IMG 20230125 WA0188

ಪಾವಗಡ:ಮತ ಚಲಾಯಿಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ…!

DISTRICT NEWS ತುಮಕೂರು

ಮತ ಚಲಾಯಿಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ. ತಹಶೀಲ್ದಾರ್ ವರದರಾಜು.

ಪಾವಗಡ: ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದ್ದು, ತಪ್ಪದೇ ಎಲ್ಲರೂ ಮತ ಚಲಾಯಿಸಬೇಕು ಎಂದು ,ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರ ದಿನಾಚರಣೆ ಅಂಗವಾಗಿ ತಹಶೀಲ್ದಾರ್ ವರದರಾಜು ಮಾತನಾಡಿದರು. .

18 ವರ್ಷದ ತುಂಬಿದ ಪ್ರತಿಯೊಬ್ಬರೂ ನೋಂದಣಿ ಮಾಡಿಸಿಕೊಳ್ಳಬೇಕು , ಈಗ ಚುನಾವಣೆ ವೇಳೆ ಯಾಗಿದ್ದು, ಈಗಾಗಲೇ ಚುನಾವಣೆ ಘೋಷಣೆಯಾಗಿದ್ದು, ವಿಶೇಷವಾಗಿ ಮತದಾರರ ಗುರುತಿನ ಚೀಟಿಗಳನ್ನು ಅವರ ಮನೆಗಳಿಗೆ ತಲುಪಿಸುವಂತಹ ಕೆಲಸವನ್ನು ತಾಲೂಕ್ ಕಚೇರಿಯ ಸಿಬ್ಬಂದಿಗಳು ಮಾಡುತ್ತಿದ್ದಾರೆಂದು, ಮುಖ್ಯವಾಗಿ ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿಯಾಗಬೇಕು.

ಕೆಲಸದ ಒತ್ತಡವಿದ್ದರೂ ಅಧಿಕಾರಿಗಳು ಪೋಸ್ಟಿಂಗ್ ಓಟಿಂಗ್ ಮುಖಾಂತರ ಮತ ಚಲಾಯಿಸುವುದನ್ನು ಮರೆಯಬಾರದು ಎಂದರು.  

ಕ್ಷೇತ್ರ ಶಿಕ್ಷಣಾಧಿಕಾರಿ ಅಶ್ವಥ್ ನಾರಾಯಣ ಮಾತನಾಡಿ, ಚುನಾವಣೆ ಬಗ್ಗೆ ಅರಿವು ಮೂಡಿಸುವುದು ಪ್ರತಿಯೊಬ್ಬರ ಕರ್ತವ್ಯವೆಂದು, ಮುಖ್ಯವಾಗಿ ಎಲ್ಲಾ ಪ್ರೌಢಶಾಲೆಗಳಲ್ಲಿ ಮತದಾರರ ಕ್ಲಬ್ ಗಳನ್ನು ಸ್ಥಾಪನೆ ಮಾಡಿ ಅದರ ಮೂಲಕ ವಿವಿಧ ಚಟುವಟಿಕೆಗಳನ್ನು ವಿದ್ಯಾರ್ಥಿಗಳ ಮೂಲಕ ಮಾಡಿಸಲಾಗುತ್ತಿದೆ ಎಂದರು.

ಈ.ಸಿ.ಓ ಶಿವಕುಮಾರ್ ಮಾತನಾಡಿ, ಪ್ರತಿ ವರ್ಷ ‘ರಾಷ್ಟ್ರೀಯ ಮತದಾರರ ದಿನ’ವನ್ನು ಒಂದು ವಿಶೇಷತೆ ಇಟ್ಟುಕೊಂಡು ಆಚರಿಸಲಾಗುತ್ತಿದೆ.

2011ರ ಜನವರಿ 25ರಂದು ‘ರಾಷ್ಟ್ರೀಯ ಮತದಾರರ ದಿನ’ ಎಂದು ಘೋಷಿಸಲಾಯಿತು. ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವುದು, ಮತದಾನದ ಪ್ರಮಾಣ ಹೆಚ್ಚಿಸುವುದು, ಅರ್ಹ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸುವುದು. 18 ವರ್ಷ ಮೇಲ್ಪಟ್ಟ ಎಲ್ಲಾ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕೆಂಬ ಸಂದೇಶ ಸಾರುವುದು ಇದರಲ್ಲಿ ಒಳಗೊಂಡಿದೆ ಎಂದು ವಿವರಿಸಿದರು.

ಮತಚಲಾಯಿಸುವ ಮೂಲಕ ಸದೃಢ ಪ್ರಜಾಪ್ರಭುತ್ವ ನಿರ್ಮಾಣ ಮಾಡಬಹುದೆಂದು, .

ಮುಂಬರುವ  ಚುನಾವಣೆಗಳಲ್ಲಿ ಯಾವುದೇ ಜಾತಿ ಧರ್ಮ ಆಮಿಷಕ್ಕೆ ಒಳಗಾಗದೆ, ನಿರ್ಭೀತಿಯಿಂದ ಮತ ಚಲಾಯಿಸಿ ಎಂದರು.

ಕಾರ್ಯಕ್ರಮದಲ್ಲಿ  ಶಾಲೆಗಳಲ್ಲಿ  ಮತದಾರ ಕ್ಲಬ್ ಮೂಲಕ ವಿವಿಧ ಚಟುವಟಿಕೆಗಳ ನಡೆಸಿ, ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಿದರು.  

ಕಾರ್ಯಕ್ರಮದಲ್ಲಿ ಗ್ರೇಡ್ 2 ತಹಶೀಲ್ದಾರ್, ಸುಮತಿ, ಎನ್ ಮೂರ್ತಿ, ಪಿ ಈ.ಓ ಚಿದಾನಂದ, ಮಾರುತೀಶ್ ಮುಂತಾದವರು ಭಾಗವಹಿಸಿದ್ದರು. 

ವರದಿ: ಶ್ರೀನಿವಾಸಲು ಎ