IMG 20230102 WA0022

ವಿಜಯಪುರ: ಜ್ಞಾನಯೋಗಿ ಆಶ್ರಮದ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ

Genaral STATE

ವಿಜಯಪುರ: ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಜ್ಞಾನಯೋಗಿ ಆಶ್ರಮದ ಸಿದ್ದೇಶ್ವರ ಸ್ವಾಮೀಜಿ(81) ವಿಧಿವಶರಾಗಿದ್ದಾರೆ.

IMG 20230102 WA0023

ಕಳೆದ ನಾಲ್ಕು ದಿನಗಳಿಂದ ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯದಿಂದ ಬಳಲುತ್ತಿದ್ದರು. ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಸ್ಥಿರವಾಗಿತ್ತು. ಆದರೆ ಮಧ್ಯಾಹ್ನ ಮತ್ತು ಸಂಜೆಯ ಹೆಲ್ತ್ ಬುಲೆಟಿನ್‍ನಲ್ಲಿ ಸ್ವಾಮೀಜಿಗೆ ಉಸಿರಾಟ ತೊಂದರೆ ಜಾಸ್ತಿಯಾಗಿದೆ. ಸ್ವಾಮೀಜಿ ಬಿಪಿ ಸ್ವಲ್ಪ ಕಡಿಮೆಯಾಗಿದೆ. ಸ್ವಾಮೀಜಿ ಆಹಾರ ತೆಗೆದುಕೊಳ್ಳುತ್ತಿಲ್ಲ. ಆದರೂ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯ ಸ್ಥಿರವಾಗಿದೆ. ನಾವು ನಮ್ಮ ಶಕ್ತಿ ಮೀರಿ ಪ್ರಯತ್ನ ಪಡುತ್ತಿದ್ದೇವೆ. ಸ್ವಾಮೀಜಿ ಆಸ್ಪತ್ರೆಗೆ ಬರಲು ಒಪ್ಪುತ್ತಿಲ್ಲ. ಏನು ಚಿಕಿತ್ಸೆ ಕೊಡುತ್ತಿರೋ ಇಲ್ಲೇ ಕೊಡಿ ಸ್ವಾಮೀಜಿ ಹೇಳಿದ್ದರು ಎಂದು ಹೆಲ್ತ್‌ ಬುಲೆಟಿನ್‌ನಲ್ಲಿ ವೈದ್ಯರು ತಿಳಿಸಿದ್ದರು.

IMG 20230102 WA0029

ಸದ್ಯ( 10 ಗಂಟೆ) ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಸಿದ್ದೇಶ್ವರ ಸ್ವಾಮೀಜಿ ವಿಧಿವಶರಾಗಿದ್ದಾರೆ ಎಂದು ತಿಳಿಸಿದರು

