ಸರ್ಕಾರ ರಾಜ್ಯದ ಅಭಿವೃದ್ಧಿಗೆ ಬದ್ಧ” – ಜಂಟಿ ಅಧಿವೇಶವನ ಉದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲರು
ಬೆಂಗಳೂರು, ಫೆಬ್ರವರಿ 10, (ಕರ್ನಾಟಕ ವಾರ್ತೆ):
ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ಸರ್ಕಾರದ ಸಾಧನೆ ಮತ್ತು ದಿಕ್ಸೂಚಿಗಳ ಬಗ್ಗೆ ಭಾಷಣ ಮಾಡಿದರು.
ಬೆಳಿಗ್ಗೆ ವಿಧಾನಸೌಧದ ಮುಖ್ಯ ದ್ವಾರಕ್ಕೆ ಆಗಮಿಸಿದ ರಾಜ್ಯಪಾಲರನ್ನು ಸಭಾಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ಸಭಾಪತಿಗಳಾದ ಬಸವರಾಜ್ ಹೊರಟ್ಟಿ. ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬರಮಾಡಿಕೊಂಡರು.
ಕರ್ನಾಟಕ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಎಲ್ಲರನ್ನೂ ಸ್ವಾಗತಿಸಿದ ರಾಜ್ಯಪಾಲರು, ನಮ್ಮ ಸರ್ಕಾರವು ರೈತರು, ಕಾರ್ಮಿಕರು, ಬಡವರು, ದುರ್ಬಲ ವರ್ಗದವರು ಮತ್ತು ಅವಕಾಶ ವಂಚಿತರ ಕಲ್ಯಾಣ ಮತ್ತು ಅಭಿವೃದ್ಧಿಗೆ ಬದ್ಧವಾಗಿದೆ ಜೊತೆಗೆ ಅಭಿವೃದ್ಧಿ. ಪಥದಲ್ಲಿ ಮುಂಚೂಣಿಯ ರಾಜ್ಯವಾಗಿ ದಾಪುಗಾಲಿಡುತ್ತಿದೆ. ಎಲ್ಲರನ್ನು ಒಳಗೊಂಡ ಅಭಿವೃದ್ಧಿಯ ಮಾದರಿಯನ್ನು ನನ್ನ ಸರ್ಕಾರ ಅನುಸರಿಸುತ್ತಿದ್ದು, ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂದಿನ 25 ವರ್ಷಗಳ ಅಮೃತ ಕಾಲದಲ್ಲಿ ಹಾಕಿಕೊಟ್ಟ ಪಗತಿ ಪಥವನ್ನು ಯಶಸ್ವಿಯಾಗಿ ಕ್ರಮಿಸುವ ವಿಶ್ವಾಸ ನನಗಿದೆ ಎಂದರು.
ರೈತನು ಈ ದೇಶದ ಬೆನ್ನೆಲುಬು, ರೈತ ಮತ್ತು ಅವನ ಕುಟುಂಬವನ್ನು ಸದೃಢಗೊಳಿಸಲು ನನ್ನ ಸರ್ಕಾರವು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮುಖ್ಯಮಂತ್ರಿ ರೈತ ವಿದ್ಯಾನಿಧಿಯನ್ನು ನೇಕಾರರು, ಕೃಷಿ ಕಾರ್ಮಿಕರು, ಮುಂತಾದ ವಿವಿಧ ವರ್ಗಗಳಿಗೂ ವಿಸ್ತರಿಸಲಾಗಿದೆ. ಅದರಂತೆ 10.79 ಲಕ್ಷ ವಿದ್ಯಾರ್ಥಿಗಳಿಗೆ 484 ಕೋಟಿ ರೂಪಾಯಿಗಳ ವಿದ್ಯಾರ್ಥಿ ವೇತನವನ್ನು ನೇರ ನಗದು ವರ್ಗಾವಣೆ ಮೂಲಕ ವರ್ಗಾಯಿಸಲಾಗುತ್ತದೆ.
