IMG 20230224 WA0029

ಕಾಂಗ್ರೆಸ್ :ಬಿಪಿಎಲ್ ಕಾರ್ಡ್ ಕುಟುಂಬದ ಪ್ರತಿ ಸದಸ್ಯನಿಗೆ 10.ಕೆ.ಜಿ ಅಕ್ಕಿ…!

POLATICAL STATE

ಕಾಂಗ್ರೆಸ್‌ ಪಕ್ಷದ‌ ಮೂರನೇ ಗ್ಯಾರಂಟಿ 10 ಕೆಜಿ ಅಕ್ಕಿ

ಬೆಂಗಳೂರು: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ನೆರವಾಗುವ ಉದ್ದೇಶದಿಂದ ಈಗಾಗಲೇ 2 ಗ್ಯಾರಂಟಿ ಯೋಜನೆ ಘೋಷಿಸಿದ್ದೇವೆ. ಈಗ ಮೂರನೇ ಗ್ಯಾರಂಟಿಯಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಕಾರ್ಡ್ ಕುಟುಂಬದ ಪ್ರತಿ ಸದಸ್ಯನಿಗೆ 10.ಕೆ.ಜಿ ಅಕ್ಕಿ ನೀಡಲು ತೀರ್ಮಾನಿಸಿದ್ದೇವೆ.

ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ನೆರವು ನೀಡುವ ಉದ್ದೇಶದಿಂದ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ನೀಡುವ ಗೃಹಜ್ಯೋತಿ ಯೋಜನೆ ಮೊದಲ ಗ್ಯಾರಂಟಿಯಾಗಿ ಘೋಷಣೆ ಮಾಡಿದ್ದೇವೆ. ಆ ಮೂಲಕ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು 1500 ರೂ ಉಳಿತಾಯ ಮಾಡಲು ಸಹಕಾರಿಯಾಗುತ್ತಿದ್ದೇವೆ. ಇನ್ನು ಪ್ರತಿ ಮನೆಯ ಮನೆಯೊಡತಿಗೆ 2 ಸಾವಿರ ಪ್ರೋತ್ಸಾಹ ಧನವನ್ನು ನೀಡಲು ಗೃಹಲಕ್ಷ್ಮಿ ಎಂಬ ಎರಡನೇ ಗ್ಯಾರಂಟಿ ಯೋಜನೆ ಘೋಷಿಸಿದ್ದೇವೆ.

ಪ್ರಜಾಧ್ವನಿ ಯಾತ್ರೆ ಸಂದರ್ಭದಲ್ಲಿ ನಮ್ಮ ಹಿಂದಿನ ಸರ್ಕಾರದ ಅನ್ನಭಾಗ್ಯ ಯೋಜನೆ ಬಗ್ಗೆ ಜನ ಪ್ರಶಂಸೆ ವ್ಯಕ್ತಿಪಡಿಸಿದ್ದು, ಒಂದು ವೇಳೆ ಕಾಂಗ್ರೆಸ್ ಸರ್ಕಾರ ಈ ಯೋಜನೆ ನೀಡದಿದ್ದರೆ ಕೋವಿಡ್ ಸಮಯದಲ್ಲಿ ನಾವು ಬದುಕು ನಡೆಸುವುದೇ ಕಷ್ಟವಾಗುತ್ತಿತ್ತು ಎಂದು ಹೇಳಿದರು.

