IMG 20230127 WA0009

ಮಾಧುಗಿರಿ: ಸರ್ಕಾರಿ ಶಾಲೆ ವಾರ್ಷಿಕೋತ್ಸವ ಸಮಾರಂಭ….!

DISTRICT NEWS ತುಮಕೂರು

ಶಾಲಾ ವಾರ್ಷಿಕೋತ್ಸವ ಸಮಾರಂಭ ಕಾರ್ಯಕ್ರಮ ….

ಮಧುಗಿರಿ. ಪಟ್ಟಣದ ಕೆ. ಆರ್. ಬಡಾವಣೆ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ನೃತ್ಯ ಪ್ರದರ್ಶನಗಳನ್ನು ಪ್ರದರ್ಶಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಈ ಹಿಂದೆ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಹಾಗೂ ವರ್ಗಾವಣೆಗೊಂಡ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿತ್ತು ಹಾಗೂ ಶಾಲೆಯಲ್ಲಿ ಶೈಕ್ಷಣಿಕವಾಗಿ ಉತ್ತಮ ನಿರ್ವಹಣೆ ತೋರುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕ ಬಹುಮಾನವನ್ನು ನೀಡಲಾಯಿತು.

ಶಾಲೆಯಲ್ಲಿ ಉತ್ತಮ ಕಾರ್ಯಕ್ಷೇಮತೆ ತೋರುವ ವಿದ್ಯಾರ್ಥಿಗಳಿಗೆ ಪೋಷದಾಯಕ ಬಹುಮಾನವನ್ನು ವಿತರಿಸಲಾಯಿತು. ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸುತ್ತಿರುವ ಮಕ್ಕಳ ಪೋಷಕ ಮತ್ತು ಪಾಲಕರಿಗೆ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

2022 23ನೇ ಸಾಲಿನಲ್ಲಿ ಎಸ್. ಎಸ್. ಎಲ್ .ಸಿ .ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು ಇತ್ತೀಚೆಗೆ ನಡೆದಂತಹ ಹೋಬಳಿ ಮಟ್ಟದ ಹಾಗೂ ಜಿಲ್ಲಾ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ ಜಯಗಳಿಸಿರುವ ವಿದ್ಯಾರ್ಥಿಗಳಿಗೂ ಸಹ ಶಾಲೆಯ ಮುಖ್ಯ ಶಿಕ್ಷಕರಿಂದ ಹಾಗೂ ಶಿಕ್ಷಕ ವೃಂದದವರಿಂದ ಶಾಲಾ ಅಭಿವೃದ್ಧಿ ಸಮಿತಿ ವತಿಯಿಂದ ಬಹುಮಾನ ವಿತರಣೆ ಮಾಡಲಾಯಿತು.

ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಂದ ಹಾಗೂ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಂದ ವಾರ್ಷಿಕೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರಾದ .ಶ್ರೀಮತಿ ನಾಯಕ್ ಕಮಲಾ ನಾರಾಯಣರವರ ಆಸಕ್ತಿ ಹಾಗೂ ಶಿಕ್ಷಕ ವರ್ಗದ ಶ್ರಮ ತುಂಬಾ ಎದ್ದು ಕಾಣುತ್ತಿತ್ತು.

ಇತ್ತೀಚಿನ ದಿನಮಾನಗಳಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು ತುಂಬಾ ಕಡಿಮೆ ದಾಖಲಾತಿ ಆಗುತ್ತಿರುವ ಸಂದರ್ಭದಲ್ಲಿ ಮಧುಗಿರಿ ಪಟ್ಟಣದ ಎಲ್ಲಾ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಪೈಪೋಟಿ ನಡೆಯುತ್ತಿರುವ ಪಟ್ಟಣದ ಕೆ .ಆರ್ .ಬಡಾವಣೆಯ ಸರ್ಕಾರಿ ಪ್ರೌಢಶಾಲೆಯು ಶೈಕ್ಷಣಿಕ ಗುಣಮಟ್ಟದಲ್ಲಿ ಇನ್ನಷ್ಟು ಅಭಿವೃದ್ಧಿಯತ್ತ ಸಾಗಲಿ ಎಂಬುದು ಶಾಲಾ ಅಭಿವೃದ್ಧಿ ಸಮಿತಿಯವರು ಹಾಗೂ ಶಾಲಾ ಶಿಕ್ಷಕರಂದದವರು ಮುಖ್ಯ ಶಿಕ್ಷಕರು ಹಾಗೂ ಪೋಷಕ ವರ್ಗದವರ ಆಶಯವಾಗಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿಯರಾದ ನಾಯಕ ಕಮಲ ನಾರಾಯಣ. ಈ ಹಿಂದೆ ಇದ್ದಂತಹ ಬಿಇಓ ಕೃಷ್ಣಪ್ಪ ಎಸ್ ಡಿ ಎಂ ಸಿ.ಅಧ್ಯಕ್ಷರಾದ ನಾಗರಾಜು ಸದಸ್ಯರುಗಳಾದ ಎಚ್.ಎಸ್. ಸೂರ್ಯನಾರಾಯಣ್ ಗೋವಿಂದಪ್ಪ ಹಾಜರಿದ್ದರು. ಕಾರ್ಯಕ್ರಮದ ಸ್ವಾಗತ ಭಾಷಣವನ್ನು ಆಶಾ ಎಸ್
ಏನ್. ನಡೆಸಿಕೊಟ್ಟರು ಕಾರ್ಯಕ್ರಮದ ನಿರೂಪಣೆಯನ್ನು ಗೋವಿಂದರಾಜು ಆರ್. ರವರು ನಿರೂಪಿಸಿದರು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪೋಷಕರು ಎಸ್. ಡಿ . ಎಂ ಸಿ. ಸದಸ್ಯರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ. ಲಕ್ಷ್ಮಿಪತಿ ದೊಡ್ಡ ಯ ಲ್ಕೂರು.