IMG 20230220 WA0004

Karnataka: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ‌ ಭಗವಾನ್ ಇನ್ನಿಲ್ಲ….!

FILM NEWS

ಕನ್ಮಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭಗವಾನ್ (90) ಚಿಕಿತ್ಸೆ ಫಲಕಾರಿಯಾಗದೇ ಜಯದೇವ ಆಸ್ಪತ್ರೆ ಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕನ್ನಡ ಸಿನಿಮಾ ರಂಗದಲ್ಲಿ ದೊರೈ ಭಗವಾನ್ ಎಂದೇ ಕನ್ಜೋನಡಡಿ ಖ್ಯಾತಿಯಾಗಿತ್ತು. ಈಗಾಗಲೇ ದೊರೆ ದೂರವಾಗಿದ್ದಾರೆ. ಭಗವಾನ್ ಅವರು ಇಂದು ಇಹ ಲೋಕ ತ್ಯಜಿಸಿದ್ದಾರೆ.

ಶ್ರೀನಿವಾಸ್ ಕೃಷ್ಣ ಅಯ್ಯಂಗಾರ್ ಭಗವಾನ್ ಇವರು ಪೂರ್ಣ ಹೆಸರು. 1933ರಲ್ಲಿ ಮೈಸೂರಿನ ತಮಿಳು ಅಯ್ಯಂಗಾರ್ ಕುಟುಂಬದಲ್ಲಿ ಜನಿಸಿದ್ದರು

IMG 20230220 WA0006

1956ರಲ್ಲಿ ಕಣಗಾಲ್ ಪ್ರಭಾಕರ ಶಾಸ್ತ್ರಿಗಳಿಗೆ ಸಹಾಯಕ ನಿರ್ದೇಶಕರಾಗಿ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದ್ದರು.

1966ರಲ್ಲಿ ತೆರೆಕಂಡ ಸಂಧ್ಯಾರಾಗ ಚಿತ್ರದ ಮೂಲಕ ಸಹಾಯಕ ನಿರ್ದೇಶಕರಾಗಿ ಭಡ್ತಿ ಪಡೆದವರು. ನಂತರ ನಿರ್ದೇಶಕ ದೊರೈರಾಜ್ ಜೊತೆಗೂಡಿ ಸ್ವತಂತ್ರ ನಿರ್ದೇಶಕರಾದವರು. ಭಗವಾನ್. ಜೊಡಿ 49 ಸಿನಿಮಾಗಳನ್ನು ಜೋಡಿ ನಿರ್ದೇಶನ ಮಾಡಿದ್ದು ವಿಶೇಷ. ಈ ಜೋಡಿ 24 ಕಾದಂಬರಿ ಆಧರಿಸಿದ ಸಿನಿಮಾಗಳನ್ನು ನಿರ್ದೇಶನ ಮಾಡಿದೆ. ಜೇಡರ ಬಲೆ, ಕಸ್ತೂರಿ ನಿವಾಸ, ಎರಡು ಕನಸು, ಬಯಲು ದಾರಿ, ಗಿರಿಕನ್ಯೆ, ಚಂದನದ ಗೊಂಬೆ, ಜೀವನ ಚೈತ್ರ, ಒಡಹುಟ್ಟಿದವರು, ಯಾರಿವನು, ಮುನಿಯನ ಮಾದರಿ ಹೀಗೆ ಅಷ್ಟೂ ಸೂಪರ್ ಹಿಟ್ ಚಿತ್ರಗಳು ಇವರ ನಿರ್ದೇಶನದಲ್ಲಿ ಮೂಡಿಬಂದಿವೆ.

ಗಣ್ಯರ ಸಂತಾಪ