ನಮ್ಮ ಸರಕಾರ ನೀಡುತಿದ್ದ 7 ಕೆ.ಜಿ ಅಕ್ಕಿಯನ್ನು ಬಿಜೆಪಿ ಸರ್ಕಾರ 5 ಕೆ.ಜಿಗೆ ಇಳಿಸಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ನಾನು, ನಮ್ಮ ಶಾಸಕಾಂಗ ಪಕ್ಷದ ನಾಯಕರು, ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ ಇತರ ನಾಯಕರೆಲ್ಲರೂ ಸೇರಿ ಚರ್ಚಿಸಿ ಅನ್ನಭಾಗ್ಯ ಯೋಜನೆಗೆ ಹೆಚ್ಚಿನ ಶಕ್ತಿ ತುಂಬಬೇಕು, ಆ ಮೂಲಕ ರಾಜ್ಯವನ್ನು ಹಸಿವು ಮುಕ್ತವನ್ನಾಗಿ ಮಾಡಬೇಕು ಎಂದು ನಮ್ಮ ಮೂರನೇ ಗ್ಯಾರಂಟಿ ಯೋಜನೆಯಾಗಿ 10 ಕೆ.ಜಿ ಅಕ್ಕಿಯನ್ನು ನೀಡಲು ನಿರ್ಧರಿಸಲಾಗಿದೆ.

IMG 20230224 WA0030

ಇಂದು ವಿಧಾನಮಂಡಲ ಅಧಿವೇಶನ ಮುಕ್ತಾಯಗೊಳ್ಳುತ್ತಿದ್ದು, ಬಿಜೆಪಿಯ ಕೊನೆ ದಿನಗಳು ಸಮೀಪಿಸುತ್ತಿವೆ. ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ 2013 ರಲ್ಲಿ ಬಸವ ಜಯಂತಿ ದಿನ ಅಧಿಕಾರ ಸ್ವೀಕಾರ ಮಾಡಿ ರಾಜ್ಯ ಹಾಗೂ ದೇಶಕ್ಕೆ ಸಂದೇಶ ಕೊಟ್ಟಿದ್ದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮಾಡಲು ಸಾಧ್ಯವಾಗದ ಯೋಜನೆಗಳನ್ನು ಈಗ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಮೂಲಕ ಮಾಡುತ್ತಿದೆ.

ಮುಖ್ಯಮಂತ್ರಿಗಳು ನಾವುಗಳು ಇಲ್ಲದ ಸಮಯದಲ್ಲಿ ನಿನ್ನೆ ವಿಧಾನಮಂಡಲ ಅಧಿವೇಶನದಲ್ಲಿ ಅರ್ಕಾವತಿ ರಿಡೂ ವಿಚಾರವಾಗಿ ಮಾತನಾಡಿ ಪತ್ರಿಕೆಗಳಲ್ಲಿ ಹೆಡ್ ಲೈನ್ ಬರುವಂತೆ ಮಾಡಿದ್ದಾರೆ. ಅವರು ವಿರೋಧ ಪಕ್ಷದಲ್ಲಿ ಕೂತಿದ್ದಾಗ ಕಡಲೇಪುರಿ ತಿನ್ನುತ್ತಿದ್ದರಾ? ಇನ್ನು ಕಳೆದ ನಾಲ್ಕು ವರ್ಷಗಳಿಂದ ಆಡಳಿತ ಮಾಡಿದರಲ್ಲಾ ಆಗ್ಯಾಕೆ ಅವರು ಸುಮ್ಮನಿದ್ದರು. ಅವರು ಈ ವರದಿಯನ್ನು ಸದನದಲ್ಲಿ ಮಂಡಿಸಿ ಚರ್ಚೆ ಮಾಡಲಿಲ್ಲ ಯಾಕೆ? ಈಗಲೂ ನಾನು ಅವರಿಗೆ ಸವಾಲು ಹಾಕುತ್ತೇನೆ. ಒಂದು ದಿನ ಅದಿವೇಶನ ವಿಸ್ತರಣೆ ಮಾಡಲಿ, ಈ ವಿಚಾರವಾಗಿ ಚರ್ಚೆಗೆ ಅವಕಾಶ ನೀಡಲಿ. ನಾವು ಎಐಸಿಸಿ ಅಧಿವೇಶನಕ್ಕೆ ಹೋಗದಿದ್ದರೂ ಪರ್ವಾಗಿಲ್ಲ, ನಾವು ಈ ವಿಚಾರವಾಗಿ ಚರ್ಚೆ ಮಾಡಲು ಸಿದ್ಧವಿದ್ದೇವೆ.

