IMG 20221218 WA0014

ಬೆಳಗಾವಿ ಅಧಿವೇಶ:ಎಸ್ ಸಿ ಎಸ್ ಟಿ ಮೀಸಲಾತಿ ಮಸೂದೆ ಮಂಡನೆ…!

Genaral STATE

ನಾಳೆಯಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಪ್ರಾರಂಭ :

ಎಸ್ ಸಿ ಎಸ್ ಟಿ ಮೀಸಲಾತಿ ಮಸೂದೆ ಮಂಡನೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

:

ಹುಬ್ಬಳ್ಳಿ, ಡಿಸೆಂಬರ್ 18: ನಾಳೆಯಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತಿದ್ದು, ಎಸ್ ಸಿ ಎಸ್ ಟಿ ಮೀಸಲಾತಿ ಮಸೂದೆ(Ordinance Replacement bill) ಸೇರಿದಂತೆ ಇತರ ಇಲಾಖೆಗಳ ಹಲವಾರು ಮಸೂದೆಗಳನ್ನು ಮಂಡಿಸಲಾಗುವುದು. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಗಡಿವಿಚಾರದ ಬಗ್ಗೆ ಬೆಳಗಾವಿಯಲ್ಲಿ ಎಂಇಎಸ್ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿ, ಎಂಇಎಸ್ ಕಳೆದ 50 ವರ್ಷಗಳಿಂದ ಪುಂಡಾಟಿಕೆಯಲ್ಲಿ ತೊಡಗಿದೆ. ಅವರನ್ನು ನಿಯಂತ್ರಿಸುವ ಬಗ್ಗೆ ಸರ್ಕಾರಕ್ಕೆ ತಿಳಿದಿದ್ದು, ಅವರ ಪುಂಡಾಟಿಕೆಯನ್ನು ಹದ್ದುಬಸ್ತಿನಲ್ಲಿಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು.

ಬಾಂಬ್ ಪ್ರಕರಣಕ್ಕೆ ವಿರೋಧಪಕ್ಷದ ನಾಯಕ ಸಿದ್ಧರಾಮಯ್ಯನವರ ಹೇಳಿಕೆಗೆ ಉತ್ತರ ನೀಡಿ, ಅದೊಂದು ಆಕಸ್ಮಿಕ ಘಟನೆ ಎಂದು ಸಿದ್ಧರಾಮಯ್ಯನವರು ಸ್ಪಷ್ಟವಾಗಿ ಹೇಳುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ಪೂರ್ಣವಾಗಿ ಅರ್ಥೈಸಿಕೊಂಡು ನಂತರ ಪ್ರತಿಕ್ರಿಯೆ ನೀಡಿದರೆ ಸಿದ್ದರಾಮಯ್ಯನವರ ಸ್ಥಾನಕ್ಕೆ ಘನತೆ ಇರುತ್ತದೆ ಎಂದರು.