ವಿಜಾಪುರ ಜಿಲ್ಲೆಯ ಶಾಲಾ- ಕಾಲೇಜು / ಸರ್ಕಾರಿ ಕಚೇರಿಗಳಿಗೆ ರಜೆ ನೀಡಲಾಗಿದೆ

IMG 20230102 WA0031
ಜಿಲ್ಲಾಡಳಿತ ಆದೇಶ

ಪರಮಪೂಜ್ಯ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ : ಸಕಲ ಸರ್ಕಾರಿ ಗೌರವಗಳೊಂದಿಗೆ ಜ.3ರಂದು ಪೂಜ್ಯರ ಅಂತಿಮ ಕ್ರಿಯೆ
-ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ
ವಿಜಯಪುರ ಜ. 02 (ಕರ್ನಾಟಕ ವಾರ್ತೆ): ನಡೆದಾಡುವ ದೇವರೆಂದೆ ಖ್ಯಾತರಾದ ಪರಮ ಪೂಜ್ಯ ಸಿದ್ದೇಶ್ವರ ಸ್ವಾಮಿಜೀಗಳು, ಜ್ಞಾನಯೋಗಾಶ್ರಮ ವಿಜಯಪುರ ಇವರು ದಿನಾಂಕ: 02-01-2023 ರಂದು ಲಿಂಗೈಕ್ಯರಾದರೆಂದು ತಿಳಿಸಲು ತೀವ್ರ ವಿಷಾಧಿಸುತ್ತೇವೆ. ಈ ಪ್ರಯುಕ್ತ ರಾಜ್ಯ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದು, ಪೂಜ್ಯರ ಅಂತಿಮ ಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ನಿರ್ದೇಶಿರುತ್ತದೆ ಮತ್ತು ಪೂಜ್ಯರ ಅಂತಿಮ ದರ್ಶನಕ್ಕೆ ಭಕ್ತಾದಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಜಿಲ್ಲೆಯ ಎಲ್ಲ ಶಾಲಾ-ಕಾಲೇಜು ಮತ್ತು ಸರ್ಕಾರಿ ಕಛೇರಿಗಳಿಗೆ ಸರ್ಕಾರ ರಜೆ ಘೋಷಿಸಿದೆ ಎಂದು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.
ಜಿಲ್ಲಾಡಳಿತವು ಪೂಜ್ಯರ ಪಾರ್ಥಿವ ಶರೀರವನ್ನು ಶ್ರೀ ಜ್ಞಾನಯೋಗಾಶ್ರಮದಲ್ಲಿ ಈ ರಾತ್ರಿಯಿಂದ ನಾಳೆ ಬೆಳಗ್ಗೆ 4.30ರವರೆಗೆ ಭಕ್ತಾದಿಗಳ ದರ್ಶನಕ್ಕಾಗಿ ಇಡಲಾಗುವುದು. ನಂತರ ಪೂಜ್ಯರ ಪಾರ್ಥಿವ ಶರೀರವನ್ನು ತೆರೆದ ವಾಹನದಲ್ಲಿ ಶ್ರೀ ಜ್ಞಾನಯೋಗಾಶ್ರಮದಿಂದ ಸೈನಿಕ ಶಾಲೆಯವರೆಗೆ ತರಲಾಗುವುದು ಎಂದು ಅವರು ತಿಳಿಸಿದ್ದಾರೆ.
ಭಕ್ತಾದಿಗಳಿಗೆ ಪೂಜ್ಯರ ಅಂತಿಮ ದರ್ಶನವನ್ನು ದಿನಾಂಕ: 03-01-2023 ರ ಬೆಳಗ್ಗೆ 6.00 ಗಂಟೆಯಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿಜಯಪುರ ನಗರದ ಸೈನಿಕ ಶಾಲೆ ಆವರಣದಲ್ಲಿ ಏರ್ಪಡಿಸಲಾಗಿದೆ. ಪೂಜ್ಯರ ಅಂತಿಮ ದರ್ಶನಕ್ಕಾಗಿ ಸೋಲಾಪುರ, ಕಲಬುರಗಿ, ಸಿಂದಗಿ, ಬಾಗಲಕೋಟೆ, ಜಮಖಂಡಿ, ಅಥಣಿಯಿಂದ ಆಗಮಿಸುವ ಭಕ್ತಾದಿಗಳು ನೇರವಾಗಿ ವಿಜಯಪುರ ನಗರದ ರಿಂಗ್ ರೋಡ್ ಮೂಲಕ (ಇಟಗಿ ಪೆಟ್ರೋಲ್ ಪಂಪ್) ಜಿಲ್ಲಾ ಆಸ್ಪತ್ರೆಯ ಹಿಂಭಾಗದಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಸ್ಥಳದಲ್ಲಿಯೇ ಭಕ್ತಾದಿಗಳಿಗೆ ಪ್ರಸಾದ, ನೀರು, ಇನ್ನಿತರೆ ವ್ಯವಸ್ಥೆ ಮಾಡಲಾಗಿದೆ.