ಇನ್ನು ಕೇಂದ್ರ ಸರ್ಕಾರ ಎನ್ಇಪಿಯಲ್ಲಿ 1 ನೇ ತರಗತಿ ಸೇರಲು ಮಕ್ಕಳಿಗೆ 6 ವರ್ಷ ವಯೋಮಿತಿ ನಿಗದಿ ಮಾಡಿರುವುದರಿಂದ ಅನೇಕ ಮಕ್ಕಳಿಗೆ ತೊಂದರೆಯಾಗಿದೆ. ನಾವು ಕೂಡ ಶಿಕ್ಷಣ ಸಂಸ್ಥೆ ನಡೆಸುತ್ತಿದ್ದು, ಈಗಿರುವ ಪದ್ಧತಿಯಲ್ಲಿ ಯಾವ ಲೋಪವಿದೆ? ಶಿಕ್ಷಣ ಎಂಬುದು ರಾಜ್ಯಕ್ಕೆ ಸಂಬಂಧಿಸಿದ ವಿಚಾರವಾಗಿದ್ದು, ಕೇಂದ್ರ ಇದರಲ್ಲಿ ಹಸ್ತಕ್ಷೇಪ ಮಾಡಬಾರದು. ನಾವು ಅಧಿಕಾರಕ್ಕೆ ಬಂದರೆ ಎನ್ಇಪಿ ಜಾರಿಗೆ ಅವಕಾಶ ನೀಡವುದಿಲ್ಲ. ನಮ್ಮ ರಾಜ್ಯ ಜ್ಞಾನದ ರಾಜಧಾನಿಯಾಗಿದ್ದು, ದೇಶದಲ್ಲಿ ಇಂಜಿನಿಯರ್, ಡಾಕ್ಟರ್ ಹಾಗೂ ನರ್ಸ್ ಗಳು ರಾಜ್ಯದಿಂದಲೇ ಹೆಚ್ಚು ತಯಾರಾಗಿದ್ದಾರೆ. ಹೀಗೆ ನಮ್ಮ ರಾಜ್ಯ ಶಿಕ್ಷಣದ ಎಲ್ಲ ಹಂತದಲ್ಲೂ ದೇಶಕ್ಕೆ ಮಾದರಿಯಾಗಿದೆ.

