಿ ಮುಖಂಡರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

IMG 20221113 WA0030

ಕುಮಾರಸ್ವಾಮಿ ಅವರು ಸೇರ್ಪಡೆಗೊಂಡ ಮುಖಂಡರಿಗೆ ಜೆಡಿಎಸ್ ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದರು.ತುಮಕೂರು ಜಿಪಂ ಮಾಜಿ ಅಧ್ಯಕ್ಷ ಕಲ್ಕೆರೆ ರವಿಕುಮಾರ್, ಕೆಎಂಎಫ್ ನಿರ್ದೇಶಕ ಎಸ್.ಆರ್.ಗೌಡ, ಸುಧಾಕರ್ ಗೌಡ, ವೀರೇಶ್, ಪ್ರವೀಣ್ ಮುಂತಾದ ಪ್ರಮುಖರು ಸೇರಿದಂತೆ ಅನೇಕ ಮುಖಂಡರು ತಮ್ಮ ನೂರಾರು ಜನ ಬೆಂಬಲಿಗರೊಂದಿಗೆ ಪಕ್ಷಕ್ಕೆ ಸೇರಿದರು.

ಇವರೆಲ್ಲರೂ ಈ ಹಿಂದೆ ಜೆಡಿಎಸ್‌ನಿಂದ ಕಾಂಗ್ರೆಸ್‌, ಬಿಜೆಪಿಗೆ ಸೇರಿದ್ದರು. ಈಗ ಅವರೆಲ್ಲರೂ ಮರಳಿ ಮನೆಗೆ ವಾಪಸ್ ಆಗಿದ್ದಾರೆ.

ಪಕ್ಷ ತೊರೆದವರನ್ನ ಕರೆತರಲು ನೇರವಾಗಿ ಅಖಾಡಕ್ಕೆ ಧುಮುಕಿದ್ದ ಹೆಚ್ಡಿಕೆ ಅವರು, ಇಷ್ಟು ದೊಡ್ಡ ಪ್ರಮಾಣದಲ್ಲಿ ಪಕ್ಷಕ್ಕೆ ಸೇರಿದ ಮುಖಂಡರನ್ನು ಆತ್ಮೀಯವಾಗಿ ಬರ ಮಾಡಿಕೊಂಡರು.

IMG 20221113 WA0033

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಅವರು; ಶಿರಾ ಸೇರಿ ತುಮಕೂರು ಜಿಲ್ಲೆಯ ಎಲ್ಲಾ ವಿಧಾನಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಜಯ ಸಾಧಿಸಲಿದೆ. ಈ ಬಗ್ಗೆ ಯಾವುದೇ ಸಂಶಯ ಬೇಡ ಎಂದರು.

2018ರಲ್ಲಿ ಜೆಡಿಎಸ್‌ನಿಂದ ಆಯ್ಕೆಯಾಗಿದ್ದ ದಿವಂಗತ ಬಿ.ಸತ್ಯನಾರಾಯಣ ಅವರನ್ನು ನೆನಪು ಮಾಡಿಕೊಂಡ ಮಾಜಿ ಮುಖ್ಯಮಂತ್ರಿಗಳು, ಪಕ್ಷವನ್ನು ಸಂಘಟಿಸಿ ಶಿರಾದಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಾವು ಸತ್ಯನಾರಾಯಣ ಅವರಿಗೆ ಸಲ್ಲಿಸುವ ಗೌರವ ಎಂದು ಹೇಳಿದರು.

IMG 20221113 WA0034

ಪಂಚರತ್ನ ಕಾರ್ಯಕ್ರಮ:

ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ತಾಯಿ ಕಾರ್ಡ್ ಇಲ್ಲ ಎನ್ನುವ ಕಾರಣಕ್ಕೆ ಬಾಣಂತಿ ಮತ್ತು ಎರಡು ನವಜಾತ ಶಿಶುಗಳ ಸಾವು ಅತಿ ನೋವಿನ ಘಟನೆ. ರಾಜ್ಯದಲ್ಲಿ ಇಂಥ ಘಟನೆಗಳು ಮರುಕಳಿಸಬಾರದು ಎನ್ನುವ ಕಾರಣಕ್ಕೆ ಪಂಚರತ್ನ ಯೋಜನೆಗಳನ್ನು ರೂಪಿಸಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಆರೋಗ್ಯ ಸಂಪತ್ತು, ವಸತಿ ಅಸರೆ, ಕೃಷಿಗೆ ಕಾಯಕಲ್ಪ, ಯುವನವ ಮಾರ್ಗ ಮಹಿಳಾ ಸಬಲೀಕರಣ, ಶಿಕ್ಷಣ ಕಾರ್ಯಕ್ರಮಗಳನ್ನು ಪಂಚರತ್ನ ಯೋಜನೆಯಲ್ಲಿ ಜಾರಿ ಮಾಡಲಾಗುವುದು. ಉಚಿತ ಶಿಕ್ಷಣ, ಉಚಿತ ಆರೋಗ್ಯ, ಉದ್ಯೋಗ, ಉಚಿತ ವಿದ್ಯುತ್ ಸೇರಿ ಹಲವಾರು ಅಂಶಗಳು ಈ ಯೋಜನೆಗಳಲ್ಲಿ ಸೇರಿವೆ ಎಂದು ಮಾಜಿ ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.

ಇನ್ನೇನು ನಾವು ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಇದ್ದೇವೆ. ಕೇವಲ ಬಿಜೆಪಿ, ಕಾಂಗ್ರೆಸ್ ಪಕ್ಷಗಳನ್ನು ಟೀಕಿಸುತ್ತಾ ಹೋಗುವುದು ನಮ್ಮ ಉದ್ದೇಶ ಅಲ್ಲ. ನಮ್ಮ ಪ್ರಣಾಳಿಕೆಯಲ್ಲಿ ಇರುವ ಪಂಚರತ್ನ ಯೋಜನೆಗಳನ್ನು ಜನರ ಬಳಿಗೆ ತೆಗೆದುಕೊಂಡು ಹೋಗುತ್ತೇವೆ. ರಾಜಕೀಯ ನಮ್ಮ ಉದ್ದೇಶ ಅಲ್ಲ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಸಿಎಂ ಇಬ್ರಾಹಿಂ ಅವರು ಹಾಗೂ ಪಕ್ಷಕ್ಕೆ ಸೇರಿದ ವಿವಿಧ ಮುಖಂಡರು ಮಾತನಾಡಿದರು.