ಭಕ್ತಾದಿಗಳು ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಸೈನಿಕ ಶಾಲೆಯ ಎದುರುಗಡೆ ಇರುವ ನೇತಾಜಿ ಸುಭಾಷ ಚಂದ್ರ ಬೋಸ್, ರಸ್ತೆಯ ಮೂಲಕ ನಡೆದುಕೊಂಡು ಸೈನಿಕ ಶಾಲೆಯ ಮುಖ್ಯ ದ್ವಾರದ ಮೂಲಕ ಪ್ರವೇಶಿಸಬೇಕು. ದರ್ಶನದ ನಂತರ ಸೈನಿಕ ಶಾಲೆಯ 2ನೇ ಗೇಟ್ ಮೂಲಕ (ಲೆಫ್ಟಿನೆಂಟ್ ಕರ್ನಲ್ ಅಜಿತ್ ಭಂಡಾರಕರ ದ್ವಾರ) ಹೊರಗಡೆ ಬಂದು ತಮ್ಮ ವಾಹನ ಮೂಲಕ ವಾಪಸ ತೆರಳಬೇಕು. ಸೈನಿಕ ಶಾಲೆಯಲ್ಲಿ ಮಧ್ಯಾಹ್ನ 3.00 ಗಂಟೆಯಿಂದ ಸಾಯಂಕಾಲ 4.00 ಗಂಟೆಯ ಅವಧಿಯಲ್ಲಿ ಸರ್ಕಾರದ ವತಿಯಿಂದ ಸಕಲ ಗೌರವಗಳೊಂದಿಗೆ ಪೂಜ್ಯರಿಗೆ ಅಂತಿಮ ನಮನ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸಂಜೆ 4.00 ಗಂಟೆಯಿಂದ ಪುನಃ ತೆರೆದ ವಾಹನದಲ್ಲಿ ಪೂಜ್ಯರ ಪಾರ್ಥೀವ ಶರೀರವನ್ನು ಸೈನಿಕ ಶಾಲೆಯಿಂದ ಶ್ರೀ ಜ್ಞಾನಯೋಗಾಶ್ರಮಕ್ಕೆ ತರಲಾಗುವುದು. (ಮಾರ್ಗ: ಗೋದಾವರಿ-ಶ್ರೀ ಶಂಕರಲಿಂಗ ದೇವಸ್ಥಾನ-ಶಿವಾಜಿವೃತ್ತ – ಗಾಂಧಿವೃತ್ತ- ಶ್ರೀ ಸಿದ್ದೇಶ್ವರ ದೇವಸ್ಥಾನ-ಬಿ.ಎಲ್.ಡಿ.ಇ. ಆಸ್ಪತ್ರೆ-ಶ್ರೀ ಜ್ಞಾನಯೋಗಾಶ್ರಮ), ಭಕ್ತಾದಿಗಳು ರಸ್ತೆಯ ಇಕ್ಕೆಲಗಳಲ್ಲಿ ನಿಂತುಕೊಂಡು ಪೂಜ್ಯರ ಪಾರ್ಥೀವ ಶರೀರಕ್ಕೆ ಅಂತಿಮ ನಮನವನ್ನು ಸಲ್ಲಿಸಬಹುದಾಗಿದೆ. ಪೂಜ್ಯರ ಅಂತಿಮ ಕ್ರಿಯೆಯನ್ನು ಸಂಜೆ 5.00 ಗಂಟೆಗೆ ಶ್ರೀ ಜ್ಞಾನಯೋಗಾಶ್ರಮದ ಆವರಣದಲ್ಲಿ ವಿಧಿವಿಧಾನಗಳಂತೆ ನೇರವೇರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಶ್ರೀ ಜ್ಞಾನಯೋಗಾಶ್ರಮದ ಆವರಣದಲ್ಲಿ ಸ್ಥಳಾವಕಾಶದ ಅಭಾವವಿರುವುದರಿಂದ ಭಕ್ತಾದಿಗಳು ಸೈನಿಕ ಶಾಲೆಯಲ್ಲಿಯೇ ಅಂತಿಮ ದರ್ಶನ ಪಡೆಯಲು ಮನವಿ ಮಾಡಿಕೊಂಡ ಜಿಲ್ಲಾಧಿಕಾರಿಗಳು, ಭಕ್ತಾದಿಗಳು ಯಾವುದೇ ಆತಂತಕ್ಕೆ ಒಳಗಾಗದೇ ಶಾಂತ ರೀತಿಯಿಂದ ವರ್ತಿಸಿ, ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಅವರು ಕೋರಿದ್ದಾರೆ.

ಸಕಲ ಸರ್ಕಾರಿ ಗೌರವಗಳೊಂದಿದೆ ಅಂತಿಮ ವಿಧಿ ವಿಧಾನ ನಡೆಸಲಾಗುವುದು ಎಂದು ಜಿಲ್ಲಾಡಳಿತ ಪ್ರಕಟಣೆ ಯಲ್ಲಿ ತಿಳಿಸಿದೆ.

