ಪಾವಗಡ: ತಾಲೂಕಿನ ರೊಪ್ಪ ಗ್ರಾಮದಲ್ಲಿ ಮಧ್ಯಾಹ್ನ ರಂಗಪ್ಪ ಎನ್ನುವ ಅನಾಥ ವ್ಯಕ್ತಿ ಸಾವನ್ನಪ್ಪಿದ್ದು ಸತ್ತ ವ್ಯಕ್ತಿಯನ್ನು ಹೂಳಲು ಸ್ಮಶಾನ ವ್ಯವಸ್ಥೆ ಇಲ್ಲದಿರುವುದರಿಂದ ಸಂಜೆಯ ವೇಳೆಗೆ ಸಾವಿರ ಜನರು ಸೇರಿ ಪಾವಗಡ ಪೆನುಗೊಂಡ ಮುಖ್ಯ ರಸ್ತೆ ಬಂದ್ ಮಾಡಿ , ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಿಂದಾಗಿ ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿತ್ತು, ಸ್ಥಳಕ್ಕೆ ಪೊಲೀಸ್ ಸಿಬ್ಬಂದಿಗಳು, ತಹಶೀಲ್ದಾರ್ ಕಚೇರಿಯ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಪ್ರತಿಭಟನೆ ಕೈಬಿಡುವಂತೆ ಮನವೊಲಿಸಿದರು .
ತಮ್ಮ ಊರಿಗೆ ಸ್ಮಶಾನ ಇಲ್ಲವೆಂದು ವ್ಯವಸ್ಥೆ ಕಲ್ಪಿಸಿ ಕೊಡಬೇಕಾಗಿ ಪ್ರತಿಭಟನಾ ನಿರತರು ಆಗ್ರಹಿಸಿದರು.