ಭಾರತ ಭವಿಷ್ಯದಲ್ಲಿ ಕಾಂಗ್ರೆಸ್ ಮುಕ್ತವಾಗಲಿದೆ: ಯಡಿಯೂರಪ್ಪ
ಬೆಂಗಳೂರು: ಭಾರತ ಭವಿಷ್ಯದಲ್ಲಿ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶ್ವಾಸದಿಂದ ನುಡಿದರು.
ಬಾಗಲಕೋಟೆಯಲ್ಲಿ ವಿಜಯ ಸಂಕಲ್ಪ ಯಾತ್ರೆಯ ಸಭೆಯಲ್ಲಿ ಮಾತನಾಡಿದ ಅವರು, ತಬ್ಬಲಿಯಾಗಿರುವ ಕಾಂಗ್ರೆಸ್ ಪಕ್ಷದವರು ನರೇಂದ್ರ ಮೋದಿಯವರಿಗೆ ಹೇಗೆ ಸಮ ಎಂದರಲ್ಲದೆ, ಮೂರು ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಸೋತು ಸುಣ್ಣವಾಗಿದೆ. ಕರ್ನಾಟಕದಲ್ಲಿ ಪಕ್ಷವನ್ನ ಸಂಘಟಿಸಿ ಅಧಿಕಾರಕ್ಕೆ ತರುವುದೇÉ ನನ್ನ ಗುರಿ ಎಂದರು.
ರಾಜ್ಯದಲ್ಲಿ 140 ಕ್ಕೂ ಅಧಿಕ ಸ್ಥಾನ ಗೆಲ್ಲಲು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುವೆ. ಅಧಿಕಾರದ ಕುರ್ಚಿಗಾಗಿ ಅಂಟಿಕೊಂಡ ವ್ಯಕ್ತಿಯಲ್ಲ. ಇನ್ನೊಬ್ಬರಿಗೆ ಅವಕಾಶ ನೀಡುವ ಉದ್ದೇಶದಿಂದ ನಾನು ಅಧಿಕಾರವನ್ನು ಸ್ವಯಂ ಸ್ಪೂರ್ತಿಯಿಂದ ಬಿಟ್ಟಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ಮೀಸಲಾತಿ ಹೆಚ್ಚಿಸಿದೆ. ಸದಾ ಸಾಮಾಜಿಕ ನ್ಯಾಯದ ಪರವಾಗಿದೆ. ಸರ್ವತೋಮುಖ ಅಭಿವೃದ್ಧಿಯೇ ಪಕ್ಷದ ಗುರಿ ಎಂದರಲ್ಲದೆ, ಮತದಾರರು ಬಿಜೆಪಿ ಪರ ಮತದಾನ ಮಾಡಲಿದ್ದಾರೆ ಎಂದರು.
ಕೇಂದ್ರ ಸಚಿವ ವಿ.ಕೆ.ಸಿಂಗ್ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜನಪರ ಜನಸಾಮನ್ಯರ ಹಾಗೂ ದೀನ ದಲಿತರ ಪರವಾಗಿ ಮಾಡಿರುವ ಉತ್ತಮ ಕಾರ್ಯದಿಂದ ಮತ್ತೆ ತಮ್ಮ ಆಶೀರ್ವಾದದಿಂದ ಅಧಿಕಾರಕ್ಕೆ ಬರಲಿದೆ ಎಂದರು.
ಬೃಹತ್ ನೀರಾವರಿ ಸಚಿವ ಗೋವಿಂದ ಕಾರಜೋಳ ಮಾತನಾಡಿ, ಕಾಂಗ್ರೆಸ್ ಪಕ್ಷವನ್ನ ಮತದಾರರೆಲ್ಲರೂ ಸೇರಿ ಗುಜರಿಗೆ ಹಾಕಿದ್ದಾರೆ. ಮೋದಿಜಿಯವರ ಕೊಟ್ಟ ಅಕ್ಕಿಯನ್ನ ನಾನೆ ಕೊಟ್ಟೆ ಎನ್ನುವ ಸಿದ್ದರಾಮಯ್ಯನವರೆ ನಿಮ್ಮದು ಅಕ್ಕಿ ಹಾಕೊ ತಟ್ಟೆ ಮಾತ್ರ ನಿಮ್ಮದು ಅಕ್ಕಿ ಕೇಂದ್ರ ಸರ್ಕಾರದ್ದು. ಕಾಂಗ್ರೆಸ್ ಪಕ್ಷದಿಂದ ದಿನ ದಲಿತರನ್ನೆಲ್ಲ ಮೂಲೆಗುಂಪು ಮಾಡುವ ಕೆಲಸ ನಡೆಯುತ್ತಿದೆ. ಅದಕ್ಕಾಗಿ ಕಾಂಗ್ರೆಸ್ ದಲಿತ ವಿರೋಧಿ ಪಕ್ಷ. ಆ ಪಕ್ಷದ ಸುಳ್ಳಿನ ಮುಖವಾಡ ಜನಕ್ಕೆ ಅರ್ಥವಾಗುತ್ತಿರುವದರಿಂದ ಜನರೇ ಅವರಿಗೆ ಪಾಠ ಕಲಿಸಿದ್ದಾರೆ ಎಂದು ತಿಳಿಸಿದರು.
ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, 5 ಸಾವಿರದ 5 ನೂರು ಕೋಟಿ ರೂಪಾಯಿ ಅನುದಾನದಲ್ಲಿ ಕ್ಷೇತ್ರದ ಅಭಿವೃದ್ಧಿ ಮಾಡಲಾಗಿದೆ. ಕೆಲವರಿಗೆ ಆ ಅಭಿವೃದ್ಧಿ ಕೆಲಸ ಕಾಣದೆ ತಪ್ಪುಗಳನ್ನೆ ಹುಡಕುವುÀದೆ ಕೆಲಸವಾಗಿದೆ ಅವರನ್ನ ಹದ್ದುಬಸ್ತಿನಲ್ಲಿ ಇಡಬೇಕಾಗಿದೆ ಎಂದರು.
ಸಂಸದ ಪಿ.ಸಿ.ಗದ್ದಿಗೌಡರ ಮಾತನಾಡಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಮುಂತಾದವರು ಉಪಸ್ಥಿತರಿದ್ದರು.