IMG 20230309 WA0048

ಕರ್ನಾಟಕ ವಿಧಾನಸಭಾ ಚುನಾವಣೆ-2023: ಮುಖ್ಯ ಚುನಾವಣಾ ಆಯುಕ್ತರ ತಂಡ ಆಗಮನ…!

Genaral STATE

ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023
ಚುನಾವಣಾ ಪೂರ್ವತಯಾರಿ ಪರಿವೀಕ್ಷಣೆಗೆ ಆಗಮಿಸಿದ ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದ ತಂಡ

IMG 20230309 WA0049

ಬೆಂಗಳೂರು, ಮಾ.09(ಕರ್ನಾಟಕ ವಾರ್ತೆ): ಮುಂಬರುವ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ – 2023 ರ ಪೂರ್ವ ತಯಾರಿ ಪರಿವೀಕ್ಷಣೆ ನಡೆಸಲು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ನೇತೃತ್ವದ ಹಿರಿಯ ಅಧಿಕಾರಿಗಳ ತಂಡ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ಬಂದಿಳಿಯಿತು.

IMG 20230309 WA0052


ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ಅವರ ತಂಡದಲ್ಲಿ ಚುನಾವಣಾ ಆಯುಕ್ತರುಗಳಾದ ಅನೂಪ್ ಚಂದ್ರಪಾಂಡೆ, ಅರುಣ್ ಗೋಯಲ್ ಹಾಗೂ ಉಪ ಆಯುಕ್ತರುಗಳು ಸೇರಿದಂತೆ ಆಯೋಗದ ಹಿರಿಯ ಅಧಿಕಾರಿಗಳು ಈ ತಂಡದಲ್ಲಿದ್ದಾರೆ.
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ , ಚುನಾವಣಾ ಆಯುಕ್ತರುಗಳಾದ ಅನೂಪ್ ಚಂದ್ರಪಾಂಡೆ, ಅರುಣ್ ಗೋಯಲ್ ಹಾಗೂ ಉಪ ಆಯುಕ್ತರುಗಳನ್ನು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳಾದ ಮನೋಜ್ ಕುಮಾರ್‌ ಮೀನಾ ಅವರು ಸ್ವಾಗತಿಸಿದರು.

IMG 20230309 WA0053


ಈ ಸಂದರ್ಭದಲ್ಲಿ ಬಿಬಿಎಂಪಿ ಮುಖ್ಯ ಚುನಾವಣಾಧಿಕಾರಿಗಳಾಗಿರುವ ಬಿಬಿಎಂಪಿ ಆಯುಕ್ತ ತುಷಾರ ಗಿರಿನಾಥ, ಡಿಜಿಪಿ ಮತ್ತು ಐಜಿ ಪ್ರವೀಣ್ ಸೂದ್, ಕರ್ನಾಟಕ ಅಪರ ಮುಖ್ಯ ಚುನಾವಣಾಧಿಕಾರಿಗಳಾದ ಆರ್. ವೆಂಕಟೇಶಕುಮಾರ್, ರಾಜೇಂದ್ರ ಚೋಳನ್,
ಬೆಂಗಳೂರು ‌ಗ್ರಾಮಾಂತರ ಜಿಲ್ಲಾಧಿಕಾರಿ ಲತಾ ಹಾಗೂ ಇತರರು ಇದ್ದರು.

–+