IMG 20230224 WA0027

ಗ್ಯಾರಂಟಿ ಯೋಜನೆಗಳಿಗೆ ಎಲ್ಲಿಂದ ದುಡ್ಡು ತರುತ್ತಾರೆ ಎಂಬ ಬಿಜೆಪಿ ನಾಯಕರ ಪ್ರಶ್ನೆ ಕುರಿತು ಕೇಳಿದಾಗ, ‘ನೀವು ಅವರ ಪ್ರಣಾಳಿಕೆ ತೆಗೆದು ನೋಡಿ. ರೈತರಿಗೆ 1 ಲಕ್ಷ ಸಾಲ ಮನ್ನಾ ಮಾಡುತ್ತೇವೆ ಎಂದು ಹೇಳಿದ್ದರು. 7 ರಿಂದ 10 ಗಂಟೆಗೆ ಉಚಿತ ವಿದ್ಯುತ್ ನೀಡುವುದಾಗಿ ಹೇಳಿದ್ದರು. ಡಬಲ್ ಇಂಜಿನ್ ಸರ್ಕಾರದಲ್ಲಿ ಇದು ಸಾಧ್ಯವಾಗಲಿಲ್ಲ. ಇನ್ನು ರಾಜ್ಯಪಾಲರ ಭಾಷಣದಲ್ಲಿ ಅವರು ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಹೆಚ್ಚುವರಿ ವಿದ್ಯುತ್ ಅನ್ನು ಬೇರೆ ರಾಜ್ಯಕ್ಕೆ ಮಾರಿ 4 ಸಾವಿರ ಕೋಟಿ ಲಾಭ ಮಾಡಿದ್ದೇವೆ ಎಂದು ಹೇಳಿದ್ದಾರೆ. ದೇಶದ ಇಂಧನ ಉತ್ಪಾದನೆ ಇತಿಹಾಸದಲ್ಲೇ ರಾಜ್ಯವೊಂದು ಹೆಚ್ಚುವರಿ ವಿದ್ಯುತ್ ಮಾರಾಟ ಮಾಡುತ್ತಿರುವುದು ಇದೇ ಮೊದಲು. ನಾವು ಮಾಡಿದ್ದನ್ನು ಅವರು ರೈತರಿಗೆ ನೀಡಲು ಆಗುತ್ತಿಲ್ಲ.ಇನ್ನು ಎಲ್ಲಿಂದ ತರುತ್ತೀರಿ ಎಂದರೆ, ನಾವು ಇಂಧನ ಸರಬರಾಜಿನಲ್ಲಿ ಆಗುವ ನಷ್ಟ ತಡೆಯಲು ಪ್ರತಿ ತಾಲೂಕಿನಲ್ಲಿ 20-40 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡಲು ವ್ಯವಸ್ಥೆ ಕಲ್ಪಿಸಿದ್ದೇವೆ. ನಾವು ಈ ರಾಜ್ಯವನ್ನು ಬಲಪಡಿಸಿದ್ದೇವೆ. ನಮ್ಮ ಯೋಜನೆ ಬೇರೆ ರಾಜ್ಯಗಳಿಗೆ ಮಾದರಿಯಾಗಿದೆ. ಅವರು 600 ಭರವಸೆಗಳಲ್ಲಿ 50 ಮಾತ್ರ ಈಡೇರಿಸಿದ್ದಾರೆ. ಇನ್ನು ನಮ್ಮ ಸರ್ಕಾರ ಮನೆಯೊಡತಿಗೆ 2000 ರೂ. ನೀಡುವುದಾಗಿ ಘೋಷಿಸಿದೆ. ಈ ಸರ್ಕಾರ ಮೊದಲು 500 ರೂ. ನೀಡುವುದಾಗಿ ಘೋಷಿಸಿ ಈಗ 1000 ರೂ. ನೀಡಲು ತೀರ್ಮಾನಿಸಿದೆ. ಇದು ಮಾತ್ರ ಹೇಗೆ ಸಾಧ್ಯವಾಗುತ್ತದೆ? ಜ.16 ರಂದು ಪತ್ರಿಕೆಗಳಲ್ಲಿ ಬಿಜೆಪಿ ಸರ್ಕಾರ ಗೃಹಿಣಿ ಶಕ್ತಿ ಯೋಜನೆ ಮೂಲಕ ಆರ್ಥಿಕ ನೆರವು ನೀಡುವುದಾಗಿ ಹೇಗೆ ಜಾಹೀರಾತು ನೀಡಿದರು? ಯಾವ ಆಧಾರದ ಮೇಲೆ ಹೇಳಿದರು? ಜನರ ಕಿವಿ ಮೇಲೆ ಕಿವಿ ಹೂವ ಇಡಲು ಘೋಷಣೆ ಮಾಡಿದ್ದಾರಾ? ಬಿಜೆಪಿ ಸರ್ಕಾರ ನುಡಿದಂತೆ ನಡೆಯಲಿಲ್ಲ. ಕಳೆದ ಮೂರು ವರ್ಷಗಳ ಬಜೆಟ್ ಅನ್ನು ಅವರು ಹೇಗೆ ಜಾರಿ ಮಾಡಿದ್ದಾರೆ. ಒಂದು ಸರ್ಕಾರವಾಗಿ ದೇವಸ್ಥಾನ ಕಟ್ಟುತ್ತೇವೆ ಎಂದರೆ ಹೇಗೆ. ದೇವಸ್ಥಾನ ಕಟ್ಟಲು, ಧರ್ಮ ಉಳಿಸಲು ಸಂಘ ಸಂಸ್ಥೆಗಳಿವೆ. ಅಯೋಧ್ಯೆಯಲ್ಲಿ ರಾಮನ ದೇವಾಲಯವನ್ನು ಸರ್ಕಾರ ನಿರ್ಮಾಣ ಮಾಡುತ್ತಿದೆಯೇ? ಇವರು ಭಾವನೆ ಮೂಲಕ ಆಡಳಿತ ಮಾಡುತ್ತಾರ? ನಮ್ಮ ಸರ್ಕಾರ ಬದುಕಿನ ಆಧಾರದ ಮೇಲೆ ಆಡಳಿತ ಮಾಡುತ್ತದೆ. ಈ ವಿಚಾರದಲ್ಲಿ ನಾನು ಆಯನೂರು ಮಂಜುನಾಥ್ ಅವರನ್ನು ಪ್ರಶಂಶಿಸುತ್ತೇನೆ. ಅವರು ಸತ್ಯಾಂಶ ಒಪ್ಪಿಕೊಂಡಿದ್ದಾರೆ. ಅಮಿತ್ ಶಾ ಅವರು ಭ್ರಷ್ಟಾಚಾರ ವಿರುದ್ಧ ಹೋರಾಟ ಮಾಡುವುದಾಗಿ ಹೇಳಿದ್ದಾರೆ. ಅವರು ಮತ್ತೆ ಅಧಿಕಾರಕ್ಕೆ ಬರುವುದಿಲ್ಲ. ಆದರೆ ಈ ಮಾತನ್ನು ಹೇಳುವ ಮೂಲಕ ರಾಜ್ಯದಲ್ಲಿ ಭ್ರಷ್ಟಾಚಾರ ಇದೆ ಎಂಬ ನಮ್ಮ ಆರೋಪಕ್ಕೆ ಅವರು ಅಂಕಿತ ಹಾಕಿದ್ದಾರೆ. ಇದಕ್ಕಾಗಿ ನಾವು ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ’ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ನಡುವೆ ಜಗಳವಾಗುತ್ತಿದೆ, ಕಾಂಗ್ರೆಸ್ ಗೆ ಮತ ಹಾಕಿದರೆ ಹೈಕಮಾಂಡ್ ಗೆ ಎಟಿಎಂ ಕೊಟ್ಟಂತೆ ಎಂಬ ಅಮಿತ್ ಶಾ ಅವರ ಹೇಳಿಕೆ ವಿಚಾರವಾಗಿ ಕೇಳಿದಾಗ, ‘ನಾನು ಸಿದ್ದರಾಮಯ್ಯ ಕೈಕೈ ಮಿಲಾಯಿಸಿ ಜಗಳವಾಡಲು ಕುಸ್ತಿ ಅಖಾಡದಲ್ಲಿ ಇದ್ದೇವಾ? ಜಗಳ, ಕುಸ್ತಿಗಳು ಏನಿದ್ದರೂ ಬಿಜೆಪಿಯಲ್ಲಿದೆ. ಯುದ್ಧ, ಹೇಳಿಕೆ ಸಮರ ನಡೆಯುತ್ತಿರುವುದು ಬಿಜೆಪಿ ಪಕ್ಷದಲ್ಲಿ. ಅವರು ಯಡಿಯೂರಪ್ಪನವರ ಕಣ್ಣಲ್ಲಿ ನೀರು ಹಾಕಿಸಿದ್ದು ಯಾಕೆ? ನಿರಾಣಿ ವಿಚಾರವಾಗಿ ಯತ್ನಾಳ್ ಏನು ಹೇಳಿದರು? ಸರ್ಕಾರದ ಬಗ್ಗೆ ವಿಶ್ವನಾಥ್, ಗೂಳಿಹಟ್ಟಿ ಶೇಖರ್ ಏನು ಹೇಳಿದ್ದಾರೆ? ವಿಧಾನಸೌಧ ಕಾರಿಡಾರ್ ನಲ್ಲಿ ಬಿಜೆಪಿ ಶಾಸಕರು ಏನು ಮಾತನಾಡುತ್ತಿದ್ದಾರೆ? ಯೋಗೇಶ್ವರ್ ಏನು ಹೇಳಿದ್ದಾರೆ? ಮಂಚದ ಮೇಲಿದ್ದ ಮಂತ್ರಿ ಯಾರು ಭ್ರಷ್ಟ ಎಂದು ಹೇಳಿದ? ಎಂಟಿಬಿ ನಾಗರಾಜ್ ಅವರು ಏನು ಹೇಳಿದರು? ಮಾಧ್ಯಮಗಳಲ್ಲಿ ಯಾರ ಸರ್ಕಾರದ ರೇಟ್ ಕಾರ್ಡ್ ಪ್ರಕಟವಾಯಿತು? ಇದು ಸುಳ್ಳಾಗಿದ್ದರೆ ಅದನ್ನು ಸಾಬೀತು ಮಾಡಿ ಅವರ ವಿರುದ್ಧ ಕೇಸ್ ಯಾಕೆ ಹಾಕಿಲ್ಲ? ಇವರಿಗೆ ಭ್ರಷ್ಟಾಚಾರದ ಬಗ್ಗೆ ಚರ್ಚೆ ಮಾಡುವ ಆಸಕ್ತಿ ಇದ್ದರೆ ಅಧಿವೇಶನ ವಿಸ್ತರಣೆ ಮಾಡಿ, ಚರ್ಚೆಗೆ ಅವಕಾಶ ನೀಡಲಿ’ ಎಂದು ತಿರುಗೇಟು ನೀಡಿದರು.