IMG 20230102 225956 1
ಸರ್ಕಾರಿ ಆದೇಶ

ಗಣ್ಯರಿಂದ ಸಂತಾಪ

ಪ್ರಧಾನಿಗಳ ಸಂತಾಪ
IMG 20230102 WA0021
ಮುಖ್ಯಮಂತ್ರಿಗಳ ಸಂತಾಪ
IMG 20230102 WA0030

ಜ್ಞಾನ ಯೋಗಾನಂದಾ ಸಿದ್ದೇಶ್ವರ ಸ್ವಾಮೀಜಿ ಅವರು ಲಿಂಗೈಕ್ಯ ರಾಗಿರುವುದಕ್ಕೆ ಸಚಿವ ನಿರಾಣಿ ಸಂತಾಪ

ಬೆಂಗಳೂರು, ಜ.2- ತಮ್ಮ ಸರಳ ಜೀವನ ಹಾಗೂ ಪ್ರವಚನದ ಮೂಲಕ ನಾಡದಾಡುವ ನಿಜ ದೇವರು ಎಂದೇ ಭಕ್ತರಿಂದ ಕರೆಯುತ್ತಿದ್ದ ವಿಜಯಪುರ ಜ್ಞಾನ ಯೋಗಾನಂದಾ ಸಿದ್ದೇಶ್ವರ ಸ್ವಾಮೀಜಿ ಅವರ ಲಿಂಗೈಕ್ಯ ರಾಗಿರುವುದಕ್ಕೆ. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ಆರ್ ನಿರಾಣಿ ಅವರು ತೀವ್ರ ಕಂಬನಿ ಮಿಡಿದಿದ್ದಾರೆ.

ವಿಜಯಪುರದ ಸಿದ್ದೇಶ್ವರ ಸ್ವಾಮಿಗಳು ನಡೆದಾಡುವ ವಿಶ್ವಕೋಶ. ಅವರ ಜ್ಞಾನ ಬೋಧನೆಯ ಲಾಭ ಪಡೆದು ಸನ್ಮಾರ್ಗದಲ್ಲಿ ನಡೆಯಬೇಕು. ಇವರ ಜ್ಞಾನ ಖ್ಯಾತಿ ದೇಶ-ವಿದೇಶಗಳಲ್ಲಿ ಪಸರಿಸಿದೆ. ಇಂತಹ ಮಹಾನ್‌ ಜ್ಞಾನಿಯ ಜ್ಞಾನ ಸುಧೆಯ ಬೆಳಕಿನಲ್ಲಿ ಎಲ್ಲರೂ ಮುನ್ನಡೆಯುವ ಅಗತ್ಯವಿದ್ದು, ಇದುವೇ ಅವರಿಗೆ ನಾವು ಸಲ್ಲಿಸುವ ನಿಜವಾದ ಗೌರವ ಎಂದು ಹೇಳಿದ್ದಾರೆ.
ಸಿದ್ದೇಶ್ವರ ಸ್ವಾಮೀಜಿ ಅವರಂತಹ ಸರಳ ವ್ಯಕ್ತಿಯನ್ನು ಎಲ್ಲಿಯೂ ನೋಡಿಲ್ಲ, ಜ್ಞಾನದಲ್ಲಿ ಬೃಹತ್‌ ಪರ್ವತದಂತಿದ್ದರು. ಪ್ರತಿಯೊಬ್ಬರೂ ಸರಿದಾರಿಯಲ್ಲಿ ಜೀವನ ಸಾಗಿಸಲು ಸಿದ್ದೇಶ್ವರ ಸ್ವಾಮಿಗಳ ಪ್ರವಚನ ಕೇಳಲೇಬೇಕು ಎಂದು ಮನವಿ ಮಾಡಿದ್ದಾರೆ.