ರೈತಶಕ್ತಿ ಯೋಜನೆಯಡಿ ಕೃಷಿ ಯಾಂತ್ರೀಕರಣ ಪೆÇ್ರೀತ್ಸಾಹಿಸಲು ಪ್ರತಿ ಎಕರೆಗೆ 250 ರೂಪಾಯಿಗಳಂತೆ ಗರಿಷ್ಠ ಐದು ಎಕರೆಗೆ ಡೀಸೆಲ್ ಸಹಾಯಧನ ನೀಡುತ್ತಿದ್ದು, ಇದಕ್ಕಾಗಿ, 400 ಕೋಟಿ ರೂಪಾಯಿಗಳನ್ನು ಒದಗಿಸಿದ್ದು, 386.98 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಇದರಿಂದ 53.22 ಲಕ್ಷ ರೈತರುಗಳಿಗೆ ನೇರ ನಗದು ವರ್ಗಾವಣೆ ಮೂಲಕ ಸಹಾಯ ಮಾಡಲಾಗಿದೆ. ಕೀಟ, ರೋಗ, ಕಳೆಬಾಧೆ ಮತ್ತು ಮಣ್ಣಿನ ಪೆÇೀಷಕಾಂಶದ ಸಮರ್ಪಕ ನಿರ್ವಹಣೆಗಾಗಿ ಕೃಷಿ ಸಂಜೀವಿನಿ ಯೋಜನೆಯಡಿ 160 ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯಗಳನ್ನು ಲೋಕಾರ್ಪಣೆ ಮಾಡಿದ್ದು, 2022-23ನೇ ಸಾಲಿಗೆ 64 ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯವನ್ನು ಅನುμÁ್ಠನ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ನನ್ನ ಸರ್ಕಾರವು ಅಮೃತ ಮಹೋತ್ಸವದ ಅಂಗವಾಗಿ 750 ಅಮೃತ ರೈತ / ಮೀನುಗಾರರ / ನೇಕಾರರ ಉತ್ಪಾದಕರ ಸಂಸ್ಥೆಗಳನ್ನು ರಚಿಸಿರುವುದಾಗಿ ಘೋಷಿಸಿದ್ದು, ಇಲ್ಲಿಯವರೆಗೆ 364 ಸಂಸ್ಥೆಗಳನ್ನು ನೊಂದಾಯಿಸಲಾಗಿದೆ. ಇದಕ್ಕಾಗಿ 24.57 ಕೋಟಿ ರೂಪಾಯಿಗಳ ವೆಚ್ಚ ಮಾಡಲಾಗಿದೆ. ಪುಸಕ್ತ ಸಾಲಿನಿಂದ ರಾಯಚೂರು ಕೃಷಿ ವಿಶ್ವವಿದ್ಯಾಲಯದ ಅಧೀನದಲ್ಲಿ ಬಳ್ಳಾರಿ ಜಿಲ್ಲೆಯ ಹಗರಿಯಲ್ಲಿ ನೂತನವಾಗಿ ಕೃಷಿ ಕಾಲೇಜನ್ನು ಪ್ರಾರಂಭಿಸಲಾಗಿದೆ.
ಪ್ರಸಕ್ತ ಸಾಲಿನಲ್ಲಿ 50,335 ರೈತರ ತಾಕುಗಳಲ್ಲಿ ಸುಮಾರು 27,910 ಹೆಕ್ಟೇರ್ ಪ್ರದೇಶದಲ್ಲಿ ಇಲಾಖೆಯ ವತಿಯಿಂದ ತೋಟಗಾರಿಕೆ ಬೆಳೆಗಳನ್ನು ವಿಸ್ತರಿಸಲಾಗಿದೆ. 60 ಲಕ್ಷ ಸಂಖ್ಯೆ ತೋಟಗಾರಿಕ ಬೆಳೆಗಳ ಸಸಿ | ಕಸಿಗಳನ್ನು ರೈತಾಪಿ ವರ್ಗಕ್ಕೆ ವಿತರಿಸಲಾಗಿದೆ ಮತ್ತು ಮಳೆ ನೀರನ್ನು ಸಂರಕ್ಷಿಸಿ ಅಂತರ್ಜಲ ಮಟ್ಟವನ್ನು ವೃದ್ಧಿಸಲು 484 ಸಂಖ್ಯೆಯ ಕೃಷಿ ಹೊಂಡ ಘಟಕಗಳನ್ನು ನಿರ್ಮಿಸಲಾಗಿದೆ ಎಂದು ಹೇಳಿದರು.