IMG 20230224 WA0031

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ:

ಮನಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರ ದೇಶದ ಬಡವರಿಗೆ ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದು 3 ರೂ. ಬೆಲೆಯಲ್ಲಿ ಅಕ್ಕಿ ನೀಡಲು ನಿರ್ಧರಿಸಿತು. ನಂತರ 2013ರ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬಂದರೆ ಅನ್ನಭಾಗ್ಯ ಯೋಜನೆ ಘೋಷಣೆ ಮಾಡಿದೆವು. ನಾವು ಅಧಿಕಾರಕ್ಕೆ ಬಂದ 24 ಗಂಟೆ ಒಳಗಾಗಿ ಈ ಯೋಜನೆ ಜಾರಿ ಮಾಡಿದೆವು. ಆರಂಭದಲ್ಲಿ ಪ್ರತಿ ಕೆ.ಜಿಗೆ 1 ರೂ. ನಂತೆ 5 ಕೆ.ಜಿ ಅಕ್ಕಿಯಂತೆ ಒಟ್ಟು 30 ಕೆ.ಜಿ ಅಕ್ಕಿ ನೀಡಲಾಗುತ್ತಿತ್ತು. ನಂತರ ಪ್ರತಿ ಕುಟುಂಬದ ಪ್ರತಿ ಸದಸ್ಯರಿಗೆ 7 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡಲು ನಿರ್ಧರಿಸಿದೆವು.

ನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಇದನ್ನು ಮತ್ತೆ 5 ಕೆ.ಜಿಗೆ ಇಳಿಸಿದೆ. ನಾನು ಈ ತೀರ್ಮಾನ ಬೇಡ, ಎಂದು ಸದನದ ಒಳಗೆ ಹಾಗೂ ಹೊರಗೆ ಸರ್ಕಾರಕ್ಕೆ ಆಗ್ರಹ ಮಾಡಿದ್ದೆವು. ಕೋವಿಡ್ ಕಾಲದಲ್ಲಿ ನಮ್ಮ ಉಚಿತ ಅಕ್ಕಿ ಹಾಗೂ ನರೇಗಾ ಕಾರ್ಯಕ್ರಮಗಳು ಜನರ ಬದುಕಿಗೆ ಆಸರೆಯಾಗಿತ್ತು. ಆದರೆ ಈ ಸರ್ಕಾರದ ತೀರ್ಮಾನ ಜನರಿಗೆ ನೋವು ತಂದಿದೆ. ನಾವು ಪ್ರಜಾಧ್ವನಿಯಾತ್ರೆ ಸಂದರ್ಭದಲ್ಲಿ ಜನರು ನೀವು ಅಧಿಕಾರಕ್ಕೆ ಬಂದರೆ ಅಕ್ಕಿ ಪ್ರಮಾಣ ಹೆಚ್ಚಿಸಿ ಎಂದು ಕೇಳಿದರು. ನಂತರ ಪಕ್ಷದ ಎಲ್ಲ ನಾಯಕರು ಚರ್ಚೆ ಮಾಡಿ ತಲಾ 10 ಕೆ.ಜಿಯಂತೆ ಬಿಪಿಎಲ್ ಕಾರ್ಡುದಾರರಿಗೆ ನೀಡಲು ಪಕ್ಷ ತೀರ್ಮಾನಿಸಿದೆ. ಈ ಯೋಜನೆಯನ್ನು ಪಕ್ಷದ ಮೂರನೇ ಗ್ಯಾರಂಟಿ ಯೋಜನೆಯಾಗಿ ಘೋಷಿಸುತ್ತಿದ್ದೇವೆ.

ಬಿಜೆಪಿ ಸರ್ಕಾರದ ಸುಳ್ಳಿನಿಂದ ಬೇಸತ್ತಿರುವ ಜನ ಯಾರನ್ನು ನಂಬಬೇಕು ಎಂದು ತೋಚುತ್ತಿಲ್ಲ. ಹೀಗಾಗಿ ನಮ್ಮ ಯೋಜನೆಯನ್ನು ನಾವು ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಲು ಗ್ಯಾರಂಟಿ ಕಾರ್ಡ್ ಅನ್ನು ಪ್ರತಿ ಮನೆಗೂ ನೀಡುತ್ತಿದ್ದೇವೆ.

ಈಗ ಅಕ್ಕಿ ನೀಡಲು 4-5 ಸಾವಿರ ಕೋಟಿ ಖರ್ಚಾಗುತ್ತಿದ್ದು, ಈಗ 10 ಕೆ.ಜಿ ಹೆಚ್ಚಾಗುವುದರಿಂದ ಹೆಚ್ಚುವರಿಯಾಗಿ 3-4 ಸಾವಿರ ಕೋಟಿ ಹೆಚ್ಚು ವೆಚ್ಚ ತಗುಲಬಹುದು. ರಾಜ್ಯದಲ್ಲಿ ಯಾರೂ ಹಸಿವಿನಿಂದ ಬಳಲಬಾರದು, ಹಸಿವಿನಿಂದ ಮಲಗಬಾರದು ಎಂಬುದು ನಮ್ಮ ಉದ್ದೇಶ.

ಬೊಮ್ಮಾಯಿ ಅವರು ಇದು ಸಿದ್ದರಾಮಯ್ಯ ಅವರ ಕಾರ್ಯಕ್ರಮ ಅಲ್ಲ ಮೋದಿ ಕಾರ್ಯಕ್ರಮ ಎನ್ನುತ್ತಿದ್ದಾರೆ. ಇದು ಮೋದಿ ಅವರ ಕಾರ್ಯಕ್ರಮವಾದರೆ ಗುಜರಾತ್, ಉತ್ತರ ಪ್ರದೇಶ ದಲ್ಲಿ ಉಚಿತ ಅಕ್ಕಿ ನೀಡುತ್ತಿಲ್ಲ ಯಾಕೆ? ಇನ್ನು ದೇಶದಲ್ಲಿ ಆಹಾರ ಭದ್ರತಾ ಕಾಯ್ದೆ ಮೋದಿ ಅವರು ಜಾರಿಗೆ ತಂದರಾ? ಇವರು ಸುಳ್ಳನ್ನು ಹೇಳುವುದನ್ನು ಅಭ್ಯಾಸ ಮಾಡಿಕೊಂಡಿದ್ದು, ಇದಕ್ಕಾಗಿಯೇ ಆರ್ ಎಸ್ ಎಸ್ ನವರು ಇವರನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್:

