IMG 20230220 WA0198

ಪಾವಗಡ: ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಾರ್ವಜನಿಕರ ಮನವಿ…!

DISTRICT NEWS ತುಮಕೂರು

ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಾರ್ವಜನಿಕರ ಮನವಿ.
ಪಾವಗಡ : ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮವು ತಾಲೂಕಿನ ಚಿಕ್ಕನಾಯಕನಹಳ್ಳಿಯಲ್ಲಿ ಗ್ರಾಮದಲ್ಲಿ ಸೋಮವಾರ ನಡೆಯಿತು.
ಗ್ರಾಮದಲ್ಲಿ ಸರಿಯಾದ ರಸ್ತೆ ಇಲ್ಲ, ಶುದ್ಧ ಕುಡಿಯುವ ನೀರಿನ ಘಟಕ ಹಾಳಾಗಿದೆ, ಫ್ಲೋರೈಡ್ ನೀರನ್ನು ಕುಡಿಯುವಂತಹ ಪರಿಸ್ಥಿತಿ ಉಂಟಾಗಿದೆ ಎಂದು ಗ್ರಾಮಸ್ಥರು ಕಾರ್ಯಕ್ರಮದಲ್ಲಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು.
.
ತಾಲ್ಲೂಕು ಕೇಂದ್ರ ಸೇರಿದಂತೆ ವಿವಿದ ಪ್ರದೇಶಗಳಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಹಾಳಾಗಿವೆ.
ತಾಲೂಕು ಕೇಂದ್ರದಿಂದ ಹಳ್ಳಿಗೆ ಸಂಪರ್ಕ ಮಾಡುವ ರಸ್ತೆಗಳು ಉತ್ತಮವಾಗಿಲ್ಲವೆಂದು, ಅಸಮರ್ಪಕ ರಸ್ತೆಯಿಂದಾಗಿ ವಿದ್ಯಾರ್ಥಿಗಳು, ಸಾರ್ವಜನಿಕರು ತುಂಬಾ ತೊಂದರೆ ಆಗುತ್ತಿದೆ ಎಂದು ಗ್ರಾಮಸ್ಥರು ದೂರಿದರು.

ತಮ್ಮ ಹಳ್ಳಿಯ ರಸ್ತೆಗಳನ್ನು ಕೂಡಲೇ ದುರಸ್ತಿ ಮಾಡಿಸಬೇಕೆಂದು ಜನರು ಆಗ್ರಹಿಸಿದರು.
ಚರಂಡಿಗಳ ಸರಿಯಾದ ನಿರ್ವಹಣೆ ಇಲ್ಲದೆ , ಕೊಳಚೆಯ ನೀರು ರಸ್ತೆಯ ಮೇಲೆ ಹರಿಯುತ್ತಿದೆ ಎಂದು, ಸೊಳ್ಳೆಗಳ ಹಾವಳಿ ಹೆಚ್ಚಾಗಿ ಅನಾರೋಗ್ಯ ಕೀಡಾಗ ಬೇಕಾಗುತ್ತದೆ ಎಂದು ಜನರು ತಮ್ಮ ಆವೇದನೆಯನ್ನು ಹೇಳಿಕೊಂಡರು.
ಉಪವಿಭಾಗಾಧಿಕಾರಿ ರಿಷಿ ಆನಂದ್, ಸಾರ್ವಜನಿಕರು ಗ್ರಾಮದ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಬೇಕು. ಜೊತೆಗೆ ಅಭಿವೃದ್ಧಿ ಕಾರ್ಯಗಳಲ್ಲಿ ಅಧಿಕಾರಿಗಳೊಂದಿಗೆ ಸಹಕಾರ ನೀಡಬೇಕು ಎಂದರು.
ತಹಶೀಲ್ದಾರ್ ಸುಜಾತಾ, ಶಿರಸ್ತೇದಾರ್ ಎನ್. ಮೂರ್ತಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ವಿಜಯಮೂರ್ತಿ, ತೋಟಗಾರಿಕೆ ಇಲಾಖೆಯ ಶಂಕರಮೂರ್ತಿ, ತಿರುಪತ್ತಯ್ಯ ಮಾತನಾಡಿದರು.

ವಿವಿದ ಕಲಾ ತಂಡಗಳು ಬೀದಿನಾಟಕ ಪ್ರದರ್ಶಿಸಿದವು. ಶಾಲಾ ಮಕ್ಕಳು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭವ್ಯಶ್ರೀ, ಉಪಾಧ್ಯಕ್ಷ ಶ್ರೀರಾಮಪ್ಪ, ಸದಸ್ಯ ಶಿವಣ್ಣ, ಈಶ್ವರಮ್ಮ, ರಂಗಾರೆಡ್ಡಿ ಉಪಸ್ಥಿತರಿದ್ದರು.

ವರದಿ: ಶ್ರೀನಿವಾಸಲು ಎ