ಕರ್ನಾಟಕ ರಾಜ್ಯವು ರೇμÉ್ಮ ಉತ್ಪಾದನೆಯಲ್ಲಿ ಅಗ್ರಸ್ಥಾನ ಹೊಂದಿದ. 1.15 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಹಿಪ್ಪು ನೇರಳ ಬೇಸಾಯವಿದ್ದು, 1.38 ಲಕ್ಷ ರೈತ ಕುಟುಂಬಗಳು ರೇμÉ್ಮ ಕೃಷಿಯಲ್ಲಿ ತೊಡಗಿದ್ದು, ವಾರ್ಷಿಕವಾಗಿ 11,191 ಮೆಟ್ರಿಕ್‍ನಷ್ಟು ಕಚ್ಚಾ ರೇμÉ್ಮಯನ್ನು ಉತ್ಪಾದಿಸಲಾಗಿದ್ದು, ಅಂದಾಜು 14.91 ಲಕ್ಷ ಜನರಿಗೆ ಉದ್ಯೋಗವನ್ನು ಕಲ್ಪಿಸಿದ. 104.19 ಕೋಟಿ ರೂಪಾಯಿಗಳ ಸಹಾಯಧನ ಸೌಲಭ್ಯವನ್ನು 47,682 ರೇಷ್ಮ ಭಾಗೀದಾರರಿಗೆ ನನ್ನ ಸರ್ಕಾರವು ಒದಗಿಸಿದೆ. ಪ್ರಮುಖ ರೇμÉ್ಮ ಗೂಡಿನ ಮಾರುಕಟ್ಟೆಯಲ್ಲಿ ಪಾರದರ್ಶಕತೆ ತರಲು ಹಾಗೂ ಸ್ಪರ್ಧಾತ್ಮಕ ದರ ನೀಡಲು ಇ-ಹರಾಜು, ಇ-ವೇಮೆಂಟ್ ಮತ್ತು ಇ-ಪೇಮೆಂಟ್ ವ್ಯವಸ್ಥೆ ಜಾರಿ ಮಾಡಿದ ದೇಶದ ಮೊದಲ ಹಾಗೂ ಏಕೈಕ ರಾಜ್ಯ ಕರ್ನಾಟಕವಾಗಿದೆ.
ಗೋ ಸಂಪತ್ತಿನ ರಕ್ಷಣೆಗಾಗಿ ರಾಜ್ಯದಲ್ಲಿ ಗೋಹತ್ಯಾ ನಿμÉೀಧ ಕಾಯ್ದೆ ಜಾರಿಗೆ ತರಲಾಗಿದೆ. ಅಶಕ್ತ, ಅನಾರೋಗ್ಯ ಪೀಡಿತ, ನಿರ್ಗತಿಕ, ರೈತರು ಸಾಕಲಾಗದ ಜಾನುವಾರುಗಳನ್ನು ಸಂರಕ್ಷಣೆ ಮಾಡಲು ರಾಜ್ಯ ಸರ್ಕಾರದಿಂದ ಸರ್ಕಾರಿ ಗೋ 100 ಶಾಲೆಗಳನ್ನು ನಿರ್ಮಿಸಲಾಗುತ್ತಿದೆ. ಸರ್ಕಾರಿ ಹಾಗೂ ಖಾಸಗಿ ಗೋ ಶಾಲೆಗಳಲ್ಲಿರುವ ಜಾನುವಾರುಗಳನ್ನು ಸಂರಕ್ಷಿಸಲು ಸಾರ್ವಜನಿಕ ಸಹಭಾಗಿತ್ವವನ್ನು ಪೆÇ್ರೀತ್ಸಾಹಿಸುವ ಪುಣ್ಯಕೋಟಿ ದತ್ತು ಯೋಜನೆಯನ್ನು ದೇಶದಲ್ಲಿಯೇ ಪ್ರಥಮವಾಗಿ ಪ್ರಾರಂಭಿಸಲಾಗಿದೆ. ಈ ಯೋಜನೆಗೆ ರಾಜ್ಯ ಸರ್ಕಾರಿ ನೌಕರರು ತಮ್ಮ ವೇತನದಿಂದ 26.97 ಕೋಟಿ ರೂಪಾಯಿಗಳನ್ನು ಸ್ವ-ಪ್ರೇರಣೆಯಿಂದ ವಂತಿಗೆಯಾಗಿ ನೀಡಿರುವುದನ್ನು ನನ್ನ ಸರ್ಕಾರವು ಪಶಂಸಿಸುತ್ತದೆ.
ನನ್ನ ಸರ್ಕಾರದ ವತಿಯಿಂದ ರಾಜ್ಯದ ಜಾನುವಾರುಗಳಲ್ಲಿ ಕಾಣಿಸಿಕೊಂಡಿರುವ ಚರ್ಮಗಂಟು ರೋಗೋದ್ರೇಕ ನಿಯಂತ್ರಣಕ್ಕಾಗಿ ಒಂದು ಕೋಟಿಗೂ ಹೆಚ್ಚು ಜಾನುವಾರುಗಳಿಗೆ ಲಸಿಕೆ ಹಾಕಿಸಲಾಗಿದೆ. ಮರಣ ಹೊಂದಿದ ಕರು, ದನ ಮತ್ತು ಎತ್ತುಗಳಿಗೆ ಪರಿಹಾರಧನ ನೀಡಲು ಸರ್ಕಾರದಿಂದ 37 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ ಎಂದರು.