ಯುಪಿಎ ಸರ್ಕಾರ ಜಾರಿಗೆ ತಂದ ಆಹಾರ ಭದ್ರತಾ ಕಾಯ್ದೆ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅನ್ನ ಭಾಗ್ಯ ಯೋಜನೆ ಜಾರಿಗೆ ತಂದಿದೆ. ನಮ್ಮ ಸರ್ಕಾರ ಕುಟುಂಬ ಸದಸ್ಯರಿಗೆ ತಲಾ 7 ಕೆ.ಜಿ ಅಕ್ಕಿ ನೀಡಲಾಗಿತ್ತು. ಕೋವಿಡ್ ನಂತಹ ಕಷ್ಟದ ಸಮಯದಲ್ಲಿ ನಮ್ಮ ಯೋಜನೆ ಜನರಿಗೆ ನೆರವಾಗಿತ್ತು. ಅವರ ಬದುಕಿಗೆ ದಾರಿ ಮಾಡಿಕೊಟ್ಟಿತತ್ತು. ಇಲ್ಲದಿದ್ದರೆ ರಾಜ್ಯದಲ್ಲಿ ದೊಡ್ಡ ಕೋಲಾಹಲವೇ ಸೃಷ್ಟಿಯಾಗುತ್ತಿತ್ತು.

ಇನ್ನು ಅಮಿತ್ ಶಾ ಅವರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದರೆ ಹೈಕಮಾಂಡ್ ಗೆ ಎಟಿಎಂ ಸಿಕ್ಕಂತಾಗುತ್ತದೆ ಎಂಬ ಬಗ್ಗೆ ಕೇಳಿದ್ದಾರೆ. ರಾಜ್ಯ ಸರ್ಕಾರದ 40% ಕಮಿಷನ್ ಲಂಚ ಯಾರಿಗೆ ಹೋಗುತ್ತದೆ ಎಂಬುದರ ಬಗ್ಗೆ ಅವರು ಉತ್ತರ ನೀಡಲಿ. ಇನ್ನು ನಮ್ಮ ಗ್ಯಾರಂಟಿ ಯೋಜನೆಗಳಿಗೆ ದುಡ್ಡು ಎಲ್ಲಿಂದ ಬರುತ್ತದೆ ಎಂದು ಕೇಳುತ್ತಿದ್ದಾರೆ. ಇವರು ಹೊಡೆಯುತ್ತಿರುವ 40% ಕಮಿಷನ್ ಲೂಟಿ ನಿಲ್ಲಿಸಿದರೆ ಈ ನಮ್ಮ ಯೋಜನೆಗಳಿಗೆ ಹಣ ಸಿಗುತ್ತದೆ. ನಮ್ಮ ಸರ್ಕಾರ ಇದ್ದಾಗ ನಾವು ಕೊಟ 165 ಭರವಸೆಗಳಲ್ಲಿ 158 ಭರವೆಸೆ ಈಡೇರಿಸಿದ್ದೆವು. ಬಿಜೆಪಿ ಸರ್ಕಾರ 600 ಭರವಸೆ ನೀಡಿ ವಲ 50 ಈಡೇರಿಸಿ 550 ಭರವೆಸೆ ಈಡೇರಿಸಿಲ್ಲ. ಇನ್ನು ಅವರು ಮಂಡಿಸಿರುವ ಬಜೆಟ್ ಗಳನ್ನು ಕೂಡ ಪರಿಣಾಮಕಾರಿಯಾಗಿ ಜಾರಿಗೆ ತರಲು ಅವರು ವಿಫಲರಾಗಿದ್ದಾರೆ.