IMG 20230102 WA0025

ಪರಮ ಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ಆಧ್ಯಾತ್ಮದ ಬಗ್ಗೆ ತುಂಬ ಆಳವಾದ ಅಧ್ಯಯನ ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ ಅನುಭಾವಿಗಳೂ ಮಧುರ ಸ್ವಭಾವದವರೂ ಆಗಿದ್ದ ಅವರು, ಕನ್ನಡ, ಸಂಸ್ಕೃತ, ಇಂಗ್ಲಿಷ್, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ನಿಷ್ಣಾತರು. ಅತ್ಯಂತ ಸರಳ ಸಜ್ಜನಿಕೆಯ ಸಾಕಾರ ಮೂರ್ತಿ, ನನ್ನದು-ತನ್ನದೆಂಬ ಮಮಕಾರ ತೊರೆದ ಮಹಾಪುರುಷರು ಎಂದು ಬಣ್ಣಿಸಿದ್ದಾರೆ.

ತಮ್ಮ ಗುರುಗಳಾದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಮಾಡಿದ ಪ್ರವಚನಗಳನ್ನು ಒಂದುಗೂಡಿಸಿ “ಸಿದ್ದಾಂತ ಶಿಖಾಮಣಿ “ಎಂಬ ಪುಸ್ತಕ ಬರೆದು ಗುರುಗಳ ಹೆಸರಿನಲ್ಲೇ ಪ್ರಕಟಿಸಿದ್ದರು. ಆಗ ಅವರಿಗೆ ಕೇವಲ 19 ವರ್ಷ ಮಾತ್ರ ಆಗಿತ್ತೆಂಬುದು ಗಮನಾರ್ಹ ಇದು ಅವರ ಪ್ರತಿಭೆಗೆ ಹಿಡಿದ ಕೈ ಗನ್ನಡಿ ಎಂದು ಅಭಿಪ್ರಾಯ ಪಟ್ಟಿದ್ದಾರೆ.

IMG 20230102 WA0026

ಅವರ ನಿಸ್ವಾರ್ಥ ಸೇವೆಯನ್ನು ಕಂಡು ಕೇಂದ್ರ ಸರ್ಕಾರ ಎರಡನೇ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿಯಾದ
ಪದ್ಮಶ್ರೀ, ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಹೀಗೆ ತಮಗೆ ಸಂದ ಎಷ್ಟೋ ಪ್ರಶಸ್ತಿ ಮತ್ತು ಪುರಸ್ಕಾರಗಳನ್ನು ಅವರು ವಿನಮೃವಾಗಿಯೇ ನಿರಾಕರಿಸಿದ್ದ ಅಪರೂಪದ ಕಾಯಕಯೋಗಿ ಎಂದು ಪ್ರಶಂಸಿದ್ದಾರೆ.
ಆಧ್ಯಾತ್ಮ, ಆದರ್ಶ ಮತ್ತು ನೈತಿಕತೆ ಬಗ್ಗೆ ಕೇವಲ ಬೋಧನೆ ಮಾಡುವುದಷ್ಟೇ ಅಲ್ಲ. ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ನುಡಿದಂತೆ ನಡೆಯುವ ಮತ್ತು ನಡೆದಂತೆಯೇ ನುಡಿಯುವ ವ್ಯಕ್ತಿತ್ವ ಅವರದ್ದಾಗಿತ್ತು. ಇಂತಹ ಶ್ರೇಷ್ಠ ಸಂತನನ್ನು ಮತ್ತೆ ಕಾಣಲು ಸಾದ್ಯವಿಲ್ಲ ಎಂದು ನಿರಾಣಿ ಅವರು ಹೇಳಿದ್ದಾರೆ.

ಮಹಾ ಸಂತನೊಬ್ಬನನ್ನು ಕಳೆದುಕೊಂಡು ದುಃಖದಲ್ಲಿರುವ ಅವರ ಅಸಂಖ್ಯಾತ ಭಕ್ತರಿಗೆ ಶ್ರೀಗಳ ಅಗಲಿಕೆಯ ದುಃಖವನ್ನು ಭರಿಸುವಂತಹ ಶಕ್ತಿಯನ್ನು ಆ ದೇವರು ಕರುಣಿಸಲಿ ಎಂದು ಬೇಡಿಕೊಳ್ಳುವುದಾಗಿ ಸಚಿವ ನಿರಾಣಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

H D ದೇವೇಗೌಡರ ಸಂತಾಪ

ಚಿತ್ರ ಕೃಪೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